ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳದಲ್ಲಿ ಕೊರೊನಾ ವೈರಸ್‌ಗೆ 2ನೇ ಬಲಿ

|
Google Oneindia Kannada News

ತಿರುವನಂತಪುರಂ, ಮಾರ್ಚ್ 31: ಕೊರೊನಾ ವೈರಸ್‌ನಿಂದ ಕೇರಳದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಅಲ್ಲಿ ಸಾವಿನ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.

Recommended Video

A shopkeeper in Kerala has been trashed by police | Kerela | police | Oneindia kannada

ಮೃತ ವ್ಯಕ್ತಿಯನ್ನು ಅಬ್ದುಲ್ ಅಜೀಜ್ (68) ಎಂದು ಗುರ್ತಿಸಲಾಗಿದ್ದು, ಭಾನುವಾರವಷ್ಟೇ ಇವರಲ್ಲಿ ವೈರಸ್ ದೃಢಪಟ್ಟಿತ್ತು. ಬಳಿಕ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ ಅವರು, ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು.

ಕೊರೊನಾ: ದೆಹಲಿಯಲ್ಲಿ ಮಸೀದಿಗೆ ತೆರಳಿದ್ದ ತೆಲಂಗಾಣದ 6 ಮಂದಿ ಸಾವುಕೊರೊನಾ: ದೆಹಲಿಯಲ್ಲಿ ಮಸೀದಿಗೆ ತೆರಳಿದ್ದ ತೆಲಂಗಾಣದ 6 ಮಂದಿ ಸಾವು

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಇವರ ಸಾವಿನೊಂದಿಗೆ ಕೇರಳ ರಾಜ್ಯದಲ್ಲಿ ವೈರಸ್ ನಿಂದ ಸಾವಿಗೀಡಾದವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.

Kerala Reports second Coronavirus Death

ಭಾರತದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆಸಿದ್ದು, ಸೋಂಕಿನಿಂದ ಬಳಲುತ್ತಿದ್ದ ಕೇರಳ ವ್ಯಕ್ತಿ ಮಂಗಳವಾರ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ವೈರಸ್'ಗೆ ಬಲಿಯಾದವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.

ಕೇರಳದ ತಿರುವನಂತಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 68 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಮಾರಣಾಂತಿಕ ಕೊರೊನಾ ವಿರುದ್ಧ ಹೋರಾಡಿ ಗೆದ್ದ ಕೇರಳದ ವೃದ್ಧ ದಂಪತಿ ಮಾರಣಾಂತಿಕ ಕೊರೊನಾ ವಿರುದ್ಧ ಹೋರಾಡಿ ಗೆದ್ದ ಕೇರಳದ ವೃದ್ಧ ದಂಪತಿ

ಈ ನಡುವೆ ಗಡಹ ಸಚಿವಾಲಯ ಮಾಹಿತಿ ನೀಡಿರುವ ಪ್ರಕಾರ ದೇಶದಲ್ಲಿ ಸೋಂಕಿತರ ಸಂಖ್ಯೆ 1,300ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 120 ಮಂದಿ ಈಗಾಗಲೇ ವೈರಸ್ ನಿಂದ ಗುಣಮುಖರಾಗಿದ್ದಾರೆಂದು ತಿಳಿದುಬಂದಿದೆ.

English summary
Kerala recorded second death on Tuesday after a 68-year-old died at Thiruvananthapuram.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X