ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳದಲ್ಲಿ ಮಂಕಿಪಾಕ್ಸ್ ಸೋಂಕಿಗೆ ಮೊದಲ ಸಾವು; ತನಿಖೆ ಚುರುಕು

|
Google Oneindia Kannada News

ತಿರುವನಂತಪುರಂ, ಆಗಸ್ಟ್ 01: ಕೇರಳದ ದಕ್ಷಿಣ ಭಾಗದಲ್ಲಿ ಮಂಕಿಪಾಕ್ಸ್ ಸೋಂಕಿನ ಲಕ್ಷಣವುಳ್ಳ ವ್ಯಕ್ತಿಯೊಬ್ಬನ ಸಾವಿನ ಕುರಿತು ರಾಜ್ಯ ಆರೋಗ್ಯ ಇಲಾಖೆಯು ಉನ್ನತ ಮಟ್ಟದ ತನಿಖೆಯನ್ನು ಪ್ರಾರಂಭಿಸಿದೆ. ವ್ಯಕ್ತಿಯ ಸಾವಿಗೆ ಮಂಕಿಪಾಕ್ಸ್ ಕಾರಣವೆಂದು ದೃಢಪಟ್ಟಲ್ಲಿ ಇದು ದೇಶದಲ್ಲಿ ಮೊದಲ ಮಂಕಿಪಾಕ್ಸ್ ರೋಗಿಯ ಸಾವಿನ ಪ್ರಕರಣವಾಗಲಿದೆ.

ತ್ರಿಶೂರ್ ಜಿಲ್ಲೆಯ ಚಾವಕ್ಕಾಡ್ ಕುರಂಜಿಯೂರ್ ಮೂಲದ ಯುವಕನನ್ನು ವಿದೇಶದಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಂಕಿಪಾಕ್ಸ್ ಪಾಸಿಟಿವ್ ವರದಿ ಬಂದಿತ್ತು ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಅಲ್ಲದೇ ಚಿಕಿತ್ಸೆ ಪಡೆಯಲು ವಿಳಂಬವಾದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಚಿಂತೆ ಬಿಡಿ: ಭಾರತದ ಮೊದಲ ಮಂಕಿಪಾಕ್ಸ್ ರೋಗಿ ಗುಣಮುಖಚಿಂತೆ ಬಿಡಿ: ಭಾರತದ ಮೊದಲ ಮಂಕಿಪಾಕ್ಸ್ ರೋಗಿ ಗುಣಮುಖ

"ವಿದೇಶದಲ್ಲಿ ನಡೆಸಿದ ಪರೀಕ್ಷೆಯ ಫಲಿತಾಂಶವು ಪಾಸಿಟಿವ್ ಎಂಬುದು ಗೊತ್ತಾಗಿತ್ತು. ಇದರ ಮಧ್ಯೆ ತೀವ್ರ ಆಯಾಸ ಮತ್ತು ಮೆದುಳು ಜ್ವರದಿಂದ ಯುವಕನು ತ್ರಿಶೂರ್‌ನಲ್ಲಿ ಚಿಕಿತ್ಸೆ ಪಡೆದರು. ಆದರೆ ಮಂಕಿಪಾಕ್ಸ್ ಎಂಬುದು ಮಾರಣಾಂತಿಕ ಕಾಯಿಲೆಯಲ್ಲ," ಎಂದು ಜಾರ್ಜ್ ಹೇಳಿದ್ದಾರೆ. ಈ ನಿಟ್ಟಿನಲ್ಲಿ ತ್ರಿಶೂರಿನ ಪುನ್ನಯೂರಿನಲ್ಲಿ ಸಭೆ ನಡೆಯಲಿದೆ.

ಸೋಂಕಿನ ವ್ಯಕ್ತಿಯ ಸಂಪರ್ಕಿತರ ಪತ್ತೆ

ಸೋಂಕಿನ ವ್ಯಕ್ತಿಯ ಸಂಪರ್ಕಿತರ ಪತ್ತೆ

ಕೇರಳದಲ್ಲಿ ಮಂಕಿಪಾಕ್ಸ್ ಸೋಂಕಿತ ವ್ಯಕ್ತಿಯ ಸಾವಿನ ಹಿನ್ನೆಲೆ ಕೇರಳ ಸರ್ಕಾರ ಮತ್ತಷ್ಟು ಅಲರ್ಟ್ ಆಗಿದೆ. "ಮಂಕಿಪಾಕ್ಸ್ ಸೋಂಕಿತ ವ್ಯಕ್ತಿಯ ಜೊತೆಗಿನ ಪ್ರಾಥಮಿಕ ಸಂಪರ್ಕ ಹೊಂದಿದವರು ಮತ್ತು ಆತ ಸಂಚರಿಸಿದ ಮಾರ್ಗದ ಕುರಿತು ನಕ್ಷೆ ಸಿದ್ಧಪಡಿಸಲಾಗುತ್ತಿದೆ. ಮೃತ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಪಟ್ಟಿ ಮಾಡಿ ಐಸೋಲೇಷನ್ ನಲ್ಲಿ ಇರಿಸಲಾಗುತ್ತದೆ" ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.

ದೇಶದಲ್ಲಿ ಐದು ಮಂಕಿಪಾಕ್ಸ್ ಸೋಂಕಿತ ಪ್ರಕರಣ ಪತ್ತೆ

ದೇಶದಲ್ಲಿ ಐದು ಮಂಕಿಪಾಕ್ಸ್ ಸೋಂಕಿತ ಪ್ರಕರಣ ಪತ್ತೆ

ಜಾಗತಿಕ ಮಟ್ಟದಲ್ಲಿ ಈಗಾಗಲೇ ಭೀತಿ ಹುಟ್ಟು ಹಾಕಿರುವ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಭಾರತದಲ್ಲೂ ನಿಧಾನವಾಗಿ ಹೆಚ್ಚುತ್ತಿದೆ. ದೇಶದಲ್ಲಿ ಇದುವರೆಗೂ 5 ಮಂಕಿಪಾಕ್ಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಕೇರಳದಲ್ಲಿ ಮೂರು ಪ್ರಕರಣಗಳು ವರದಿಯಾಗಿದ್ದರೆ, ದೆಹಲಿಯಲ್ಲಿ ಒಂದು ಮತ್ತು ಆಂಧ್ರಪ್ರದೇಶದ ಗುಂಟೂರಿನಲ್ಲಿ ಒಬ್ಬ ವ್ಯಕ್ತಿಗೆ ಮಂಕಿಪಾಕ್ಸ್ ತಗುಲಿರುವುದು ದೃಢಪಟ್ಟಿದೆ.

ಕೇಂದ್ರದಿಂದ ರಾಜ್ಯಗಳಿಗೆ ರವಾನೆ ಆಯ್ತು ಮುನ್ನೆಚ್ಚರಿಕೆ ಕ್ರಮ

ಕೇಂದ್ರದಿಂದ ರಾಜ್ಯಗಳಿಗೆ ರವಾನೆ ಆಯ್ತು ಮುನ್ನೆಚ್ಚರಿಕೆ ಕ್ರಮ

ಮಂಕಿಪಾಕ್ಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯಗಳಿಗೆ ಕೇಂದ್ರ ಸರ್ಕಾರವು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಮಂಕಿಪಾಕ್ಸ್ ರೋಗವನ್ನು ನಿಯಂತ್ರಿಸುವುದಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸೋಂಕಿನ ಬಗ್ಗೆ ಯಾವುದೇ ರೀತಿ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ ವಿಕೆ ಪಾಲ್ ಹೇಳಿದ್ದಾರೆ.

ಜಗತ್ತಿನ 78 ರಾಷ್ಟ್ರಗಳಲ್ಲಿ ಮಂಕಿಪಾಕ್ಸ್ ಸೋಂಕು

ಜಗತ್ತಿನ 78 ರಾಷ್ಟ್ರಗಳಲ್ಲಿ ಮಂಕಿಪಾಕ್ಸ್ ಸೋಂಕು

ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಮಾಹಿತಿ ಪ್ರಕಾರ, ಜಗತ್ತಿನ 78 ರಾಷ್ಟ್ರಗಳಲ್ಲಿ ಸೇರಿ 18,000ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. "ತಮಗೆ ಸೋಂಕು ತಗುಲಿರುವ ಬಗ್ಗೆ ದೇಶಗಳು, ಸಮುದಾಯಗಳು ಮತ್ತು ಜನರು ಸ್ವಯಂಪ್ರೇರಿತರಾಗಿ ಮಾಹಿತಿ ನೀಡಿದರೆ ಹಾಗೂ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ, ಮಂಕಿಪಾಕ್ಸ್ ಸೋಂಕು ಹರಡುವಿಕೆಯನ್ನು ತಕ್ಷಣಕ್ಕೆ ತಡೆಯುವುದಕ್ಕೆ ಸಾಧ್ಯವಿದೆ," ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ ಟೆಡ್ರೊಸ್ ಗೆಬ್ರೆಯೆಸಸ್ ಹೇಳಿದ್ದಾರೆ.

ಮಂಕಿಪಾಕ್ಸ್ ಒಂದು ಝೂನೋಟಿಕ್ ಕಾಯಿಲೆಯಾಗಿದ್ದು, ಸಿಡುಬುಗೆ ಕಾರಣವಾಗುವ ವೈರಸ್‌ಗಳ ಒಂದೇ ಕುಟುಂಬಕ್ಕೆ ಸೇರಿದೆ. ಈ ರೋಗವು ಪಶ್ಚಿಮ ಮತ್ತು ಮಧ್ಯ ಆಫ್ರಿಕಾದಂತಹ ಪ್ರದೇಶಗಳಲ್ಲಿ ಸ್ಥಳೀಯವಾಗಿದೆ. ಆದರೆ ಇತ್ತೀಚೆಗೆ, ಆಸ್ಟ್ರೇಲಿಯಾ, ಯುಕೆ ಮತ್ತು ಯುಎಸ್ ಸೇರಿದಂತೆ ಇತರೆ ರಾಷ್ಟ್ರಗಳಲ್ಲೂ ಹೆಚ್ಚಾಗುತ್ತಿದೆ.

ಮಂಕಿಪಾಕ್ಸ್ ರೋಗಿಗಳಲ್ಲಿ ಮೈ-ಕೈ ನೋವು ಮತ್ತು ದದ್ದು

ಮಂಕಿಪಾಕ್ಸ್ ರೋಗಿಗಳಲ್ಲಿ ಮೈ-ಕೈ ನೋವು ಮತ್ತು ದದ್ದು

ಮಂಕಿಪಾಕ್ಸ್ ಹೊಂದಿರುವ ಸೋಂಕಿತರಲ್ಲಿ ಸಾಮಾನ್ಯವಾಗಿ ಜ್ವರ, ಮೈ-ಕೈ ನೋವು ಮತ್ತು ದದ್ದುಗಳಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ಸೋಂಕಿತರಲ್ಲಿ ಬಹುಪಾಲು ಮಂದಿಯು ಒಂದು ವಾರದಲ್ಲೇ ಚೇತರಿಸಿಕೊಂಡಿದ್ದಾರೆ. 1958ರಲ್ಲಿ ಮೊದಲ ಬಾರಿಗೆ ಮಂಗಗಳಲ್ಲಿ ಈ ಸೋಂಕು ಪತ್ತೆಯಾಗಿದ್ದು, ಹೀಗಾಗಿ ಇದನ್ನು ಮಂಕಿಪಾಕ್ಸ್ ಎಂದು ಕರೆಯಲಾಗುತ್ತದೆ.

English summary
Kerala Govt Started initiates probe into death of youth with monkeypox symptoms. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X