ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಣರಾಯಿ ವಿಜಯನ್ ಗೆ ಕೊಲೆ ಬೆದರಿಕೆ: ವ್ಯಕ್ತಿ ಬಂಧನ

|
Google Oneindia Kannada News

ಕಾಸರಗೋಡು, ಅಕ್ಟೋಬರ್ 31: ಫೇಸ್ ಬುಕ್ ಪೋಸ್ಟ್ ವೊಂದರಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಹತ್ಯೆಮಾಡುವುದಾಗಿ ಬೆದರಿಕೆ ಒಡ್ಡಿದ್ದ ವ್ಯಕ್ತಿಯನ್ನು ಚಂದೆರಾ ಪೊಲೀಸರು ಬಂಧಿಸಿದ್ದಾರೆ.

ಕಾಸರಗೋಡಿನ ಚೀಮೆನಿಯ ವಾಲಿಯಪಾಯ್ಲ್ ಎಂಬಲ್ಲಿಯ ಕೆ ಸಿ ರಂಜಿತ್ ಎಂಬುವವರ ಮೇಲೆ ದೂರು ದಾಖಲಿಸಿದ್ದಾರೆ.

ಶಬರಿಮಲೆಗೆ ಮುಸ್ಲಿಂ, ಕ್ರೈಸ್ತ ಮಹಿಳೆಯರು ಪ್ರವೇಶಿಸಲು ಪ್ರಯತ್ನಿಸಿದ್ದೇಕೆ?ಶಬರಿಮಲೆಗೆ ಮುಸ್ಲಿಂ, ಕ್ರೈಸ್ತ ಮಹಿಳೆಯರು ಪ್ರವೇಶಿಸಲು ಪ್ರಯತ್ನಿಸಿದ್ದೇಕೆ?

'ಶಬರಿಮಲೆಯಲ್ಲಿ ಸಂಪ್ರದಾಯವನ್ನು ಕಾಪಾಡುವ ಸಲುವಾಗಿ ಪಿಣರಾಯಿ ವಿಜಯನ್ ಅವರನ್ನು ಹತ್ಯೆ ಮಾಡುವ ಸಂದರ್ಭ ಬಂದರೆ ಆ ಕೆಲಸವನ್ನೂ ಮಾಡಬೇಕು' ಎಂದು ರಂಜಿತ್ ಪೊಡುವಾಲ್ ಎಂಬುವವರು ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ಹೇಳಿಕೊಂಡಿದ್ದರು.

CM Pinarayi Vijayan

'ಪಿಣರಾಯಿ ವಿಜಯನ್ ಅವರನ್ನು ಕೊಂದರೆ ಶಬರಿಮಲೆಯಲ್ಲಿ ಭಕ್ತರ ನಂಬಿಕೆಗಳನ್ನು ಉಳಿಸಿಕೊಳ್ಳುವುದಕ್ಕೆ ಸಾಧ್ಯ' ಎಂದು ಸಹ ಅವರು ಬರೆದುಕೊಂಡಿದ್ದರು.

ಶಬರಿಮಲೆ ದೇಗುಲ ಹಿಂಸಾಚಾರ; 1400ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆಶಬರಿಮಲೆ ದೇಗುಲ ಹಿಂಸಾಚಾರ; 1400ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ

ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ನಿರ್ದಿಷ್ಟ ವಯೋಮಿತಿಯ ಮಹಿಳೆಯರ ಪ್ರವೇಶಕ್ಕಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿತ್ತು. ತೀರ್ಪಿನ ನಂತರ ಮೊದಲ ಬಾರಿಗೆ ಅಯ್ಯಪ್ಪ ದೇವಾಲಯದ ಬಾಗಿಲು ತೆರೆದಾಗ ದೇವಾಲಯಕ್ಕೆ ಪ್ರವೇಶಿಸಲು ಯತ್ನಿಸಿದ ಹಲವು ಮಹಿಳೆಯರನ್ನು ತಡೆಯಲಾಗಿತ್ತು.

ಕೇರಳದಲ್ಲಿ ದಿನೇದಿನೇ ಹೆಚ್ಚಾಗುತ್ತಿರುವ ಬಿಜೆಪಿ ಪ್ರಭಾವ: ಪಿಣರಾಯಿಗೆ ಅದೇ ಚಿಂತೆ?ಕೇರಳದಲ್ಲಿ ದಿನೇದಿನೇ ಹೆಚ್ಚಾಗುತ್ತಿರುವ ಬಿಜೆಪಿ ಪ್ರಭಾವ: ಪಿಣರಾಯಿಗೆ ಅದೇ ಚಿಂತೆ?

ಈ ಸಂದರ್ಭದಲ್ಲಿ ಶಮರಿಮಲೆಯಲ್ಲಿ ಸಾಕಷ್ಟು ಗಲಭೆ ಎದ್ದಿದ್ದು. ಈ ಗಲಭೆಯಲ್ಲಿ ಆರೆಸ್ಸೆಸ್ ಮತ್ತು ಬಿಜೆಪಿಯ ಕೈವಾಡವಿದೆ ಎಂದು ಸ್ವತಃ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ದೂರಿದ್ದರು. ನಂತರ 2000 ಕ್ಕೂ ಹೆಚ್ಚು ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದಕ್ಕೆ ದೇಶದಾದ್ಯಂತ ಬಿಜೆಪಿ, ಆರೆಸ್ಸೆಸ್ ಬೆಂಬಲಿಗರಿಂದ ಆಕ್ರೋಶ ವ್ಯಕ್ತವಾಗಿತ್ತು.

English summary
Chandera police has filed a case against a person for threatening to kill Chief Minister of Kerala Pinarayi Vijayan in a Facebook post. The case was framed against one K.C Ranjith of Valiyapoil, Cheemeni in Kasargod.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X