ಕೋವಿಡ್‌ನಿಂದ ಗುಣಮುಖನಾದ ವ್ಯಕ್ತಿ ಆತ್ಮಹತ್ಯೆಗೆ ಶರಣು!
ತಿರುವನಂತಪುರಂ, ಅಕ್ಟೋಬರ್ 26: ಕೋವಿಡ್‌ನಿಂದ ಗುಣಮುಖನಾಗಿದ್ದ ವ್ಯಕ್ತಿ ಡಿಸ್ಚಾರ್ಜ್ ಆಗಬೇಕಾದ ದಿನವೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದಲ್ಲಿ ನಡೆದಿದೆ. ಸಹೋದರ ಸಾವಿನಿಂದ ನೊಂದಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
38 ವರ್ಷದ ವ್ಯಕ್ತಿ ತಿರುವನಂತಪುರಂನ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೋವಿಡ್‌ನಿಂಗ ಚೇತರಿಸಿಕೊಂಡಿದ್ದ ವ್ಯಕ್ತಿಯನ್ನು ಭಾನುವಾರ ಡಿಸ್ಚಾರ್ಜ್ ಮಾಡಬೇಕಿತ್ತು.
ಅಕ್ಟೋಬರ್ 3ರಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ. ಶುಕ್ರವಾರ ಮನೋ ವೈದ್ಯರು ಚಿಕಿತ್ಸೆ ನೀಡಲು ಬಂದಾಗ ಬಾತ್ ರೂಂನಲ್ಲಿ ಅಡಗಿ ಕುಳಿತಿದ್ದ. ಭಾನುವಾರವೂ ಬಾತ್ ರೂಂನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಿಜೈ ಎಂಬ ರೋಗಿ ಆಸ್ಪತ್ರೆಗೆ ದಾಖಲಾಗುವ ಎರಡು ದಿನಗಳ ಹಿಂದೆ ಸಹೋದರನನ್ನು ಕಳೆದುಕೊಂಡಿದ್ದ. ಇದರಿಂದ ಆತ ಆಘಾತಗೊಂಡಿದ್ದ. ಕೋವಿಡ್ ಸೋಂಕು ತಗುಲಿದ ಕಾರಣ ಆತನನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದುವರೆಗೂ ತಿರುವನಂತಪುರಂನ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಕೋವಿಡ್ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೇರಳದಲ್ಲಿ ಸೋಮವಾರ 4,287 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 93,747.











Click it and Unblock the Notifications