ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಕೋವಿಡ್ ನಿಯಮ ಜಾರಿ ಮಾಡಿದ ಕೇರಳ ಸರ್ಕಾರ

|
Google Oneindia Kannada News

ತಿರುವನಂತಪುರಂ, ಅಕ್ಟೋಬರ್ 04: ಕೇರಳ ಸರ್ಕಾರವು ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಕೋವಿಡ್ ನಿಯಮವನ್ನು ಜಾರಿ ಮಾಡಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗದಿರುವ ಹಿನ್ನೆಲೆಯಲ್ಲಿ ಹೊಸ ನಿಯಮಗಳನ್ನು ಜಾರಿ ಮಾಡಲಾಗಿದೆ.

ರಾಜ್ಯಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗಾಗಿ ಕೇರಳ ಸರ್ಕಾರ ತನ್ನ ಮಾರ್ಗಸೂಚಿಗಳನ್ನು ನವೀಕರಿಸಿದೆ. ಈ ನೂತನ ಕ್ರಮವು ಕೇಂದ್ರ ಆರೋಗ್ಯ ಸಚಿವಾಲಯದ ಶಿಫಾರಸನ್ನು ಆಧರಿಸಿದೆ.

 4 ವಾರಗಳ ಬಳಿಕ ಕೋವಿಶೀಲ್ಡ್ ಲಸಿಕೆಯ 2ನೇ ಡೋಸ್: ಆದೇಶ ತಡೆಗೆ ಕೇರಳ ಹೈಕೋರ್ಟ್ ನಕಾರ 4 ವಾರಗಳ ಬಳಿಕ ಕೋವಿಶೀಲ್ಡ್ ಲಸಿಕೆಯ 2ನೇ ಡೋಸ್: ಆದೇಶ ತಡೆಗೆ ಕೇರಳ ಹೈಕೋರ್ಟ್ ನಕಾರ

ಹೊಸ ಮಾರ್ಗಸೂಚಿ ಅಡಿಯಲ್ಲಿ ಯುಕೆಯಿಂದ ಆಗಮಿಸುವ ಪ್ರಯಾಣಿಕರು 10 ದಿನಗಳ ಹೋಮ್ ಕ್ವಾರಂಟೈನ್‌ಗೆ ಒಳಗಾಗಬೇಕು. ಹಾಗೆ ದಕ್ಷಿಣ ಆಫ್ರಿಕಾ, ಬ್ರೆಜಿಲ್ ಮತ್ತು ಯುರೋಪ್ ನಿಂದ ಬರುವವರು 7 ದಿನಗಳ ಕ್ವಾರಂಟೈನ್ ಗೆ ಒಳಗಾಗಬೇಕಾಗುತ್ತದೆ.

Know About Keralas New Rules For International Travellers

ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರು ರಾಜ್ಯದ ವಿಮಾನ ನಿಲ್ದಾಣಗಳನ್ನು ತಲುಪಿದ ನಂತರ RT-PCR ಪರೀಕ್ಷೆಯನ್ನು ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಪರೀಕ್ಷೆ ನಡೆಸಿದ ನಂತರ ಏನಾದರೂ ರೋಗ ಲಕ್ಷಣ ಕಂಡುಬಂದರೆ 14 ದಿನಗಳ ಕ್ವಾರಂಟೈನ್​ ಕಡ್ಡಾಯ.

ಕೋವಿಡ್ ಪರೀಕ್ಷೆಯ ಹೊರತಾಗಿ, ಯುಕೆ, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಯುರೋಪ್, ಮಧ್ಯಪ್ರಾಚ್ಯ, ಬಾಂಗ್ಲಾದೇಶ, ಬೋಟ್ಸ್ವಾನ, ಚೀನಾ, ಮಾರಿಷಸ್, ನ್ಯೂಜಿಲ್ಯಾಂಡ್ ಮತ್ತು ಜಿಂಬಾಬ್ವೆ ದೇಶಗಳ ಪ್ರಯಾಣಿಕರ ಮಾದರಿಗಳನ್ನು ವೈರಸ್ ರೂಪಾಂತರದ ಉಪಸ್ಥಿತಿಯನ್ನು ಪರೀಕ್ಷಿಸಲು ಮಾದರಿ ರವಾನಿಸಲಾಗುತ್ತದೆ.

ಭಾನುವಾರ ಕೇರಳದಲ್ಲಿ 12,297 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 74 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 25,377 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 47,20,233 ಪ್ರಕರಣಗಳಿವೆ. 16,333 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ 45,57,199 ಮಂದಿ ಗುಣಮುಖರಾಗಿದ್ದಾರೆ. 1,37,043 ಸಕ್ರಿಯ ಪ್ರಕರಣಗಳಿವೆ.

ಕೊರೊನಾ 3ನೇ ಅಲೆ ಭೀತಿ ನಡುವೆಯೇ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 20,799 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 180 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಸೋಮವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,38,34,702ಕ್ಕೆ ತಲುಪಿದ್ದು, 4,48,997ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,64,458ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 26,718 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,31,21,247ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 9,91,676 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 57,42,52,400 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

English summary
Kerala Health Minister Veena George announced that the state would have new mandatory quarantine regulations for international travellers beginning Monday in line with guidelines from the Union Health Ministry.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X