ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಹಾಕದಿದ್ದರೆ, ದಂಡ ಫಿಕ್ಸ್ : ಕೇರಳ ಸರ್ಕಾರ

|
Google Oneindia Kannada News

ತಿರುವನಂತಪುರಂ, ಏಪ್ರಿಲ್ 27: ದೇಶದಲ್ಲಿ ಕೊರೊನಾ ನಾಲ್ಕನೇ ಅಲೆ ಭೀತಿ ಹೆಚ್ಚಾಗಿರುವ ಹಿನ್ನಲೆ ಈಗಾಗಲೇ ಹಲವು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಈಗ ಇದೇ ಹಾದಿ ತುಳಿದಿರುವ ಕೇರಳ ಕೂಡ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನ ಕಡ್ಡಾಯಗೊಳಿಸಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ದಂಡ ಹಾಗೂ ಕಠಿಣ ಶಿಕ್ಷೆಗೆ ಗುರಿಯಾಗಿಸುವುದಾಗಿ ಎಚ್ಚರಿಕೆ ನೀಡಿದೆ.

ಕೇರಳದಲ್ಲಿ ಇತ್ತೀಚಿಗೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನಲೆ ಮುಂಜಾಗೃತ ಕ್ರಮವಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾಸ್ಕ್, ಸಾಮಾಜಿಕ ಅಂತರವನ್ನ ಕಡ್ಡಾಯ ಮಾಡಿದ್ದಾರೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಕೊರೊನಾ ನಾಲ್ಕನೇ ಅಲೆ ಭೀತಿ ಶುರುವಾಗಿದೆ. ಅಲ್ಲದೆ ಸೋಂಕಿನ ಪ್ರಮಾಣವೂ ಸಹ ಹೆಚ್ಚಾಗುತ್ತಿದೆ. ಹೀಗಾಗಿ ಕೇರಳ ಸರ್ಕಾರವೂ ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮಕ್ಕೆ ಮುಂದಾಗಿದೆ.

ಇತ್ತೀಚೆಗಷ್ಟೇ ದೆಹಲಿ, ಉತ್ತರ ಪ್ರದೇಶ, ತಮಿಳುನಾಡು, ಕರ್ನಾಟಕ, ಛತ್ತೀಸ್‌ಘರ್, ಪಂಜಾಬ್ ರಾಜ್ಯಗಳು ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನ ಕಡ್ಡಾಯ ಎಂದು ಘೋಷಣೆ ಮಾಡಿದ್ದವು. ಈಗ ಕೇರಳ ಕೂಡ ಮಾಡಿದ್ದು, ದೇಶಾದ್ಯಂತ ಕೊರೊನಾ ನಾಲ್ಕನೇ ಅಲೆ ಭೀತಿ ಶುರುವಾಗಿದೆ.

Kerala to impose fine for not wearing masks

ಇದಿಷ್ಟೇ ಅಲ್ಲದೆ ಬೆಳಿಗ್ಗೆ ಪ್ರಧಾನಿ ಮೋದಿ ಕೂಡ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಎಲ್ಲಾ ರಾಜ್ಯಗಳಲ್ಲಿ ಕೊರೊನಾ ಸ್ಥಿತಿಗತಿ ಹೇಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡರು. ಜೊತೆಗೆ ನಾಲ್ಕನೇ ಅಲೆ ಆತಂಕವಿರುವ ಹಿನ್ನಲೆ ಕೊರೊನಾ ವಿರುದ್ದ ಹೋರಾಡಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನ ತೆಗೆದುಕೊಳ್ಳುವಂತೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ಬೇರೆ ದೇಶಗಳಿಗೆ ಹೋಲಿಸಿದರೆ ಭಾರತ ಕೊರೊನಾ ವಿರುದ್ದ ಮೊದಲಿನಿಂದಲೂ ಹೋರಾಟ ಮಾಡುತ್ತಾ ಬಂದಿದೆ. ಇತ್ತೀಚೆಗಷ್ಟೇ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಹೀಗಾಗಿ ನಾವೆಲ್ಲರೂ ಕೂಡ ಒಟ್ಟಾಗಿ ಕೊರೊನಾ ವಿರುದ್ದ ಹೋರಾಡಬೇಕು, ಹೋರಾಡೋಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Kerala to impose fine for not wearing masks

ದೇಶದಲ್ಲಿ ಬುಧವಾರ 2,927 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಮಂಗಳವಾರ ಪತ್ತೆಯಾದ ಸೋಂಕಿತರಿಗಿಂತ ಹೆಚ್ಚು ಪ್ರಕರಣಗಳು ಇಂದು ಪತ್ತೆಯಾಗಿದೆ. ಕೇರಳದಲ್ಲೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರ ಮಾಸ್ಕ್, ಸಾಮಾಜಿಕ ಅಂತರದ ಮೊರೆ ಹೋಗಿದೆ.

English summary
Kerala government, on Wednesday, made it mandatory to wear masks in public spaces. In its latest COVID-19-related order, the Kerala government said that violation of the mask rule shall be punishable.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X