ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಸ್ಲಿಂ ಸಮುದಾಯದಿಂದ ರೆಹನಾ ಫಾತಿಮಾ ಉಚ್ಚಾಟನೆ

|
Google Oneindia Kannada News

ತಿರುವನಂತಪುರಂ, ಅಕ್ಟೋಬರ್ 22: ಕಿಸ್‌ ಆಫ್‌ ಲವ್‌ ಆಯೋಜಕಿ ಮತ್ತು ಮಹಿಳಾ ಕಾರ್ಯಕರ್ತೆ ರೆಹಾನಾ ಫಾತಿಮಾ ಹಾಗೂ ಅವರ ಕುಟುಂಬದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಸ್ಲಿಂ ಜಮಾತ್ ಮುಂದಾಗಿದೆ.

ಶಬರಿಮಲೆ ಪ್ರವೇಶಿಸಲು ಹೋದ 'ಕಿಸ್ ಆಫ್ ಲವ್' ಫಾತಿಮಾ ರೆಹನಾ ಹಿನ್ನಲೆ ಶಬರಿಮಲೆ ಪ್ರವೇಶಿಸಲು ಹೋದ 'ಕಿಸ್ ಆಫ್ ಲವ್' ಫಾತಿಮಾ ರೆಹನಾ ಹಿನ್ನಲೆ

ಸುಪ್ರೀಂಕೋರ್ಟಿನ ತೀರ್ಪಿನಂತೆ ಎಲ್ಲಾ ವಯೋಮಾನದ ಮಹಿಳೆಯರು ಶಬರಿಮಲೆ ದೇಗುಲವನ್ನು ಪ್ರವೇಶಿಸಬಹುದು ಎಂಬುದನ್ನು ಸಾಬೀತುಪಡಿಸಲು ವಿಫಲ ಯತ್ನ ಮಾಡಿದ್ದ ರೆಹಾನಾಗೆ ಭಾರಿ ಹಿನ್ನಡೆಯಾಗಿದೆ.

ಪುಣೆ: ಮೋದಿ ಬೆಂಗಾವಲು ಪಡೆಗೆ ಮುತ್ತಿಗೆ ಹಾಕಲು ಹೊರಟ ತೃಪ್ತಿ ದೇಸಾಯಿ ಬಂಧನ ಪುಣೆ: ಮೋದಿ ಬೆಂಗಾವಲು ಪಡೆಗೆ ಮುತ್ತಿಗೆ ಹಾಕಲು ಹೊರಟ ತೃಪ್ತಿ ದೇಸಾಯಿ ಬಂಧನ

ರೆಹಾನಾ ಫಾತಿಮಾ ಹಾಗೂ ಅವರ ಕುಟುಂಬವನ್ನು ಮುಸ್ಲಿಂ ಸಮುದಾಯದಿಂದ ಉಚ್ಚಾಟಿಸುವಂತೆ ಎರ್ನಾಕುಲಂ ಕೇಂದ್ರ ಮುಸ್ಲಿಂ ಜಮಾತ್ ಪರಿಷತ್ ಗೆ ಕೇರಳ ಮುಸ್ಲಿಂ ಜಮಾತ್ ಪರಿಷತ್ ಸೂಚಿಸಿದೆ.

Kerala Muslim body takes action against activist Rehana Fatima

ರೆಹಾನಾ ಫಾತಿಮಾ ಅವರನ್ನು ಎರ್ನಾಕುಲಂ ಕೇಂದ್ರ ಮುಸ್ಲಿಂ ಜಮಾತ್‌ನಿಂದ ಉಚ್ಚಾಟನೆ ಮಾಡಲಾಗಿದ್ದು, ಅವರ ಕುಟುಂಬ ಸದಸ್ಯರನ್ನು ಕೂಡ ಮಹಲ್ಲಾದ ಸದಸ್ಯತ್ವದಿಂದ ಹೊರಹಾಕಲಾಗಿದೆ. ರೆಹನಾ ಅವರು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪರಿಷತ್‌ ಅಧ್ಯಕ್ಷ ಎ. ಪೂಕುಂಜು ತಿಳಿಸಿದ್ದಾರೆ.

ಹೆಲ್ಮೆಟ್ ಧರಿಸಿ ಇಬ್ಬರು ಮಹಿಳೆಯರ ಶಬರಿಮಲೆ ಪ್ರವೇಶ ಕೊನೇ ಕ್ಷಣದಲ್ಲಿ ವಿಫಲ ಹೆಲ್ಮೆಟ್ ಧರಿಸಿ ಇಬ್ಬರು ಮಹಿಳೆಯರ ಶಬರಿಮಲೆ ಪ್ರವೇಶ ಕೊನೇ ಕ್ಷಣದಲ್ಲಿ ವಿಫಲ

ಇದಲ್ಲದೆ, ರೆಹನಾ ಕಿಸ್ ಆಫ್ ಲವ್ ಕಾರ್ಯಕ್ರಮದ ಭಾಗವಾಗಿದ್ದರು. ಸಿನಿಮಾಗಳಲ್ಲಿ ನಗ್ನವಾಗಿ ನಟಿಸಿದ್ದಾರೆ. ಹಾಗಾಗಿ ಆಕೆ ಮುಸ್ಲಿಂ ಹೆಸರನ್ನು ಬಳಕೆ ಮಾಡಿಕೊಳ್ಳುವ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದಿದ್ದಾರೆ.

English summary
The Kerala Muslim Jamaath Council has asked the Ernakulam central muslim Jamaath(CMJ) to expel activist Rehana Fatima along with her family. Rehana made an attempt to enter the anctum anctorum of Sabarimala Temple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X