ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಎ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಲಿದೆ ಕೇರಳ ಸರ್ಕಾರ

|
Google Oneindia Kannada News

ತಿರುವನಂತಪುರಂ, ಜನವರಿ 14: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಪೌರತ್ವ ತಿದ್ದುಪಡಿ ಕಾಯ್ದೆಗೆ ಕೇರಳ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು ಸುಪ್ರೀಂಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ.

ಕೇರಳದಲ್ಲಿ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶ ನೀಡುವುದಿಲ್ಲ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಕೇರಳ ಜಾತ್ಯತೀತೆ ಬಗ್ಗೆ ಧೀರ್ಘ ಇತಿಹಾಸವಿದೆ.

ಸಿಎಎ ಕುರಿತು ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ ಹೇಳಿದ್ದೇನು?ಸಿಎಎ ಕುರಿತು ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ ಹೇಳಿದ್ದೇನು?

ಗ್ರೀಕ್ಸ್, ರೋಮಾನ್ಸ್, ಅರಬ್ಸ್, ಪ್ರತಿಯೊಬ್ಬರು ಈ ನೆಲಕ್ಕೆ ಬಂದಿದ್ದಾರೆ. ಕ್ರಿಶ್ಚಿಯನ್ ಮತ್ತು ಮುಸ್ಲಿಂರು ಆರಂಭದಿಂದಲೂ ಇದ್ದಾರೆ. ಎಲ್ಲರನ್ನು ಒಳ್ಳಗೊಳ್ಳುವಿಕೆ ನಮ್ಮ ಸಂಪ್ರದಾಯವಾಗಿದೆ. ನಮ್ಮ ವಿಧಾನಸಭೆಯು ಸಂಪ್ರದಾಯವನ್ನು ಉಳಿಸಬೇಕಾದ ಅಗತ್ಯವಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದರು.

Kerala Govt Moves Supreme Court Against CAA

ಇದೀಗ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಮುಂದಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅನುಷ್ಠಾನಗೊಳಿಸುವುದಿಲ್ಲ ಎಂದು ಹೇಳಿರುವ ರಾಜ್ಯಗಳ ಪೈಕಿ ಕೇರಳ ಒಂಬತ್ತನೇ ರಾಜ್ಯವಾಗಿದೆ.

ಆದರೆ ಸಿಎಎ ವಿರೋಧಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಮೊದಲ ರಾಜ್ಯ ಕೇರಳವಾಗಿದೆ. ಸಿಎಎಯು ಸಮಾನತೆಯ ವಿರುದ್ಧವಾದ ಕಾಯ್ದೆಯಾಗಿದೆ ಯಾವುದೇ ಕಾರಣಕ್ಕೂ ನಾವು ಅದನ್ನು ಬೆಂಬಲಿಸುವುದಿಲ್ಲ ಎಂದು ತಿಳಿಸಿದೆ.

English summary
The Kerala govt has challenged the Citizenship Act in Supreme Court, making it the first state to move file a petition against CAA.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X