ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳದಲ್ಲಿ ಕೊರೊನಾ ತಗ್ಗುತ್ತಿದ್ದಂತೆ ನಿರ್ಬಂಧ ಸಡಿಲಿಕೆ ಮಾಡಿದ ಸರ್ಕಾರ

|
Google Oneindia Kannada News

ತಿರುವನಂತಪುರಂ, ಸೆಪ್ಟೆಂಬರ್ 8: ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗುತ್ತಿದ್ದಂತೆ ರಾಜ್ಯ ಸರ್ಕಾರ ಕೆಲವು ನಿರ್ಬಂಧಗಳನ್ನು ಸಡಿಲಿಸಲು ಮುಂದಾಗಿದೆ.

ಮಂಗಳವಾರ, ರಾತ್ರಿ ಕರ್ಫ್ಯೂ ಹಾಗೂ ಭಾನುವಾರದ ನಿರ್ಬಂಧಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಸಡಿಲಗೊಳಿಸಲು ಸೂಚಿಸಿದೆ.

ನಿಪಾ ವೈರಸ್‌ ರೋಗಿಯ 8 ಸಂಪರ್ಕಿತರಿಗೆ ನೆಗೆಟಿವ್‌: ಕೇರಳ ಸಚಿವೆನಿಪಾ ವೈರಸ್‌ ರೋಗಿಯ 8 ಸಂಪರ್ಕಿತರಿಗೆ ನೆಗೆಟಿವ್‌: ಕೇರಳ ಸಚಿವೆ

ಕಳೆದ ಎರಡು ದಿನಗಳಿಂದ ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ಸೋಂಕಿನ ಪಾಸಿಟಿವಿಟಿ ದರವೂ ಇಳಿಕೆಯಾಗಿದೆ. ಹೀಗಾಗಿ ನಿರ್ಬಂಧಗಳನ್ನು ಸಡಿಲಿಸಲು ರಾಜ್ಯ ಸರ್ಕಾರ ಮುಂದಾಗಿದೆ.

 Kerala Removes Night Curfew Restrictions Amid Decrease In Covid Cases

ಎಲ್ಲಾ ವಿದ್ಯಾರ್ಥಿಗಳು, ತರಬೇತುದಾರರು, ಶಿಕ್ಷಕರು ಹಾಗೂ ಸಿಬ್ಬಂದಿ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿರಬೇಕು ಎಂದು ಸೂಚನೆ ನೀಡಿದೆ. ರಾಜ್ಯದಲ್ಲಿ ಒಟ್ಟಾರೆ ಪಾಸಿಟಿವಿಟಿ ದರವನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ವಿಶ್ಲೇಷಣಾ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಟಿಪಿಆರ್ ದರವು ಆಗಸ್ಟ್‌ ಕೊನೆ ವಾರದಲ್ಲಿ 18.49% ಇದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಈ ದರ 17.91%ಗೆ ಇಳಿದಿದೆ. ಜನರು ಕೊರೊನಾ ನಿಯಮಗಳನ್ನು ಸೂಕ್ತವಾಗಿ ಪಾಲನೆ ಮಾಡಿದರೆ, ಮುಂದಿನ ಕೆಲವೇ ದಿನಗಳಲ್ಲಿ ಸೋಂಕಿನ ಸಂಖ್ಯೆ ಮತ್ತಷ್ಟು ಇಳಿಮುಖವಾಗಲಿದೆ ಎಂದು ಹೇಳಿದ್ದಾರೆ.

ಕೇರಳದಲ್ಲಿ ನಿಪಾ ವೈರಸ್ ಸೋಂಕಿನೊಂದಿಗೆ 11 ಮಂದಿಯ ಸಂಪರ್ಕ!ಕೇರಳದಲ್ಲಿ ನಿಪಾ ವೈರಸ್ ಸೋಂಕಿನೊಂದಿಗೆ 11 ಮಂದಿಯ ಸಂಪರ್ಕ!

ಹಲವು ದಿನಗಳವರೆಗೂ ಕೇರಳದಲ್ಲಿ ಪ್ರತಿನಿತ್ಯ 30 ಸಾವಿರ ಕೊರೊನಾ ಪ್ರಕರಣಗಳು ದಾಖಲಾಗುತ್ತಿದ್ದವು. ಕಳೆದ ವಾರದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ.

 Kerala Removes Night Curfew Restrictions Amid Decrease In Covid Cases

ಮಂಗಳವಾರ 25,772 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿ ಒಟ್ಟಾರೆ ಕೊರೊನಾ ಪ್ರಕರಣಗಳ ಸಂಖ್ಯೆ 42,53,298 ಆಗಿದೆ. ಸೆಪ್ಟೆಂಬರ್ 3ರಂದು 29,322 ಕೊರೊನಾ ಪ್ರಕರಣಗಳು ದಾಖಲಾಗಿದ್ದವು. ಮಂಗಳವಾರ 189 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಇದುವರೆಗೂ ಒಟ್ಟು 21,820 ಮಂದಿ ಸಾವನ್ನಪ್ಪಿದ್ದಾರೆ.

ಕೇರಳದಲ್ಲಿ ಕೊರೊನಾ ನಿಯಂತ್ರಣವಾಗದ ಹಿನ್ನೆಲೆಯಲ್ಲಿ ಗಡಿ ರಾಜ್ಯಗಳಲ್ಲಿ ಕಟ್ಟೆಚ್ಚರಿಕೆ ವಹಿಸಲಾಗಿದೆ. ನೆರೆ ರಾಜ್ಯಗಳಾದ ಕರ್ನಾಟಕ, ತಮಿಳುನಾಡಿನ ಗಡಿ ಜಿಲ್ಲೆಗಳಲ್ಲಿ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಕೇಂದ್ರ ಸೂಚನೆ ನೀಡಿದೆ.

ಎರಡು ನೆರೆ ರಾಜ್ಯಗಳಲ್ಲಿ ಕೊರೊನಾ ಸೋಂಕಿನ ಅಂತರರಾಜ್ಯ ಹರಡುವಿಕೆ ತಡೆಗಟ್ಟಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅಗತ್ಯತೆ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಒತ್ತಿ ಹೇಳಿದ್ದಾರೆ. ಕೇರಳದಲ್ಲಿ ಸುಮಾರು 85% ಕೊರೊನಾ ಸೋಂಕಿತರು ಹೋಂ ಕ್ವಾರಂಟೈನ್‌ನಲ್ಲಿದ್ದು, ರಾಜ್ಯ ಸರ್ಕಾರ ದಿನನಿತ್ಯದ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ವಿಧಿಸಬೇಕಾಗಿದೆ. ಸ್ಮಾರ್ಟ್ ಕಾರ್ಯತಂತ್ರದ ಲಾಕ್‌ಡೌನ್ ಜಾರಿಗೊಳಿಸುವ ಯೋಜನೆಯನ್ನು ರಾಜ್ಯ ಅನುಸರಿಸುವ ಅಗತ್ಯವಿದೆ ಎಂದು ಕೇಂದ್ರ ಈಚೆಗೆ ದೂರಿತ್ತು.

ಕೊರೊನಾದೊದಿಗೆ ನಿಫಾ ವೈರಸ್ ಆತಂಕ:
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮಧ್ಯೆ ನಿಫಾ ವೈರಸ್ ಮತ್ತೊಂದು ಆತಂಕ ಸೃಷ್ಟಿಸಿದೆ. ಈ ನಿಟ್ಟಿನಲ್ಲಿ ರೋಗದ ನಿಯಂತ್ರಣ ಮತ್ತು ಪತ್ತೆಗೆ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ.

ನ್ಯಾಷನಲ್‌ ಸೆಂಟರ್‌ ಫಾರ್‌ ಡಿಸೀಸ್‌ನ ತಂಡವು ಕೇರಳದಲ್ಲಿದೆ. ಈ ತಂಡವು ಕೇರಳದ ಆರೋಗ್ಯ ಇಲಾಖೆಗೆ ಅಗತ್ಯ ಸಹಾಯವನ್ನು ಮಾಡುತ್ತಿದೆ. ನಿಫಾ ವೈರಸ್ ನಿರ್ವಹಣಾ ಯೋಜನೆಯನ್ನು ರಾಜ್ಯ, ಜಿಲ್ಲಾ ಮತ್ತು ಆಸ್ಪತ್ರೆ ಮಟ್ಟದಲ್ಲಿ ಸಂಯೋಜಿಸಲಾಗುವುದು. ರಾಜ್ಯ ಸಮಿತಿಯು ಮುಖ್ಯಮಂತ್ರಿ, ಆರೋಗ್ಯ ಸಚಿವ, ಮುಖ್ಯ ಕಾರ್ಯದರ್ಶಿ, ಆರೋಗ್ಯ ಕಾರ್ಯದರ್ಶಿ, ವಿಪತ್ತು ನಿರ್ವಹಣೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆಯ ನಿರ್ದೇಶಕರು ಮತ್ತು ಆರೋಗ್ಯ ಶಿಕ್ಷಣ ಇಲಾಖೆಯ ನಿರ್ದೇಶಕರನ್ನು ಒಳಗೊಂಡಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಆರೋಗ್ಯ ಕಾರ್ಯಕರ್ತರು, ಕ್ಷೇತ್ರ ಕಾರ್ಯಕರ್ತರು, ವೈದ್ಯರು ಮತ್ತು ಖಾಸಗಿ ಆಸ್ಪತ್ರೆಗಳ ಇತರ ಸಿಬ್ಬಂದಿ ಮತ್ತು ಇತರರಿಗೆ ವಿಶೇಷ ತರಬೇತಿ ನೀಡಲಾಗುವುದು ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.

English summary
Kerala government on Tuesday removed night curfew and Sunday restrictions with immediate effect, in view of the declining number of Covid-19 cases in the state
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X