ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳ: ಇಡುಕ್ಕಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 52ಕ್ಕೆ ಏರಿಕೆ

|
Google Oneindia Kannada News

ತಿರುವನಂತಪುರಂ, ಆಗಸ್ಟ್.11: ಕೇರಳದ ಇಡುಕ್ಕಿಯ ರಾಜಮಾಲಾದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ. ಸ್ಥಳದಲ್ಲಿ ಮಂಗಳವಾರ ಮತ್ತೆ ಮೂವರ ಮೃತದೇಹಗಳನ್ನು ಕಾರ್ಯಾಚರಣೆ ನಡೆಸಿ ಹೊರ ತೆಗೆಯಲಾಗಿದೆ.

ಎರಡು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಇಡುಕ್ಕಿಯ ಅಗ್ನಿಶಾಮಕ ದಳ ಮತ್ತು ರಕ್ಷಣಾ ಕಾರ್ಯಪಡೆಯು ಕಾರ್ಯಾಚರಣೆ ನಡೆಸುತ್ತಿವೆ. ಕೊಟ್ಟಾಯಂ, ತಿರುವನಂತಪುರಂನಿಂದ ಒಂದೊಂದು ರಕ್ಷಣಾ ಪಡೆಯನ್ನು ರಾಜಮಾಲಾದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುವುದಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಇಡುಕ್ಕಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಉಡುಪಿಯಲ್ಲಿ ಮಳೆ ಹಾನಿ ಪರಿಹಾರಕ್ಕೆ 10 ಕೋಟಿ ರೂ ಬಿಡುಗಡೆ; ಗೃಹ ಸಚಿವಉಡುಪಿಯಲ್ಲಿ ಮಳೆ ಹಾನಿ ಪರಿಹಾರಕ್ಕೆ 10 ಕೋಟಿ ರೂ ಬಿಡುಗಡೆ; ಗೃಹ ಸಚಿವ

ಭೂಕುಸಿತದಲ್ಲಿ ಪ್ರಾಣಬಿಟ್ಟ ಪ್ರತಿಯೊಬ್ಬರಿಗೂ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಘೋಷಿಸಿದ್ದಾರೆ.

Kerala: Idukki Landslide Death Toll Rises To 52

ಕೇಂದ್ರ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರ:

ರಾಜಮಾಲಾದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡಾ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಕೇರಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ರಾಜ್ಯದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು, ಕೆಲವು ಭಾಗಗಳಲ್ಲಿ ಭೂ ಕುಕುಸಿತ ಸಂಭವಿಸಿದ್ದು, ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ.

English summary
Kerala: Idukki Landslide Death Toll Rises To 52, CM Announces Rs 5 Lakh Compensation For Deceased Family.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X