ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಸಿಕೆ ಪಡೆದಿಲ್ಲವೇ? ಕೋವಿಡ್‌ಗೆ ಸರ್ಕಾರದಿಂದ ಉಚಿತ ಚಿಕಿತ್ಸೆ ಇಲ್ಲ!

|
Google Oneindia Kannada News

ತಿರುವನಂತಪುರಂ, ನವೆಂಬರ್ 30; ಕೇರಳದಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕಳೆದ 24 ಗಂಟೆಯಲ್ಲಿ 4,723 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 43,663.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೋವಿಡ್ ಹರಡುವಿಕೆ ತಡೆಗೆ ಜನರ ಸಹಕಾರ ಕೋರಿದ್ದದಾರೆ. ಮಾರ್ಗಸೂಚಿಗಳನ್ನು ಪಾಲನೆ ಮಾಡದಿದ್ದರೆ ಕೋವಿಡ್ ಸೋಂಕು ತಗುಲಿದರೆ ಉಚಿತ ಚಿಕಿತ್ಸೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಕೇರಳ ಮತ್ತು ಮಹಾರಾಷ್ಟ್ರದ ಪ್ರಯಾಣಿಕರ ಬಗ್ಗೆ ಕಟ್ಟೆಚ್ಚರ ಕರ್ನಾಟಕದಲ್ಲಿ ಕೇರಳ ಮತ್ತು ಮಹಾರಾಷ್ಟ್ರದ ಪ್ರಯಾಣಿಕರ ಬಗ್ಗೆ ಕಟ್ಟೆಚ್ಚರ

ಯಾರು ಇದುವರೆಗೂ ಆರೋಗ್ಯ ಪರಿಸ್ಥಿತಿಯ ಕಾರಣಕ್ಕೆ ಕೋವಿಡ್ ಲಸಿಕೆ ಪಡೆದಿಲ್ಲವೋ ಅವರು ಆ ಕುರಿತು ಸರ್ಕಾರಿ ವೈದ್ಯರಿಂದ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಕೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ಮಂಗಳವಾರ ತಿಳಿಸಿದ್ದಾರೆ.

ಕೇರಳ ಗಡಿಭಾಗದ ಪೆಟ್ರೋಲ್ ಬಂಕ್‌ಗಳಲ್ಲಿ ಭರ್ಜರಿ ವ್ಯಾಪಾರ! ಕೇರಳ ಗಡಿಭಾಗದ ಪೆಟ್ರೋಲ್ ಬಂಕ್‌ಗಳಲ್ಲಿ ಭರ್ಜರಿ ವ್ಯಾಪಾರ!

Medical Bill Not Paid For Who Not Taken Covid Vaccine Says Kerala Govt

ಕೋವಿಡ್ ಮಾರ್ಗಸೂಚಿ ಪಾಲನೆಗೆ ಸಹಕಾರ ನೀಡದಿದ್ದರೆ ಉಚಿತ ಚಿಕಿತ್ಸೆ ನೀಡುವುದಿಲ್ಲ. ಶಿಕ್ಷಕರು, ಕಚೇರಿಯಿಂದ ಕೆಲಸ ಮಾಡುವ ಉದ್ಯೋಗಿಗಳು, ಜನರ ಜೊತೆ ವ್ಯವಹಾರ ನಡೆಸುವವರು ಪ್ರತಿವಾರ ಆರ್‌ಟಿಪಿಸಿಆರ್ ಪರೀಕ್ಷೆ ವರದಿಯನ್ನು ಸಲ್ಲಿಸಬೇಕು, ಇದಕ್ಕಾಗಿ ಅವರೇ ಪರೀಕ್ಷಾ ವೆಚ್ಚ ಭರಿಸಬೇಕು ಎಂದು ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ.

ಸಿಹಿಸುದ್ದಿ: ಭಾರತದಲ್ಲಿ ಡಿಸೆಂಬರ್ ಹೊತ್ತಿಗೆ ಮಕ್ಕಳಿಗೂ ಕೊರೊನಾವೈರಸ್ ಲಸಿಕೆ ಸಿಹಿಸುದ್ದಿ: ಭಾರತದಲ್ಲಿ ಡಿಸೆಂಬರ್ ಹೊತ್ತಿಗೆ ಮಕ್ಕಳಿಗೂ ಕೊರೊನಾವೈರಸ್ ಲಸಿಕೆ

"ಆರೋಗ್ಯ ಸಮಸ್ಯೆಯಿಂದಾಗಿ ಇದುವರೆಗೂ ಕೋವಿಡ್ ಲಸಿಕೆ ಪಡೆಯದ ಶಿಕ್ಷಕರು, ಬೋಧಕೇತರ ಸಿಬ್ಭಂದಿ ಸರ್ಕಾರಿ ವೈದ್ಯರಿಂದ ಈ ಕುರಿತು ಪ್ರಮಾಣ ಪತ್ರ ಪಡೆದು ಸಲ್ಲಿಸಬೇಕು. ಉಳಿದವರು 7 ದಿನಕ್ಕೊಮ್ಮೆ ಆರ್‌ಟಿಪಿಸಿಆರ್ ವರದಿ ಸಲ್ಲಿಸಬೇಕು" ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಶಾಲೆಗಳಲ್ಲಿನ ವಿದ್ಯಾರ್ಥಿಗಳು, ಸಿಬ್ಭಂದಿಗಳ ಹಿತದೃಷ್ಟಿಯಿಂದ ಇಂತಹ ತೀರ್ಮಾನ ಕೈಗೊಳ್ಳಲಾಗಿದೆ. ಈ ನಿಯಮಗಳು ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಭಂದಿಗಳಿಗೆ ಸಹ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ.

ವಿದೇಶದಿಂದ ಆಗಮಿಸುವ ಜನರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು. ಅಧಿಕಾರಿಗಳು ಮಾರ್ಗಸೂಚಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಲಸಿಕಾ ಅಭಿಯಾನ; ಕೇರಳ ಸರ್ಕಾರ ಡಿಸೆಂಬರ್ 1 ರಿಂದ 15ರ ತನಕ ವಿಶೇಷ ಲಸಿಕಾ ಅಭಿಯಾನ ಆಯೋಜನೆ ಮಾಡಲಿದೆ. ಶಾಲೆಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಅಂಗವಿಕಲ ಮಕ್ಕಳು ಸಹ ಶಾಲೆಗೆ ಆಗಮಿಸಲು ಅನುಮತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಓಮಿಕ್ರಾನ್ ಕೋವಿಡ್ ರೂಪಾಂತರಿ ಭೀತಿ ಹಿನ್ನಲೆಯಲ್ಲಿ ಕೋವಿಡ್ ಮಾರ್ಗಸೂಚಿಯಲ್ಲಿ ನಿರ್ಬಂಧ ಸಡಿಲಿಸಬಾರದು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

ಪ್ರಸ್ತುತ ದೇಶದಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿರುವ ರಾಜ್ಯ ಕೇರಳವಾಗಿದೆ. ಕೇರಳದಿಂದ ಬೇರೆ ರಾಜ್ಯಗಳಿಗೆ ಹೋಗುವ ವಿದ್ಯಾರ್ಥಿಗಳಿಂದಾಗಿ ಇತರ ರಾಜ್ಯಗಳಿಗೂ ಸೋಂಕು ಹಬ್ಬುತ್ತಿದೆ. ಮಂಗಳವಾರ ತುಮಕೂರು ಜಿಲ್ಲೆಯಲ್ಲಿ 15 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಈ ವಿದ್ಯಾರ್ಥಿಗಳು ಕೇರಳದಿಂದ ತುಮಕೂರಿನಲ್ಲಿರುವ ಎರಡು ನರ್ಸಿಂಗ್ ಕಾಲೇಜುಗಳಿಗೆ ಆಗಮಿಸಿದ್ದರು.

ಕರ್ನಾಟಕ ಸರ್ಕಾರ ಕೇರಳ ಮತ್ತು ಮಹಾರಾಷ್ಟ್ರದಿಂದ ಆಗಮಿಸುವವರ ಮೇಲೆ ಅದರಲ್ಲೂ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ. ವಿದ್ಯಾರ್ಥಿಗಳಿಗೆ ಆಗಮಿಸಿದ 7ನೇ ದಿನ ಕಡ್ಡಾಯವಾಗಿ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು ಎಂದು ಹೇಳಿದೆ.

8.3 ಲಕ್ಷ ಜನರಿಗೆ ಚಿಕಿತ್ಸೆ; ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ ಕೋವಿಡ್‌ ಚಿಕಿತ್ಸೆಯನ್ನು 8.3 ಲಕ್ಷ ಜನರು ಪಡೆದಿದ್ದಾರೆ ಎಂದು ಕೇಂದ್ರ ಸರ್ಕಾರ ಮಂಗಳವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.

Recommended Video

ಈ ವೈರಸ್ ಅಂದ್ರೆ ಸಾಮಾನ್ಯ ಅಲ್ಲ!! | Oneindia Kannada

8.3 ಲಕ್ಷ ಜನರ ಪೈಕಿ 4.7 ಲಕ್ಷ ಜನರು ಆಯುಷ್ಮಾನ್ ಯೋಜನೆಯಡಿ ಗುರುತಿಸಲಾಗಿರುವ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಆರೋಗ್ಯ ಖಾತೆ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ಲಿಖಿತ ಉತ್ತರ ನೀಡಿದ್ದಾರೆ. ಕೋವಿಡ್ ಸಾಂಕ್ರಮಿಕ ಪಿಡುಗನ್ನು ಎದುರಿಸಲು ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ನೆರವು ನೀಡಿದೆ.

English summary
Kerala chief minister Pinarayi Vijayan said if anyone not taken Corona vaccine treatment expense will not paid if he turned as Covid-19 positive.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X