ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕೇರಳ; ಪೊಲೀಸರ ಮೇಲೆ ಹಲ್ಲೆ, 50 ಜನರ ವಿರುದ್ಧ ಪ್ರಕರಣ

|
Google Oneindia Kannada News

ತಿರುವನಂತಪುರಂ, ಆಗಸ್ಟ್ 22: ಭಾನುವಾರ ರಾತ್ರಿ ಕೋಯಿಕ್ಕೋಡ್ ಬೀಚ್‌ನಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮದಲ್ಲಿ ಉಂಟಾದ ಘರ್ಷಣೆಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿದ್ದು, 50 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕಾರ್ಯಕ್ರಮ ಸ್ಥಳದಲ್ಲಿ ನಿಲ್ಲಲಾಗದವರು ಗಲಾಟೆ ಸೃಷ್ಟಿಸಿದರು ಮತ್ತು ಜನದಟ್ಟಣೆಯಿಂದ ಬ್ಯಾರಿಕೇಡ್‌ಗಳಿಗೂ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಶಾಲೆಗಳಲ್ಲಿ ಹುಡುಗ ಹುಡುಗಿಯರು ಒಟ್ಟಿಗೆ ಕುಳಿತುಕೊಳ್ಳುವುದು ಅಪಾಯಕಾರಿ': ಕೇರಳದಲ್ಲಿ ವಿವಾದ'ಶಾಲೆಗಳಲ್ಲಿ ಹುಡುಗ ಹುಡುಗಿಯರು ಒಟ್ಟಿಗೆ ಕುಳಿತುಕೊಳ್ಳುವುದು ಅಪಾಯಕಾರಿ': ಕೇರಳದಲ್ಲಿ ವಿವಾದ

ಜನ ದಟ್ಟಣೆಯಿಂದಾಗಿ ಪೊಲೀಸರು ಕಾರ್ಯಕ್ರಮವನ್ನು ನಿಲ್ಲಿಸಲು ಒತ್ತಾಯಿಸಿದ್ದಾರೆ. ಇದರ ಪರಿಣಾಮವಾಗಿ ಕೆಲವು ಸಾರ್ವಜನಿಕರು ಕಲ್ಲುಗಳು ಮತ್ತು ಬಿಯರ್ ಬಾಟಲಿಗಳನ್ನು ಬಳಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವೆಲ್ಲಾಯಿಲ್ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Kozhikode Beach Concert: Assault On Police, Case Against 50 Persons

ಬೀಚ್ ನಲ್ಲಿ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ನೂಕುನುಗ್ಗಲು ಉಂಟಾಗಿ ಬ್ಯಾರಿಕೇಡ್ ಕುಸಿದಿದೆ. ಘಟನೆಯಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ. ಬೀಚ್‌ನಿಂದ ಜನರನ್ನು ಸ್ಥಳಾಂತರಿಸಲು ಪೊಲೀಸರು ಲಾಠಿ ಬೀಸಿದ್ದರು.

ಕೆಲವು ಸಾರ್ವಜನಿಕರು ಕಲ್ಲುಗಳು ಮತ್ತು ಬಿಯರ್ ಬಾಟಲಿಗಳನ್ನು ಎಸೆದ ಪರಿಣಾಮವಾಗಿ ಆರು ಪೊಲೀಸರು ಮತ್ತು 70 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಚ್ಚುವರಿ ಪೊಲೀಸ್ ಪಡೆಯನ್ನು ಕರೆಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ 50 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳಲ್ಲಿ ಒಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದರು.

ಅಲ್ಲದೆ, ಸಾಕಷ್ಟು ಸೌಲಭ್ಯಗಳಿಲ್ಲದೆ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಮತ್ತು ಅನುಮತಿಗೆ ಅನುಗುಣವಾಗಿ ಕಾರ್ಯಕ್ರಮವನ್ನು ನಡೆಸಿದಕ್ಕಾಗಿ ಜೆಡಿಟಿ ಇಸ್ಲಾಂ ಕಾಲೇಜಿನ ನೋವು ಮತ್ತು ಉಪಶಮನ ಆರೈಕೆ ಘಟಕದ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಗಾಲಿಕುರ್ಚಿಗಳನ್ನು ಖರೀದಿಸಲು ಹಣವನ್ನು ಸಂಗ್ರಹಿಸಲು ತಮ್ಮ ಚಾರಿಟಿ ಕಾರ್ಯಕ್ರಮದ ಭಾಗವಾಗಿ ಬೀಚ್‌ನಲ್ಲಿ ವಿದ್ಯಾರ್ಥಿಗಳು ಕೆಲವು ಸಣ್ಣ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು,, ಸಣ್ಣ ಸ್ಟಾಲ್‌ಗಳನ್ನು ನಿರ್ಮಿಸಲು ಮತ್ತು ಪ್ರದರ್ಶಿಸಲು ಮಾತ್ರ ಕಾಲೇಜಿಗೆ ಅನುಮತಿ ನೀಡಲಾಗಿದೆ ಎಂದು ಅಧಿಕಾರಿ ಹೇಳಿದರು.

ಆದರೆ, ಕಾರ್ಯಕ್ರಮ ಆಯೋಜಕರು ಸಂಗೀತ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಚಾರ ಮಾಡಿದ್ದಾರೆ. ಪ್ರತಿ ವ್ಯಕ್ತಿಗೆ 150 ರೂಪಾಯಿಯ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರವಾದ್ದರಿಂದ ಬೀಚ್‌ಗೆ ಹೆಚ್ಚಿನ ಜನ ಆಗಮಿಸಿದ್ದು, ಹಲವರು ಆನ್‌ಲೈನ್‌ ಮೂಲಕ ಟಿಕೆಟ್‌ ಖರೀದಿಸಿದ್ದಾರೆ. ಆದರೆ ಅವರೆಲ್ಲರಿಗೂ ಸ್ಥಳಾವಕಾಶ ಕಲ್ಪಿಸಲು ಸಾಧ್ಯವಾಗದೆ ಕೆಲ ಸಮಯದ ಬಳಿಕ ಸ್ಥಳದಲ್ಲಿ ಟಿಕೆಟ್ ಮಾರಾಟವನ್ನೂ ನಿಲ್ಲಿಸಬೇಕಾಗಿ ಬಂದಿದ್ದು, ಗೊಂದಲಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Recommended Video

ಆತ್ಮ ನಿರ್ಭರ ಭಾರತದ ಮೊದಲ ಹೈಡ್ರೋಜನ್ ಇಂಧನ ಚಾಲಿತ ಬಸ್ ಅನಾವರಣ | Oneindia Kannada

English summary
Kozhikode Beach Concert: Police case against 50 persons for attacking the police on concert. One person has been arrested. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X