ಕೇರಳದ ಎಂಇಎಸ್ ಶಾಲಾ, ಕಾಲೇಜು ಆವರಣದಲ್ಲಿ ಬುರ್ಖಾ ನಿಷೇಧ
ತಿರುವನಂತಪುರಂ, ಮೇ 3: ಕೇರಳದ ಮುಸ್ಲಿಂ ಎಜುಕೇಷನ್ ಸೊಸೈಟಿ(ಎಂಇಎಸ್) ಆವರಣದಲ್ಲಿ ಬುರ್ಖಾ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಿಂದ (2019-20) ಜಾರಿಗೆ ಬರುವಂತೆ ತನ್ನೆಲ್ಲ ಶಾಲೆ, ಕಾಲೇಜುಗಳ ಆವರಣದಲ್ಲಿ ಮುಸ್ಲಿಂ ಬಾಲಕಿಯರು ಮತ್ತು ತರುಣಿಯರು ಬುರ್ಖಾ ಧರಿಸುವುದನ್ನು ನಿಷೇಧಿಸಿ ಆದೇಶಿಸಿದೆ.
ವೃತ್ತಿಯಲ್ಲಿ ವೈದ್ಯರಾಗಿರುವ ಎಂಇಎಸ್ ಅಧ್ಯಕ್ಷ ಫಜಲ್ ಗಫೂರ್ ಕಳೆದ ತಿಂಗಳು ಈ ಆದೇಶವನ್ನು ಹೊರಡಿಸಿದ್ದು, ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳ ವರ್ಗಗಳೆರಡಕ್ಕೂ ಈ ಆದೇಶ ಅನ್ವಯವಾಗುವುದಾಗಿ ಹೇಳಿದ್ದಾರೆ.

ನಾವು ಕೇರಳ ಇಸ್ಲಾಂ ಧರ್ಮವನ್ನು ಪಾಲಿಸೋಣ. ಮಧ್ಯಪ್ರಾಚ್ಯ ಇಸ್ಲಾಂ ಧರ್ಮದ ನೀತಿನೇಮಗಳನ್ನಲ್ಲ. ಸಂಪ್ರದಾಯವಾದಿ ಮುಸ್ಲಿಂ ಗುಂಪುಗಳು ತಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಕಳೆದ ಐದು ವರ್ಷಗಳಿಂದ ವಸ್ತ್ರಸಂಹಿತೆಯನ್ನು ಜಾರಿಗೊಳಿಸಿವೆ. ಈ ಪಿಡುಗನ್ನು ನಿಯಂತ್ರಿಸಲು ಈಗ ನಿರ್ಧರಿಸಿದ್ದೇವೆ. ಧರಿಸುವ ಉಡುಪು ಸಭ್ಯವಾಗಿರಬೇಕು. ಮುಖವನ್ನು ಮುಚ್ಚಿಕೊಳ್ಳುವ ಯಾವುದೇ ಬಟ್ಟೆಗಳನ್ನು ಧರಿಸುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೇರಳದ ಜನಪ್ರಿಯ ಮುಸ್ಲಿಂ ಸಂಘಟನೆ ಸಂಸ್ಥಾ ಕೇರಳ ಜಮೈತುಲ್ಲಾ ಉಲ್ಲಮಾ ಎಂಇಎಸ್ ಅಧ್ಯಕ್ಷರ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದೆ. ಬುರ್ಖಾ ಧರಿಸುವುದು ಧಾರ್ಮಿಕ ವಿಚಾರ. ಈ ಕುರಿತು ನಿರ್ಧಾರ ಕೈಗೊಳ್ಳಲು ಧಾರ್ಮಿಕ ಸಂಸ್ಥೆಗಳಿಗೆ ಮಾತ್ರವೇ ಅಧಿಕಾರ ಇದೆ ಎಂದು ತಿಳಿಸಿದ್ದಾರೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications