• search
  • Live TV
ತಿರುವನಂತಪುರಂ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೇರಳಲ್ಲಿ ಇಂದು ಒಂದೂ ಕೊರೊನಾ ವೈರಸ್‌ ಪ್ರಕರಣ ಇಲ್ಲ!

|

ತಿರುವನಂತಪುರಂ, ಮೇ 07: ಕೊರೊನಾ ವೈರಸ್ ಹರಡುವುದನ್ನು ಅತ್ಯಂತ ಪರಿಣಾಮಕಾರಿಯಾಗಿ ತಡೆಯುವಲ್ಲಿ ಕೇರಳ ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಇವತ್ತೂ ಕೂಡ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಕೇರಳ ರಾಜ್ಯಾದ್ಯಂತ ಪತ್ತೆಯಾಗಿಲ್ಲ ಎಂದು ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್ ತಿಳಿಸಿದ್ದಾರೆ.

ಕೇರಳದಲ್ಲಿ ಗುರುವಾರ ಯಾರಿಗೂ ಕೋವಿಡ್ 19 ದೃಡಪಟ್ಟಿಲ್ಲ ಎಂದು ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್ ಹೇಳಿದ್ದಾರೆ. ರಾಜ್ಯದಲ್ಲಿ ಸತತವಾಗಿ ಮೇ 1, 3, 4, 6 ಮತ್ತು 7 ರಂದು ಹೀಗೆ 5 ದಿನ ಕೊರೊನಾ ವೈರಸ್ ಸೋಂಕು ಪತ್ತೆಯಾಗಿಲ್ಲ. ಇವತ್ತು ಶಂಕಿತ 5 ಜನರ ತಪಾಸಣಾ ಫಲಿತಾಂಶ ನಕಾರಾತ್ಮಕವಾಗಿದೆ. ಕಣ್ಣೂರು ಜಿಲ್ಲೆಯ ಮೂವರು ಮತ್ತು ಕಾಸರಗೋಡ್ ಜಿಲ್ಲೆಯ 2 ಮಂದಿಯ ತಪಾಸಣೆಯ ಫಲಿತಾಂಶಗಳು ನಕಾರಾತ್ಮಕವಾಗಿವೆ. ಕೋವಿಡ್‌ನಿಂದ ಈವರೆಗೆ 474 ಜನರು ಗುಣಮುಖರಾಗಿದ್ದಾರೆ. ಪ್ರಸ್ತುತ ರಾಜ್ಯದಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಸುಮಾರು 25 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 16,693 ಜನರು ನಿರೀಕ್ಷಣೆಯಲ್ಲಿದ್ದಾರೆ. ಈ ಪೈಕಿ 16,383 ಜನರು ಮನೆಗಳಲ್ಲಿ ಮತ್ತು 310 ಜನರು ಆಸ್ಪತ್ರೆಗಳಲ್ಲಿ ಪತ್ಯೇಕವಾಗಿದ್ದಾರೆ. ಒಟ್ಟು 131 ಜನರನ್ನು ಗುರುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿಯವರೆಗೆ, 35,171 ವ್ಯಕ್ತಿಗಳ (ಓಗ್ಮೆಂಟೆಡ್ ಮಾದರಿ ಸೇರಿದಂತೆ) ಮಾದರಿಯನ್ನು ಪರಿಶೀಲನೆಗಾಗಿ ಕಳುಹಿಸಲಾಗಿದೆ. ಇದರಲ್ಲಿ ಲಭ್ಯವಾದ 34,519 ಮಾದರಿಗಳ ತಪಾಸಣಾ ಫಲಿತಾಂಶ ನಕಾರಾತ್ಮಕವಾಗಿವೆ. ಇದಲ್ಲದೆ, ಸೆಂಟಿನೆಲ್ ಸರ್ವೈಲೆನ್ಸ್ ನ ಭಾಗವಾಗಿ ಆರೋಗ್ಯ ಕಾರ್ಯಕರ್ತರು, ಅತಿಥಿ ಕೆಲಸಗಾರರು, ಸಾಮಾಜಿಕ ಸಂಪರ್ಕ ಹೆಚ್ಚಾಗಿರುವ ವ್ಯಕ್ತಿಗಳ ಆದ್ಯತೆಯ ಗುಂಪುಗಳಿಂದ 3035 ಮಾದರಿಗಳನ್ನು ಸಂಗ್ರಹಿಸಲಾಗಿರುವುದರಲ್ಲಿ 2337 ಮಾದರಿಗಳು ನಕಾರಾತ್ಮಕವಾಗಿವೆ.

ರಾಜ್ಯದಲ್ಲಿ ಹೊಸ ಹಾಟ್ ಸ್ಪಾಟ್‌ಗಳಿಲ್ಲ. ಆದೇ ಸಮಯ, 56 ಪ್ರದೇಶಗಳನ್ನು ಹಾಟ್‌ಸ್ಪಾಟ್‌ನಿಂದ ಹೊರಗಿಡಲಾಗಿದೆ. ರಾಜ್ಯದಲ್ಲಿ ಪ್ರಸ್ತುತ 33 ಹಾಟ್‌ಸ್ಪಾಟ್‌ಗಳಿವೆ ಎಂದು ತಿಳಿಸಿದ್ದಾರೆ.

English summary
The Kerala government has taken another step forward in effectively preventing the spread of coronavirus. Even today, cases of coronavirus infection have not been detected across Kerala, Health Minister K.K. Shailaja Teacher said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X