ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳ ಸಿಎಂ ಭೇಟಿಯಾದ ಕೆ.ಚಂದ್ರಶೇಖರ ರಾವ್!

|
Google Oneindia Kannada News

ತಿರುವನಂತಪುರಂ, ಮೇ 06 : ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ತೃತೀಯ ರಂಗ ರಚನೆಯ ಕಾರ್ಯಕ್ಕೆ ಕೈ ಹಾಕಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯೇತರ ಸರ್ಕಾರ ರಚನೆಯ ಕಸರತ್ತನ್ನು ಆರಂಭಿಸಿದ್ದಾರೆ.

ಸೋಮವಾರ ಸಂಜೆ ಚಂದ್ರಶೇಖರ ರಾವ್ ತಿರುವನಂತಪುರದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ಮಾಡಿ ಮಾತುಕತೆ ನಡೆಸಿದರು. ದೇಶದ ರಾಜಕಾರಣದಲ್ಲಿ ಈ ಭೇಟಿ ಬಾರಿ ಮಹತ್ವ ಪಡೆದುಕೊಂಡಿದೆ.

ಎಚ್ಡಿಕೆ-ಕೆಸಿಆರ್ ಮಾತುಕತೆ: ರಾಷ್ಟ್ರ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ?ಎಚ್ಡಿಕೆ-ಕೆಸಿಆರ್ ಮಾತುಕತೆ: ರಾಷ್ಟ್ರ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ?

ಚಂದ್ರಶೇಖರ ರಾವ್ ಅವರು ಮೇ 13ರಂದು ಡಿಎಂಕೆ ಅಧ್ಯಕ್ಷ ಕೆ.ಸ್ಟಾಲಿನ್ ಭೇಟಿಯಾಗಲಿದ್ದಾರೆ. ಲೋಕಸಭಾ ಚುನಾವಣೆ ಫಲಿತಾಂಶ ಮೇ 23ರಂದು ಪ್ರಕಟವಾಗಲಿದ್ದು, ಅದಕ್ಕೂ ಮೊದಲು ಚಂದ್ರಶೇಖರರಾವ್ ವಿವಿಧ ಪಕ್ಷದ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ.

ತೆಲಂಗಾಣದಲ್ಲಿ ಚಿಗುರುತ್ತಲೇ ಇದೆ ಸಂಯುಕ್ತರಂಗದ ಕನಸು!ತೆಲಂಗಾಣದಲ್ಲಿ ಚಿಗುರುತ್ತಲೇ ಇದೆ ಸಂಯುಕ್ತರಂಗದ ಕನಸು!

Chandrashekar Rao

ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್‌ ಮತ್ತು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿಲ್ಲ. ಲೋಕಸಭಾ ಚುನಾವಣೆಯಲ್ಲಿ 120 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸುವ ವಿಶ್ವಾಸವಿದ್ದು, ಕೇಂದ್ರದಲ್ಲಿ ಸರ್ಕಾರ ರಚನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಬಹುದು ಎಂದು ನಿರೀಕ್ಷಿಸಲಾಗಿದೆ.

ಚಂದ್ರಶೇಖರ ರಾವ್ ಅವರು ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಲಿದ್ದಾರೆ ಎಂಬ ಸುದ್ದಿಗಳಿವೆ. ಆದರೆ, ಕಾಂಗ್ರೆಸ್‌-ಬಿಜೆಪಿಯೇತರ ಸರ್ಕಾರ ರಚನೆಯ ಪ್ರಯತ್ನದಲ್ಲಿರುವ ಅವರು, ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡು ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿ ಅವರನ್ನು ತೃತೀಯ ರಂಗಕ್ಕೆ ಸೇರಿಸಿಕೊಳ್ಳಲಿದ್ದಾರೆಯೇ? ಎಂಬುದು ಪ್ರಶ್ನೆಯಾಗಿದೆ.

English summary
TRS supremo and Telangana Chief Minister K.Chandrashekar Rao met the Kerala CM Pinarayi Vijayan on Monday evening. K.Chandrashekar Rao in a effort to form third front ahead of the Lok sabha elections 2019 result.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X