ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳ: ಕೊರೊನಾ ಜತೆಗೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲೂ ಹೆಚ್ಚಳ

|
Google Oneindia Kannada News

ಕೇರಳ, ಜನವರಿ 19: ಕೇರಳದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಜತೆಗೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಅಧಿಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದ್ದ ಸಂದರ್ಭದಲ್ಲೂ ಕೇರಳದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಿತ್ತು.

ಓಮಿಕ್ರಾನ್‌ನಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಳ: WHOಓಮಿಕ್ರಾನ್‌ನಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಳ: WHO

ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 34,199 ಪ್ರಕರಣಗಳು ಪತ್ತೆಯಾಗಿವೆ, 1094 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜನವರಿ 1 ರಂದು 2435 ಪ್ರಕರಣಗಳು ಪತ್ತೆಯಾಗಿದ್ದವು.

Kerala Witesses Sharp Spike In Covid Cases, Hospitalisations And Bed Occupancy

6203 ಮಂದಿ ಆಸ್ಪತ್ರೆಯ ಐಸೊಲೇಷನ್‌ ಅಲ್ಲಿದ್ದಾರೆ, ಒಂದು ವಾರದ ಹಿಂದೆ ಜನವರಿ 11 ರಂದು ಕೇರಳದಲ್ಲಿ 44,441 ಕೊರೊನಾ ಸೋಂಕಿತರು ಪತ್ತೆಯಾಗಿದ್ದರು, ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಶೇ. 5.7ರಷ್ಟಿತ್ತು. ಕೇವಲ 294 ಮಂದಿ ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ, ಇದೀಗ ಒಂದೇ ವಾರದ ಬಳಿಕ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ, ಶೇ.211ರಷ್ಟು ಹೆಚ್ಚಾಗಿದೆ. ಪೊಲೀಸ್‌ ಠಾಣೆಗಳ ಕಾರ್ಯ ಚಟುವಟಿಕೆಗಳ ಮೇಲೂ ಕೋವಿಡ್ ಪರಿಣಾಮ ಬೀರಿದೆ. ಪ್ರಧಾನವಾಗಿ ಸಂಪರ್ಕಿತರ ಮೂಲಕ ಸೋಂಕು ಹರಡುತ್ತಿದೆ. ಇದರಲ್ಲಿ ಕೋವಿಡ್‌ ರೂಪಾಂತರಿ ಓಮಿಕ್ರಾನ್‌ ಬಗ್ಗೆ ಸೂಕ್ತ ತಪಾಸಣೆ ನಡೆಯೋದು ಬಾಕಿ ಇದೆ.

ಕೇರಳ ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣ ಮಾಡಬೇಕಾದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸೇರಿಸಿಕೊಂಡು ಹೆಚ್ಚುವರಿ 100 ಕ್ಲಸ್ಟರ್‌ಗಳನ್ನು ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ರಾತ್ರಿ ಕರ್ಫ್ಯೂ, ವಾರಂತ್ಯ ಕರ್ಫ್ಯೂ ಸಹಿತ ಕಠಿಣ ನಿರ್ಬಂಧ ಹೇರುವ ಸಾಧ್ಯತೆಯೂ ಇದೆ. ಈಗಾಗಲೇ ಸಭೆ, ಸಮಾರಂಭಗಳಿಗೆ ನಿಯಂತ್ರಣ ಹೇರಲಾಗಿದೆ.

ಈಗಾಗಲೇ ಜನವರಿ 21ರಿಂದ ಕೇರಳ ರಾಜ್ಯದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗುವುದು ಎಂದು ಸರ್ಕಾರ ಹೇಳಿದೆ. ಇನ್ನು 1 ರಿಂದ 9ನೇ ತರಗತಿ ತನಕ ಆನ್‌ಲೈನ್‌ ಮೂಲಕ ತರಗತಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಕೆಲವು ಜಿಲ್ಲೆಗಳಲ್ಲಿ ವಾರಾಂತ್ಯ ಲಾಕ್‌ಡೌನ್‌ ಜಾರಿಗೊಳಿಸುವ ಕುರಿತು ಪರಿಶೀಲಿಸಲಾಗುತ್ತಿದೆ.

ಕೇರಳ ರಾಜ್ಯದಲ್ಲಿ ಒಂದು, ಎರಡು ಹಂತಕ್ಕಿಂತ ಅತಿ ತೀವ್ರವಾಗಿ ಕೋವಿಡ್‌ ಹರಡುತ್ತಿರುವ ಹಿನ್ನೆಲೆಯಲ್ಲಿ ಅದನ್ನು ಎದುರಿಸುವುದು ಆರೋಗ್ಯ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ.

ಪ್ರಸ್ತುತ ಕೋವಿಡ್‌ ನಿಯಂತ್ರಣಕ್ಕಾಗಿ ಹೊರಡಿಸಿದ ಕೋವಿಡ್‌ ಮಾನದಂಡಗಳನ್ನು ಯಾರೂ ಗಂಭೀರವಾಗಿ ಪರಿಗಣಿಸದ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ವಾರಾಂತ್ಯ ಕರ್ಫ್ಯೂ, ರಾತ್ರಿ ಕರ್ಫ್ಯೂ ಜಾರಿಗೆ ಸರಕಾರ ಪರಿಶೀಲಿಸುತ್ತಿದೆ.

ಇನ್ನು ಕರ್ನಾಟಕದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 40,499 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಅವರು ಬುಧವಾರ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಇಂದು ಸಹ ಪಾಸಿಟಿವ್ ಪ್ರಕರಣಗಳ ಸಂಖ್ಯೆ 40 ಸಾವಿರ ದಾಟುವ ಮೂಲಕ ಪಾಸಿಟಿವ್ ಪ್ರಮಾಣ ಶೇ. 18.80ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಏಳು ಮಂದಿ ಸೇರಿದಂತೆ ರಾಜ್ಯದಲ್ಲಿ ಕೊರೊನಾದಿಂದ ಇಂದು 21 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬರೋಬ್ಬರಿ 24,135 ಮಂದಿಗೆ ಸೋಂಕು ದೃಢಪಟ್ಟಿದ್ದು, ಐವರು ಕೊರೊನಾದಿಂದ ಮೃತಪಟ್ಟಿದ್ದಾರೆ.

Recommended Video

Budget 2022 Expectations: ಕೇಂದ್ರ ಬಜೆಟ್ ನಲ್ಲಿ ಕೃಷಿ ಕ್ಷೇತ್ರದಿಂದಿರೋ ನಿರೀಕ್ಷೆಗಳೇನು? | Oneindia Kannada

ರಾಜ್ಯದಲ್ಲಿ ಇಂದು 23,209 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 2,67,650 ಸಕ್ರಿಯ ಪ್ರಕರಣಗಳಿವೆ. ಇಂದು 2,15,312 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ ಎಂದು ಸುಧಾಕರ್ ಹೇಳಿದ್ದಾರೆ.

English summary
On January 1, number of new Covid-19 cases in Kerala was 2,435. Only 169 people were admitted to various hospitals due to the virus. Nineteen days later, the state's daily Covid tally has gone up to 34,199 with 1094 people being admitted to hospital for treatment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X