Breaking: ನೇಣು ಬಿಗಿದುಕೊಂಡು ಮಲಯಾಳಂ ನಟ ಆತ್ಮಹತ್ಯೆ
ತಿರುವನಂತಪುರಂ, ಜೂನ್ 27: ಮಲಯಾಳಂ ಚಲನಚಿತ್ರ ರಂಗದ ಜನಪ್ರಿಯ ನಟ ಎನ್. ಡಿ ಪ್ರಸಾದ್ ಮೃತಪಟ್ಟಿದ್ದಾರೆ. ನಟ ಪ್ರಸಾದ್ ತಮ್ಮ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಪ್ರಸಾದ್ ಶವ ಕಂಡ ಅವರ ಮಕ್ಕಳು ನೆರೆಮನೆಯವರಿಗೆ ವಿಷಯ ತಿಳಿಸಿದ್ದಾರೆ.
ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಅಗಲಿರುವ ಪ್ರಸಾದ್ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಬಗ್ಗೆ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಜರು ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನೆರೆಮನೆಯವರ ಹೇಳಿಕೆ ಪಡೆದುಕೊಂಡಿದ್ದು, ಪ್ರಾಥಮಿಕ ತನಿಖೆಯಂತೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. ಜೂನ್ 25ರಂದು ಎನ್ ಡಿ ಪ್ರಸಾದ್ ಮೃತಪಟ್ಟಿದ್ದು, ಘಟನೆ ಬಗ್ಗೆ ವಿವರಗಳು ತಡವಾಗಿ ಬೆಳಕಿಗೆ ಬಂದಿದೆ.

43 ವರ್ಷ ವಯಸ್ಸಿನ ಪ್ರಸಾದ್ ಜೂನ್ 25 ರಂದು ಕೊಚ್ಚಿ ಬಳಿಯ ಕಲಮಚ್ಚೇರಿಯಲ್ಲಿರುವ ತಮ್ಮ ಮನೆಯ ಹೊರಗಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಎನ್‌ಡಿ ಪ್ರಸಾದ್ ಅನೇಕ ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದರೂ ಆಕ್ಷನ್ ಹೀರೋ ಬಿಜು ಚಿತ್ರದಲ್ಲಿನ ಅವರ ಅಭಿನಯವು ಜನಪ್ರಿಯತೆ ತಂದುಕೊಟ್ಟಿತ್ತು.
ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಕೌಟುಂಬಿಕ ಸಮಸ್ಯೆಗಳು ಪ್ರಸಾದ್ ಅವರನ್ನು ಕಾಡುತ್ತಿದ್ದು, ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು. "ಕೆಲ ತಿಂಗಳಿಂದ ಪತ್ನಿಯೂ ದೂರ ಉಳಿದಿದ್ದರು ಹೀಗಾಗಿ, ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ತಿಳಿದು ಬಂದಿದೆ'' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2021ರಲ್ಲಿ ಬಂಧನಕ್ಕೊಳಗಾಗಿದ್ದ ಪ್ರಸಾದ್:
ಈ ಹಿಂದೆ ಪ್ರಸಾದ್ ಮಾದಕ ದ್ರವ್ಯ ಸೇವನೆ ಆರೋಪ ಹೊತ್ತಿದ್ದರು. 2021ರಲ್ಲಿ ಸಿಂಥೆಟಿಕ್ ಡ್ರಗ್ಸ್ (2.5 ಗ್ರಾಂ ಹ್ಯಾಶಿಶ್ ಆಯಿಲ್ ಮತ್ತು 15 ಗ್ರಾಂ ಗಾಂಜಾ) ಹೊಂದಿದ್ದ ಕಾರಣಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳು ಪ್ರಸಾದ್ ಅವರನ್ನು ಬಂಧಿಸಿತ್ತು. ಜತೆಗೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಎನ್‌ಡಿ ಪ್ರಸಾದ್ ಅವರ ಪಾರ್ಥಿವ ಶರೀರವನ್ನು ಜೂನ್ 26 ರಂದು ವೈದ್ಯರು ಶವಪರೀಕ್ಷೆ ನಡೆಸಿದ ನಂತರ ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಎನ್‌ಡಿ ಪ್ರಸಾದ್ ಅವರು ಇಬಾ ಮತ್ತು ಕರ್ಮಣಿಯಂತಹ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ನಿವಿನ್ ಪೌಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಆಕ್ಷನ್ ಹೀರೋ ಬಿಜು ಚಿತ್ರದಲ್ಲಿ ನೆಗಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications