#KeralaStandsOut: ಯುಪಿಗಿಂತ ಕೇರಳವೇ ಬೆಸ್ಟ್; ಸಿಎಂ ಯೋಗಿ ವಿರುದ್ಧ ಪಿಣರಾಯಿ ಟ್ವೀಟ್
ತಿರುವನಂತಪುರಂ, ಫೆಬ್ರವರಿ 12: ಉತ್ತರ ಪ್ರದೇಶದಲ್ಲಿ ಮತದಾರರು ಸ್ವಲ್ಪ ಎಡವಿದರೂ ರಾಜ್ಯವು ಮತ್ತೊಂದು ಕೇರಳ, ಪಶ್ಚಿಮ ಬಂಗಾಳ ಅಥವಾ ಕಾಶ್ಮೀರವಾಗಿ ಪರಿವರ್ತನೆ ಆಗುತ್ತದೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಮರ ಸಾರಿದ್ದಾರೆ.
ನಾನು ಕೇರಳದ ಪರವಾಗಿ ನಿಲ್ಲುತ್ತೇನೆ. ಏಕೆಂದರೆ ದೇಶದ ಬಹುತೇಕ ವಲಯಗಳಲ್ಲಿ ಕೇರಳ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ಉತ್ತಮ ಆಡಳಿತ, ಕಾನೂನು ವ್ಯವಸ್ತೆ, ಶಿಕ್ಷಣ, ಆರೋಗ್ಯ, ಶಿಶು ಮರಣ ಪ್ರಮಾಣ ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ನೀತಿ ಆಯೋಗವು ನೀಡಿದ ಸೂಚ್ಯಂಕಗಳ ಸಮೇತವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿಗೆ ಪಿಣರಾಯಿ ವಿಜಯನ್ ತಿರುಗೇಟು ನೀಡಿದ್ದಾರೆ.
ಆರೋಗ್ಯ, ಶಿಕ್ಷಣ, ಅಭಿವೃದ್ಧಿ ಸೇರಿದಂತೆ ಎಲ್ಲ ವಲಯಗಳಲ್ಲಿ ಕೇರಳ ಉತ್ತಮ ಸ್ಥಾನದಲ್ಲಿದೆ. ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕ 2021 ರ ಪ್ರಕಾರ ಕೇರಳವು ಭಾರತದಲ್ಲಿ ಅತ್ಯುತ್ತಮ ಆಡಳಿತವನ್ನು ಹೊಂದಿರುವ ರಾಜ್ಯ ಎಂದು ಗುರುತಿಸಲ್ಪಟ್ಟಿದೆ.
ಕೇರಳದಲ್ಲಿ ಬಡವರ ಸಂಖ್ಯೆ ತೀರಾ ಕಡಿಮೆಯಾಗಿದೆ. ನೀತಿ ಆಯೋಗದ ಬಹು ಆಯಾಮದ ಬಡತನ ಸೂಚ್ಯಂಕದ ಕುರಿತು ಸ್ವತಃ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ. ನೀತಿ ಆಯೋಗದ ಬಹು ಆಯಾಮದ ಬಡತನ ಸೂಚ್ಯಂಕದ ಪ್ರಕಾರ, ಭಾರತದಲ್ಲಿ ಒಟ್ಟು ಬಡವರ ಪ್ರಮಾಣ ಶೇ.25.02ರಷ್ಟಿದೆ. ಈ ಪೈಕಿ ಅತಿಕಡಿಮೆ ಬಡವರನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಕೇರಳ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ಕೇರಳದಲ್ಲಿ ಶೇ.0.71ರಷ್ಟು ಜನರು ಮಾತ್ರ ಬಡತನದಲ್ಲಿದ್ದಾರೆ ಎಂದು ನೀತಿ ಆಯೋಗದ ವರದಿಯಲ್ಲಿ ತಿಳಿಸಿದೆ.

ಅತಿಹೆಚ್ಚು ಶೇಕಡಾವಾರು ಬಡವರನ್ನು ಹೊಂದಿದ ರಾಜ್ಯ
ರಾಷ್ಟ್ರೀಯ ನೀತಿ ಆಯೋಗದ ಬಹು ಆಯಾಮದ ಬಡತನ ಸೂಚ್ಯಂಕದ ಪ್ರಕಾರ, ಭಾರತದಲ್ಲಿ ಒಟ್ಟು ಬಡವರ ಪ್ರಮಾಣ ಶೇ.25.02ರಷ್ಟಿದೆ. ಕೇರಳವು ಶೇ.0.71ರಷ್ಟು ಬಡವರನ್ನು ಹೊಂದಿದ್ದು, ಅತಿಕಡಿಮೆ ಬಡವರನ್ನು ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ಇನ್ನೊಂದು ದಿಕ್ಕಿನಲ್ಲಿ ಬಿಹಾರದಲ್ಲಿ ಅತಿಹೆಚ್ಚು ಸಂಖ್ಯೆಯಲ್ಲಿ ಬಡವರಿದ್ದು, ಬಡತನ ರೇಖೆಗಿಂತ ಕೆಳಗಿರುವವರ ಶೇಕಡಾವಾರು ಪ್ರಮಾಣ 51.91ರಷ್ಟಿದೆ. ಜಾರ್ಖಂಡ್ ಶೇ.42.16ರಷ್ಟಿದ್ದರೆ, ಉತ್ತರ ಪ್ರದೇಶ ಶೇ.37.79ರಷ್ಟಿದೆ. ಇನ್ನು ಮಧ್ಯ ಪ್ರದೇಶದಲ್ಲಿ ಶೇ.36.65ರಷ್ಟು ಮಂದಿ ಬಡವರಾಗಿದ್ದರೆ, ಮೇಘಾಲಯದಲ್ಲಿ ಶೇ.32.67ರಷ್ಟಿದೆ ಎಂಬುದು ಸೂಚ್ಯಂಕದಲ್ಲಿ ಉಲ್ಲೇಖಿಸಲಾಗಿದೆ.

ಸಾಕ್ಷರತೆ ಪ್ರಮಾಣ ಶೇ.98.25ರಷ್ಟಿದೆ
ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ - 5ರ ಪ್ರಕಾರ, ಕೇರಳ ಜನಸಂಖ್ಯೆಯ ಶೇ.98.25ರಷ್ಟು ಜನರು ಸಾಕ್ಷರತೆಯನ್ನು ಹೊಂದಿದ್ದಾರೆ. ಪುರುಷರು ಶೇ.97.40ರಷ್ಟು ಸಾಕ್ಷರರಾಗಿದ್ದರೆ, ಮಹಿಳೆಯರಲ್ಲಿ ಸಾಕ್ಷರತೆ ಪ್ರಮಾಣ ಶೇ.97.10ರಷ್ಟಿದೆ ಎಂದು ಪಿಣರಾಯಿ ವಿಜಯನ್ ಟ್ವೀಟ್ ಸಂದೇಶದಲ್ಲಿ ಹಂಚಿಕೊಂಡಿದ್ದಾರೆ.

ಆರೋಗ್ಯ ವಲಯದಲ್ಲೂ ಕೇರಳವೇ ಬೆಸ್ಟ್
ನಾನು ಕೇರಳದೊಂದಿಗೆ ನಿಲ್ಲುವುದಕ್ಕೆ ಬಯಸುತ್ತೇನೆ, ಏಕೆಂದರೆ 2020-2021 ನೀತಿ ಆಯೋಗದ ಸುಸ್ಥಿರ ಅಭಿವೃದ್ಧಿ ಸೂಚ್ಯಂಕ ಮತ್ತು 2019-20 ನೀತಿ ಆಯೋಗದ ಆರೋಗ್ಯ ಸೂಚ್ಯಂಕದಲ್ಲಿ ಶೇ.82.2 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕ 2021ರ ಮೂಲಕ ಕೇರಳವು ಭಾರತದಲ್ಲಿ ಅತ್ಯುತ್ತಮ ಆಡಳಿತದ ರಾಜ್ಯವೆಂದು ಗುರುತಿಸಲ್ಪಟ್ಟಿದೆ.

ಕೇರಳದಲ್ಲಿ ಕಡಿಮೆ ಶಿಶು ಮರಣ ಪ್ರಮಾಣ
ಕೇರಳದಲ್ಲಿ ಶಿಶು ಮರಣ ಪ್ರಮಾಣ ಶೇ.4.4ರಷ್ಟಿದ್ದು, ಇದು ಅತ್ಯಂತ ಕಡಿಮೆಯಾಗಿದೆ. ಜಗತ್ತಿನ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಕೇರಳ ಸರಿಸಮಾನವಾಗಿದೆ. ಯುಎಸ್ಎಗಿಂತ ಕೇರಳದಲ್ಲಿ ಅತಿಕಡಿಮೆ ಶಿಶು ಮರಣ ಪ್ರಮಾಣವಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ. ಆ ಮೂಲಕ ಕೇರಳವನ್ನು ಟೀಕಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಬಿಜೆಪಿ ವಿರುದ್ಧ ತಿರುಗೇಟು ನೀಡಿದ್ದಾರೆ.
Recommended Video
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications