1,000 ಪ್ರಕರಣ ದಾಖಲಾಗುತ್ತಿದ್ದಂತೆ ಕೇರಳ ಲಾಕ್ ಡೌನ್!

ತಿರುವನಂತಪುರಂ, ಜುಲೈ.23: ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಕಳೆದ 24 ಗಂಟೆಗಳಲ್ಲೇ 1,000 ಗಡಿ ದಾಟಿರುವುದನ್ನು ಕೇರಳದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ.

Recommended Video

      India vs China : ಪಾಕಿಸ್ತಾನವನ್ನು ಬಿಟ್ಟು ಚೀನಾವನ್ನು ಟಾರ್ಗೆಟ್ ಮಾಡಿದ ಭಾರತ | Oneindia Kannada

      ಕೇರಳದಲ್ಲಿ ಮೊದಲ ಬಾರಿಗೆ ಒಂದೇ ದಿನದಲ್ಲಿ 1,000 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ಮತ್ತೊಮ್ಮೆ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

      ಈ ಮೊದಲು ಮಹಾಮಾರಿಯನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಶಿಸ್ತುಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಲಾಕ್ ಡೌನ್ ನಿಂದಾಗಿ ಸೋಂಕಿತರ ಪ್ರಮಾಣ ಮತ್ತು ಹರಡುವಿಕೆ ವೇಗವು ತಗ್ಗಿತ್ತು. ಆದರೆ ಇದೀಗ ಮತ್ತೆ ಸೋಂಕಿತ ಪ್ರಮಾಣ ಹೆಚ್ಚಾದ ಹಿನ್ನೆಲೆ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಈ ಬಗ್ಗೆ ಅಧಿಕೃತವಾಗಿ ಇನ್ನಷ್ಟೇ ತೀರ್ಮಾನ ಕೈಗೊಳ್ಳಬೇಕಿದೆ ಎಂದು ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

      lockdown Reimpose: 1,000 Fresh Cases Were Reported In The Last 24 hours In Kerala


      ಕೇರಳದಲ್ಲಿ ಒಂದೇ ದಿನ 1038 ಜನರಿಗೆ ಸೋಂಕು:

      ಕಳೆದ 24 ಗಂಟೆಗಳಲ್ಲೇ ಕೇರಳದಲ್ಲಿ 1038 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿದ್ದು, ಈ ಪೈಕಿ ರಾಜಧಾನಿ ತಿರುವನಂತಪುರಂನಲ್ಲಿಯೇ 226 ಜನರಿಗೆ ಮಹಾಮಾರಿ ಅಂಟಿಕೊಂಡಿತ್ತು. ಇದರಿಂದ ರಾಜ್ಯದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆಯು 8818ಕ್ಕೆ ಏರಿಕೆಯಾಗಿದೆ. ಎಲ್ಲ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, 53 ಜನರಿಗೆ ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದೆ. ರಾಜ್ಯದಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ ಎಂದು ಸಿಎಂ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದಾರೆ.

      ಕೇರಳದಲ್ಲಿ ಹೊಸದಾಗಿ 51 ಪ್ರದೇಶಗಳನ್ನು ಕೊರೊನಾವೈರಸ್ ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ. ಇದರಿಂದ ರಾಜ್ಯದಲ್ಲಿನ ಒಟ್ಟು ಹಾಟ್ ಸ್ಪಾಟ್ ಪ್ರದೇಶಗಳ ಸಂಖ್ಯೆಯು 397ಕ್ಕೆ ಏರಿಕೆಯಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+