ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳ ಮಳೆ; ಕೊಟ್ಟಾಯಂನಲ್ಲಿ ಭೂ ಕುಸಿತದಿಂದ 9 ಸಾವು

|
Google Oneindia Kannada News

ತಿರುವನಂತಪುರಂ, ಅಕ್ಟೋಬರ್ 17; ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದ ಪರಿಣಾಮ ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಕೊಟ್ಟಿಕ್ಕಾಲ್‌ನಲ್ಲಿ ನಡೆದ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಭಾನುವಾರ ಮೂರು ಶವಗಳು ಸಿಕ್ಕಿವೆ.

ಕೊಟ್ಟಾಯಂನ ಕೊಟ್ಟಿಕ್ಕಾಲ್ ಮತ್ತು ಇಡುಕ್ಕಿಯಲ್ಲಿ ಅಪಾರವಾದ ಹಾನಿಯಾಗಿದೆ. ಇಡುಕ್ಕಿಯಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ 4 ಜನರು ಮೃತಪಟ್ಟಿದ್ದಾರೆ. ಕೊಟ್ಟಾಯಂನ ಕೊಟ್ಟಿಕ್ಕಾಲ್‌ನಲ್ಲಿ 9 ಜನರು ಸಾವನ್ನಪ್ಪಿದ್ದಾರೆ.

ಭೂ ಕುಸಿತದಿಂದಾಗಿ ಕೊಟ್ಟಾಯಂ ಗ್ರಾಮೀಣ ಪ್ರದೇಶದಲ್ಲಿ 12 ಜನರು ನಾಪತ್ತೆಯಾಗಿದ್ದಾರೆ. ಪೊಲೀಸರು ಮತ್ತು ಅಗ್ನಿ ಶಾಮಕದಳವರು ಭಾನುವಾರ ಸಹ ಸ್ಥಳಕ್ಕೆ ತಲುಪಲು ಸಾಧ್ಯವಾಗಿಲ್ಲ. ಇಡುಕ್ಕಿ ಜಿಲ್ಲೆಯ ತೊಡುಪುಳದಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ಭಾನುವಾರವೂ ಕರ್ನಾಟಕ, ಕೇರಳದಲ್ಲಿ ಮಳೆ ಮುನ್ಸೂಚನೆಭಾನುವಾರವೂ ಕರ್ನಾಟಕ, ಕೇರಳದಲ್ಲಿ ಮಳೆ ಮುನ್ಸೂಚನೆ

 Kerala Rain Landslide In Kottayam Death Toll Reaches 9

ಕೇರಳದ ಸಚಿವ ಕೆ. ರಾಜನ್ ಈ ಕುರಿತು ಮಾಹಿತಿ ನೀಡಿದ್ದು, "ಸೇನೆ ಮತ್ತು ಭಾರತೀಯ ವಾಯುಪಡೆಯನ್ನು ರಕ್ಷಣಾ ಕಾರ್ಯಕ್ಕಾಗಿ ಸನ್ನದ್ಧವಾಗಿ ಇಡಲಾಗಿದೆ. ಸಹಾಯ ಅಗತ್ಯ ಇರುವವರಿಗೆ ಸರ್ಕಾರ ಸಹಾಯ ಮಾಡುತ್ತಿದೆ" ಎಂದು ಹೇಳಿದ್ದಾರೆ.

ತಡರಾತ್ರಿ ಭಾರೀ ಮಳೆ; ಧರ್ಮಸ್ಥಳ ಯಾತ್ರಾರ್ಥಿಗಳ ಪರದಾಟತಡರಾತ್ರಿ ಭಾರೀ ಮಳೆ; ಧರ್ಮಸ್ಥಳ ಯಾತ್ರಾರ್ಥಿಗಳ ಪರದಾಟ

ರಾಜ್ಯದಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತುರ್ತು ಸಭೆ ನಡೆಸಿದರು. "ರಾಜ್ಯದ ಹಲವು ಭಾಗಗಳಲ್ಲಿ ಪರಿಸ್ಥಿತಿ ನಿಜವಾಗಿಯೂ ಗಂಭೀರವಾಗಿದೆ. ಜನರ ಜೀವ ಉಳಿಸಲು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಲಿದ್ದೇವೆ" ಎಂದು ಹೇಳಿದ್ದಾರೆ.

ಮುಂದಿನ 2 ದಿನ ರಾಜ್ಯದ 16 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆಮುಂದಿನ 2 ದಿನ ರಾಜ್ಯದ 16 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಕೇರಳ ರಾಜ್ಯದ ದಕ್ಷಿಣ ಮತ್ತು ಕೇಂದ್ರ ಭಾಗದಲ್ಲಿ ಮಾತ್ರ ಭಾರೀ ಮಳೆಯಾಗುತ್ತಿದೆ. ರಾಜ್ಯದಲ್ಲಿ ಇದುವರೆಗೂ 18 ಜನರು ಮೃತಪಟ್ಟಿದ್ದಾರೆ, ಹಲವಾರು ಜನರು ನಾಪತ್ತೆಯಾಗಿದ್ದಾರೆ. ಹಲವಾರು ಕಡೆ ಕಾಳಜಿ ಕೇಂದ್ರಗಳನ್ನು ಸರ್ಕಾರ ತೆರೆದಿದೆ.

ಪಟ್ಟಣಂತಿಟ್ಟ, ಕೊಟ್ಟಾಯಂ, ಇಡುಕ್ಕಿ ಜಿಲ್ಲೆಗಳಲ್ಲಿ ಮಳೆ, ಭೂ ಕುಸಿತದ ಪರಿಣಾಮ ಅಪಾರವಾದ ಹಾನಿಯಾಗಿದೆ. ಎನ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದೆ. ಹಾನಿಗೊಳಗಾದ ಪ್ರದೇಶಳಿಂದ ಜನರನ್ನು ಸ್ಥಳಾಂತರ ಮಾಡಲಾಗುತ್ತಿದೆ.

ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಭಾನುವಾರ ಸಹ ಪಟ್ಟಣಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಪಾಲಕ್ಕಾಡ್, ಮಲಪ್ಪುರಂ, ವಯನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೋವಿಡ್ ಮಾರ್ಗಸೂಚಿ ಅನ್ವಯ ಕಾಳಜಿ ಕೇಂದ್ರಗಳನ್ನು ತೆರೆದು ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ವಸತಿ ವ್ಯವಸ್ಥೆ ಮಾಡಬೇಕು ಎಂದು ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

ಪಟ್ಟಣಂತಿಟ್ಟದಲ್ಲಿರುವ ಮಣಿಯಾರ್ ಡ್ಯಾಂಗೆ ಒಳಹರಿವು ಹೆಚ್ಚಾಗಿದ್ದು, ಗೇಟ್‌ಗಳನ್ನು ತೆರೆದು ನದಿಗೆ ನೀರು ಬಿಡಲಾಗುತ್ತಿದೆ. ಕೊಲ್ಲಂ ಮತ್ತು ಪಟ್ಟಣಂತಿಟ್ಟಯಲ್ಲಿ ನದಿಗಳಲ್ಲಿ ನೀರಿನ ಮಟ್ಟ ಭಾರೀ ಏರಿಕೆಯಾಗಿದೆ.

ಭಕ್ತರಿಗೆ ಮನವಿ; ತಿರುವಂಕೂರು ದೇವಸ್ವಮ್ ಮಂಡಳಿ(ಟಿಡಿಬಿ) ಅಕ್ಟೋಬರ್ 17 ಮತ್ತು 18ರಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಆಗಮಿಸದಂತೆ ಮನವಿ ಮಾಡಿದೆ. ಪಂಪ ನದಿಯಲ್ಲಿ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ನದಿಗೆ ಇಳಿಯದಂತೆ ಭಕ್ತರಿಗೆ ಎಚ್ಚರಿಕೆ ನೀಡಲಾಗಿದೆ.

ಕೊಟ್ಟಾಯ ಮತ್ತು ಮುಂಡಕ್ಕಾಯಂನಲ್ಲಿನ ಪರಿಸ್ಥಿತಿ ಬಗ್ಗೆ ಸಚಿವ ಕೆ. ರಾಜನ್ ಸಭೆಯನ್ನು ನಡೆಸಿದರು. ಕೇರಳದಲ್ಲಿ ಸೋಮವಾರಿದಂದ ಆರಂಭವಾಗಬೇಕಿದ್ದ ಶಾಲಾ-ಕಾಲೇಜುಗಳನ್ನು ಅಕ್ಟೋಬರ್ 20 ರಿಂದ ಆರಂಭಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.

ಹೆಚ್ಚು ಮಳೆ ಬಿದ್ದ ಪ್ರದೇಶದಲ್ಲಿ ರಸ್ತೆಗಳಲ್ಲಿ ನೀರು ನಿಂತಿದೆ. ಇದರಿಂದಾಗಿ ಹಲವು ಪ್ರದೇಶಗಳನ್ನು ರಸ್ತೆ ಮಾರ್ಗದ ಮೂಲಕ ತಲುಪಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ರಾಜ್ಯ ಸರ್ಕಾರ ವಾಯುಪಡೆಯ ನೆರವು ಕೇಳಿದೆ. ಹೆಲಿಕಾಪ್ಟರ್ ಮೂಲಕ ಜನರನ್ನು ಸ್ಥಳಾಂತರ ಮಾಡಲು ವಾಯುಪಡೆ ಸಿದ್ಧವಾಗಿದೆ.

English summary
Three more bodies recovered from Koottikkal in Kottayam district as heavy rain triggers landslide, death toll reaches 9. Army and Indian Air Force are on stand-by for assistance.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X