• search
  • Live TV
ತಿರುವನಂತಪುರಂ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಭಾರತದಲ್ಲಿನ ಶೇ.68ರಷ್ಟು ಕೊರೊನಾವೈರಸ್ ಪ್ರಕರಣಗಳಿಗೆ ಒಂದೇ ಮೂಲ!

|
Google Oneindia Kannada News

ತಿರುವನಂತಪುರಂ, ಸಪ್ಟೆಂಬರ್ 16: ಭಾರತದಲ್ಲಿ ವರದಿಯಾಗುವ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳಲ್ಲಿ ಶೇ.68ರಷ್ಟು ಪ್ರಕರಣಗಳು ಕೇರಳ ರಾಜ್ಯವೊಂದರಲ್ಲೇ ಪತ್ತೆಯಾಗುತ್ತಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಪತ್ತೆಯಾಗುವ ಕೊವಿಡ್-19 ಪ್ರಕರಣಗಳಲ್ಲಿ ಶೇ.68ರಷ್ಟು ಕೇರಳದಲ್ಲಿ ವರದಿಯಾಗುತ್ತಿವೆ ಎಂದರು. ಕೇರಳವೊಂದರಲ್ಲೇ 1.99 ಲಕ್ಷ ಸಕ್ರಿಯ ಕೊರೊನಾವೈರಸ್ ಪ್ರಕರಣಗಳಿವೆ. ಮಿಜೋರಾಂ, ಆಂಧ್ರ ಪ್ರದೇಶ, ಕರ್ನಾಟಕ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ 10,000ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಕಳೆದ 11 ವಾರಗಳಲ್ಲಿ ಪಾಸಿಟಿವಿಟಿ ದರ ಶೇ.3ರಷ್ಟಿದೆ. 64 ಜಿಲ್ಲೆಗಳಲ್ಲಿ ಕೊವಿಡ್-19 ಪಾಸಿಟಿವಿಟಿ ದರ ಶೇ.5ಕ್ಕಿಂತ ಹೆಚ್ಚಾಗಿದೆ. ಈ ಪ್ರದೇಶಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಹೆಚ್ಚಿಸುವುದು ಮತ್ತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ," ಎಂದು ಹೇಳಿದ್ದಾರೆ.

ಲಸಿಕೆ ಲೆಕ್ಕಾಚಾರ: ಭಾರತದಲ್ಲಿ 76.49 ಕೋಟಿ ಮಂದಿಗೆ ಕೊವಿಡ್-19 ಲಸಿಕೆ!ಲಸಿಕೆ ಲೆಕ್ಕಾಚಾರ: ಭಾರತದಲ್ಲಿ 76.49 ಕೋಟಿ ಮಂದಿಗೆ ಕೊವಿಡ್-19 ಲಸಿಕೆ!

ದೇಶದಲ್ಲಿ ಕೊರೊನಾವೈರಸ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ವೈದ್ಯಕೀಯ ಆಕ್ಸಿಜನ್ ಲಭ್ಯತೆ ಮೇಲೆ ಹೆಚ್ಚಿನ ನಿಗಾ ವಹಿಸಿದೆ. 45,000 ಮೆಟ್ರಿಕ್ ಟನ್ ವೈದ್ಯಕೀಯ ಆಮ್ಲಜನಕ ಲಭ್ಯತೆಗಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.

ಕೊವಿಡ್-19 ರೋಗಿಗಳ ಚಿಕಿತ್ಸೆಗೆ ಅಗತ್ಯ ಸೌಲಭ್ಯ

ಕೊವಿಡ್-19 ರೋಗಿಗಳ ಚಿಕಿತ್ಸೆಗೆ ಅಗತ್ಯ ಸೌಲಭ್ಯ

"ದೇಶದಲ್ಲಿ 3,631 PSA (ಪ್ರೆಶರ್ ಸ್ವಿಂಗ್ ಆಡ್ಸರ್ಪ್ಶನ್) ಘಟಕಗಳನ್ನು ಶುರು ಮಾಡಲಾಗಿದೆ. ಈ ಘಟಕಗಳನ್ನು ಕಾರ್ಯಾರಂಭ ಮಾಡಿದ ಸಂದರ್ಭದಲ್ಲಿ ಅವು 4,500 ಮೆಟ್ರಿಕ್ ಟನ್ ಗಿಂತ ಹೆಚ್ಚು ವೈದ್ಯಕೀಯ ಆಮ್ಲಜನಕವನ್ನು ಒದಗಿಸುತ್ತವೆ. ಪ್ರಸ್ತುತ 1,595 ಘಟಕಗಳಿಂದ ಆಸ್ಪತ್ರೆಗಳಲ್ಲಿರುವ ರೋಗಿಗಳಿಗೆ 2,088 ಮೆಟ್ರಿಕ್ ಟನ್ ವೈದ್ಯಕೀಯ ಆಮ್ಲಜನಕವನ್ನು ಒದಗಿಸಲಾಗುತ್ತಿದೆ "ಎಂದು ಭೂಷಣ್ ವಿವರಿಸಿದರು. "ಇದಲ್ಲದೆ, ಈ ಘಟಕಗಳಲ್ಲಿ 1,491 ಕೇಂದ್ರ ಸಂಪನ್ಮೂಲಗಳ ಮೂಲಕ ಕಾರ್ಯಾರಂಭ ಮಾಡುತ್ತಿದೆ. ಅವು 2,220 MT ಗಿಂತ ಹೆಚ್ಚಿನ ವೈದ್ಯಕೀಯ ಆಮ್ಲಜನಕವನ್ನು ಲಭ್ಯವಾಗುವಂತೆ ಮಾಡುತ್ತವೆ. 2,140 ಘಟಕಗಳನ್ನು ರಾಜ್ಯಗಳು ಮತ್ತು ಇತರ ಮೂಲಗಳಿಂದ ಮಾಡಲಾಗುತ್ತಿದೆ. ಅವುಗಳಿಂದ 2,289 MT ವೈದ್ಯಕೀಯ ಆಮ್ಲಜನಕವನ್ನು ಲಭ್ಯವಾಗುವಂತೆ ಮಾಡುತ್ತವೆ" ಎಂದು ಹೇಳಿದ್ದಾರೆ.

ಮಾರ್ಗಸೂಚಿ ಪಾಲನೆಯಲ್ಲಿ ನಿರ್ಲಕ್ಷ್ಯ ತೋರುವಂತಿಲ್ಲ

ಮಾರ್ಗಸೂಚಿ ಪಾಲನೆಯಲ್ಲಿ ನಿರ್ಲಕ್ಷ್ಯ ತೋರುವಂತಿಲ್ಲ

ಭಾರತದಲ್ಲಿ ಮುಂಬರುವ ಹಬ್ಬಗಳು ಕೊರೊನಾವೈರಸ್ ಸೋಂಕಿನ ಹರಡುವಿಕೆಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವ ಅಪಾಯವಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಬಲರಾಮ್ ಭಾರ್ಗವ್ ಹೇಳಿದ್ದಾರೆ. ಕೇರಳದಲ್ಲೂ ಕೂಡಾ ಕೊವಿಡ್-19 ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಭವಿಷ್ಯದಲ್ಲಿ ಇತರೆ ರಾಜ್ಯಗಳು ಸಾಂಕ್ರಾಮಿಕ ಪಿಡುಗಿನಿಂದ ಅಪಾಯ ಎದುರಿಸುವ ಆತಂಕವಿದೆ. ಸಾಲುಸಾಲು ಹಬ್ಬ-ಹರಿದಿನಗಳು ಸೋಂಕು ಹರಡುವಿಕೆಗೆ ಹೆಚ್ಚು ಅನುಕೂಲಕರ ವಾತಾವರಣವನ್ನು ಸೃಷ್ಟಿಸಲಿದೆ. ಈ ಸಂದರ್ಭದಲ್ಲಿ ಕೊವಿಡ್-19 ನಿಯಂತ್ರಿಸಲು ಮಾರ್ಗಸೂಚಿ ಪಾಲನೆ, ಲಸಿಕೆ ಹಾಕಿಸಿಕೊಳ್ಳುವುದು, ಸಾಮಾಜಿಕ ಅಂತರದ ಮೇಲೆ ಲಕ್ಷ್ಯ ವಹಿಸುವಂತೆ ಡಾ. ಬಲರಾಮ್ ಭಾರ್ಗವ್ ಎಚ್ಚರಿಕೆ ನೀಡಿದ್ದಾರೆ.

ಎರಡು ಡೋಸ್ ಲಸಿಕೆ ವಿತರಿಸುವುದಕ್ಕೆ ಮೊದಲ ಆದ್ಯತೆ

ಎರಡು ಡೋಸ್ ಲಸಿಕೆ ವಿತರಿಸುವುದಕ್ಕೆ ಮೊದಲ ಆದ್ಯತೆ

"ವೈಜ್ಞಾನಿಕ ಮತ್ತು ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದಾಗಿ ಬೂಸ್ಟರ್ ಡೋಸ್ ಲಸಿಕೆ ನೀಡುವುದು ಕೇಂದ್ರ ಸರ್ಕಾರದ ಗುರಿಯಲ್ಲ. ಎರಡೂ ಡೋಸ್ ಕೊವಿಡ್-19 ಲಸಿಕೆ ನೀಡುವುದುಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಪ್ರತಿಕಾಯದ ಮಟ್ಟವನ್ನು ಅಳೆಯಬಾರದು ಎಂದು ಹಲವಾರು ಏಜೆನ್ಸಿಗಳು ಶಿಫಾರಸು ಮಾಡಲಾಗಿದೆ," ಐಸಿಎಂಆರ್ ನಿರ್ದೇಶಕ ಡಾ. ಬಲರಾಮ್ ಭಾರ್ಗವ್ ಹೇಳಿದ್ದಾರೆ.

"ಮುಂಬರುವ 2-3 ತಿಂಗಳಲ್ಲಿ, ನಾವು ಯಾವುದೇ ಕೋವಿಡ್ ಪ್ರಕರಣಗಳ ಏರಿಕೆಯ ವಿರುದ್ಧ ಜಾಗರೂಕರಾಗಿರಬೇಕು. ಮುಂದಿನ ತ್ರೈಮಾಸಿಕದಲ್ಲಿ ಪ್ರತಿಯೊಬ್ಬರೂ ಜಾಗರೂಕರಾಗಿರಲು ನಾವು ವಿನಂತಿಸುತ್ತೇವೆ. ಕೇರಳದಲ್ಲಿ ಸಹ ಪ್ರಕರಣಗಳ ಸಂಖ್ಯೆಯನ್ನು ಸ್ಥಿರಗೊಳಿಸುವುದನ್ನು ನೋಡಿ ನಮಗೆ ಸಂತೋಷವಾಗಿದೆ" ಎಂದು ನೀತಿ ಆಯೋಗದ ಸದಸ್ಯ ಡಾ ವಿ ಕೆ ಪೌಲ್ ತಿಳಿಸಿದ್ದಾರೆ.

ದೇವರ ನಾಡಿನಲ್ಲಿ ಕೊವಿಡ್-19 ಏರಿಳಿತ ಹೇಗಿದೆ?

ದೇವರ ನಾಡಿನಲ್ಲಿ ಕೊವಿಡ್-19 ಏರಿಳಿತ ಹೇಗಿದೆ?

ಕೇರಳದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಸ್ಥಿರವಾಗಿದೆ. ಕಳೆದ 24 ಗಂಟೆಗಳಲ್ಲಿ 22,182 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 26,563 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದೊಂದು ದಿನದಲ್ಲಿ 178 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 23,165 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಗುರುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 1,21,486 ಮಾದರಿಗಳನ್ನು ತಪಾಸಣೆ ಮಾಡಲಾಗಿದೆ. ಒಟ್ಟು 42,36,309 ಸೋಂಕಿತರು ಗುಣಮುಖರಾಗಿದ್ದು. 1,86,190 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕಳೆದೊಂದು ದಿನದಲ್ಲಿ 30,570 ಮಂದಿಗೆ ಕೊವಿಡ್-19

ಕಳೆದೊಂದು ದಿನದಲ್ಲಿ 30,570 ಮಂದಿಗೆ ಕೊವಿಡ್-19

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 30,570 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 38,303 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 431 ಜನರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಬುಧವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,33,47,325ಕ್ಕೆ ಏರಿಕೆಯಾಗಿದೆ. ಇದುವರೆಗೂ 3,25,60,474 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಬಲಿಯಾದವರ ಸಂಖ್ಯೆ 4,43,928ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ದೇಶದಲ್ಲಿ 3,42,923 ಸಕ್ರಿಯ ಪ್ರಕರಣಗಳು ವರದಿಯಾಗಿವೆ.

English summary
Kerala logs 68 per cent of total Coronavirus Cases Reported In India: Union Health Ministry.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X