ಶಬರಿಮಲೆ ಕೋವಿಡ್ ಪರೀಕ್ಷೆ ಕ್ರಮ: ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೊಂಚ ನಿರಾಳ
ಕೊಚ್ಚಿ, ಡಿಸೆಂಬರ್ 30: ಶಬರಿಮಲೆಯಲ್ಲಿ ಮಕರವಿಳಕ್ಕು ಅವಧಿಯಲ್ಲಿ ಭಕ್ತರು ನೀಡುವ ರಿಯಲ್ ಟೈಮ್ ಆರ್‌ಟಿ-ಲ್ಯಾಂಪ್ ಮತ್ತು ಎಕ್ಸ್‌ಪ್ರೆಸ್ ನ್ಯಾಟ್ ಕೋವಿಡ್ ಪರೀಕ್ಷೆಯ ಪ್ರಮಾಣಪತ್ರಗಳನ್ನು ಕೂಡ ಸ್ವೀಕರಿಸಬೇಕು ಎಂದು ಕೇರಳ ಹೈಕೋರ್ಟ್ ಸೂಚನೆ ನೀಡಿದೆ. ಇದುವರೆಗೂ ಕೇರಳ ಸರ್ಕಾರದ ಉನ್ನತ ಮಟ್ಟದ ಸಮಿತಿಯು ಯಾತ್ರೆಗೆ ಬರುವ ಭಕ್ತರು ಡಿಸೆಂಬರ್ 30ರಿಂದ ಆರ್‌ಟಿ- ಪಿಸಿಆರ್ ಮಾದರಿಯ ಪರೀಕ್ಷೆಗೆ ಕಡ್ಡಾಯವಾಗಿ ಒಳಪಟ್ಟು ಕೊರೊನಾ ವೈರಸ್ ನೆಗೆಟಿವ್ ವರದಿಯನ್ನು ತರುವಂತೆ ನಿರ್ದೇಶಿಸಿತ್ತು.
'ರಿಯಲ್ ಟೈಮ್ ಆರ್‌ಟಿ ಲ್ಯಾಂಪ್ ಕೋವಿಡ್ ಟೆಸ್ಟ್ ಕಿಟ್'ಅನ್ನು ಅಧಿಕೃತವಾಗಿ ಉತ್ಪಾದಿಸುವ ಪರವಾನಗಿ ಹೊಂದಿರುವ ಎರ್ನಾಕುಲಂ ಮೂಲದ ಕಂಪೆನಿಯೊಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ದೇವಸ್ವಂ ಪೀಠ ಈ ಆದೇಶ ನೀಡಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು (ಐಸಿಎಂಆರ್) ತನ್ನ ಕೋವಿಡ್ ಪರೀಕ್ಷೆಯ ಉತ್ಪನ್ನವನ್ನು ಅನುಮೋದಿಸಿದೆ ಎಂದು ಕಂಪೆನಿ ಅರ್ಜಿಯಲ್ಲಿ ಹೇಳಿದೆ. ಶಬರಿಮಲೆ ಯಾತ್ರೆಯ ಕುರಿತಾದ ಪರಿಷ್ಕೃತ ಆರೋಗ್ಯ ಸಲಹಾಸೂಚಿ ಕೂಡ ಕೋವಿಡ್-19ರ ಪತ್ತೆಗೆ ರಿಯಲ್ ಟೈಮ್ ಆರ್‌ಟಿ-ಲ್ಯಾಂಪ್ ಕೋವಿಡ್-19 ಪರೀಕ್ಷೆಯ ಶಿಫಾರಸು ನೀಡಿದೆ ಎಂದು ಅದು ಹೇಳಿತ್ತು. ಇದನ್ನು ಪರಿಗಣಿಸಿರುವ ಹೈಕೋರ್ಟ್ ಪೀಠ, ಆರ್‌ಟಿ-ಲ್ಯಾಂಪ್ ಪರೀಕ್ಷೆಯ ಜತೆಗೆ, ಆರೋಗ್ಯ ಇಲಾಖೆ ಶಿಫಾರಸು ಮಾಡಿರುವಂತೆ ಎನ್‌ಎಬಿಎಲ್ ಅನುದಾನಿತ, ಐಸಿಎಂಆರ್ ಅನುಮೋದಿತ ಲ್ಯಾಬೊರೇಟರಿಗಳಲ್ಲಿ ಎಕ್ಸ್‌ಪ್ರೆಸ್ ನ್ಯಾಟ್ ಪರೀಕ್ಷೆಯ ಪ್ರಮಾಣಪತ್ರ ಕೂಡ ಹಾಜರುಪಡಿಸಬಹುದು ಎಂದು ಆದೇಶದಲ್ಲಿ ತಿಳಿಸಿದೆ.

ಶಬರಿಮಲೆ ಯಾತ್ರೆಗೆ ಆಗಮಿಸುವ ಭಕ್ತರು ನಿಳಕ್ಕಳ್‌ಗೆ ಬಂದ 48 ಗಂಟೆಗಳ ಒಳಗಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಿ ನೆಗೆಟಿವ್ ವರದಿ ಪಡೆದುಕೊಳ್ಳಬೇಕಿದೆ. ಆಂಟಿಜೆನ್ ಮಾದರಿಯನ್ನು ಅಂತಿಮ ಪರೀಕ್ಷೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications