ನಗ್ನ ವಿಡಿಯೋ ಪ್ರಸಾರ: ಕೇರಳದ CPI(M) ಕಾರ್ಯಕರ್ತನ ಬಂಧನ

ತಿರುವನಂತಪುರಂ, ಡಿಸೆಂಬರ್ 2: ಆನ್‌ಲೈನ್‌ನಲ್ಲಿ ತನ್ನ ಸಹ ಕಾರ್ಯಕರ್ತಳ ನಗ್ನ ವೀಡಿಯೊವನ್ನು ಪ್ರಸಾರ ಮಾಡಿದ್ದಕ್ಕಾಗಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸದಸ್ಯ ಚುಮಾತ್ರ ಎಲಿಮನ್ನಿಲ್ ಸಾಜಿ (39)(Chumathra Elimannil Saji) ಅವರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಅವರ ವಿರುದ್ಧ ಆರೋಪ ಹೊರಿಸಲಾಗಿತ್ತು. ಪ್ರಕರಣದಲ್ಲಿ 12 ಆರೋಪಿಗಳು ಭಾಗಿಯಾಗಿದ್ದಾರೆ. ಸಾಜಿಯನ್ನು ಹೊರತುಪಡಿಸಿ ಉಳಿದೆಲ್ಲ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಕೇರಳ ಪೊಲೀಸರ ಪ್ರಕಾರ, ಸಿಪಿಐ(ಎಂ) ಶಾಖೆಯ ಕಾರ್ಯದರ್ಶಿ ಸಿಸಿ ಸಜಿಮೋನ್(CC Sajimon) ಮತ್ತು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಮುಖಂಡ ನಾಸರ್ (Nasar) ಮಹಿಳೆಯನ್ನು ವಿವಸ್ತ್ರಗೊಳಿಸಿ ನಗ್ನ ಫೋಟೋಗಳನ್ನು ತೆಗೆದ ಆರೋಪ ಹೊತ್ತಿದ್ದಾರೆ. ನಂತರ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಶೇರ್ ಮಾಡಲಾಗಿದೆ. ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತ ಮಹಿಳೆ ಗಂಭೀರ ಆರೋಪ ಮಾಡಿದ್ದಾಳೆ.

ದೂರಿನ ಪ್ರಕಾರ, ಈ ವರ್ಷದ ಮೇ ತಿಂಗಳಲ್ಲಿ ಘಟನೆ ಸಂಭವಿಸಿದೆ. ಇಬ್ಬರು ಪ್ರಮುಖ ಆರೋಪಿಗಳು ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದು ಅಪರಾಧ ಎಸಗಿದ್ದಾರೆ ಎಂದು ವರದಿಯಾಗಿದೆ. ಸಂತ್ರಸ್ತೆ ನೀಡಿದ ದೂರಿನ ಪ್ರಕಾರ ಸಜಿಮೋನ್ ಮತ್ತು ನಾಸರ್ ಅವರು ನಿದ್ರಾಜನಕ ಮಾತ್ರೆ ಬೆರೆಸಿದ ತಂಪು ಪಾನೀಯವನ್ನು ನೀಡಿ ಲೈಂಗಿಕ ಕಿರುಕುಳ ನೀಡಿದ್ದಾರೆ. ವಿಡಿಯೋ ರೆಕಾರ್ಡಿಂಗ್ ಕೂಡ ಮಾಡಿದ್ದಾರೆ. ಆರೋಪಿಗಳು 2 ಲಕ್ಷ ರೂಪಾಯಿ ನೀಡುವಂತೆ ಒತ್ತಾಯಿಸಿದ್ದು, ಹಣ ನೀಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Naked video broadcasting: CPI (M) worker arrested

ಸಜಿಮೋನ್ 11ನೇ ಆರೋಪಿಯಾಗಿದ್ದು, ನಾಸರ್ 12ನೇ ಆರೋಪಿಯಾಗಿದ್ದಾರೆ. ದೂರಿನ ಆಧಾರದ ಮೇಲೆ, ಸಜಿಮೋನ್ ಮತ್ತು ನಾಸರ್ ವಿರುದ್ಧ ಸೆಕ್ಷನ್ 354 ಎ (ಲೈಂಗಿಕ ಕಿರುಕುಳ), 354 ಬಿ (ವಿವಸ್ತ್ರಗೊಳ್ಳುವ ಉದ್ದೇಶದಿಂದ ಮಹಿಳೆಯ ಮೇಲೆ ಹಲ್ಲೆ ಅಥವಾ ಬಲವನ್ನು ಬಳಸುವುದು) ಮತ್ತು 294 (ಅಶ್ಲೀಲ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಿಂದನೆಯ ವಿಡಿಯೋ ತುಣುಕನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡಿದ್ದಾರೆ ಎಂಬ ದೂರಿನ ಮೇರೆಗೆ ಪೊಲೀಸರು ಇತರರ ಹೆಸರನ್ನು ದಾಖಲಿಸಿದ್ದಾರೆ.

ಉಳಿದ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 501 (ಮಾನಹಾನಿ) ಮತ್ತು ಐಟಿ ಕಾಯ್ದೆಯ 67 (ವಿದ್ಯುನ್ಮಾನ ರೂಪದಲ್ಲಿ ಅಶ್ಲೀಲ ವಸ್ತುಗಳನ್ನು ಪ್ರಕಟಿಸುವುದು ಅಥವಾ ರವಾನಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ವಾಟ್ಸಾಪ್ ಚಾಟ್‌ಗಳನ್ನು ಪೊಲೀಸರು ಪರಿಶೀಲಿಸಲಿದ್ದಾರೆ. ಅದು ಅವರ ಕೈಗೆ ಸಿಕ್ಕ ಬಳಿಕ ಮುಂದಿನ ತನಿಖೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ವಿವಾದಿತ ಪ್ರಕರಣದಿಂದ ಮುಜುಗರಕ್ಕೀಡಾಗಿರುವ ಸಿಪಿಐ(ಎಂ) ಪತ್ತನಂತಿಟ್ಟ ಜಿಲ್ಲಾ ಸಮಿತಿ ಪೊಲೀಸರ ಮೊರೆ ಹೋಗಿದೆ. ಮಹಿಳೆಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದೆ. ಜೊತೆಗೆ ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾದ ಸಿಪಿಐ(ಎಂ) ಅವರಿಗೆ ಬೆಂಬಲ ನೀಡುತ್ತಿರುವ ಕಾರಣ ಪೊಲೀಸರು ಆರೋಪಿಗಳ ವಿರುದ್ಧ ತ್ವರಿತ ಕ್ರಮ ಕೈಗೊಂಡಿಲ್ಲ ಎಂದು ಕೆಲವರು ಆರೋಪಿಸಿದ್ದಾರೆ. ಹೆಚ್ಚುವರಿಯಾಗಿ ಆರೋಪಿಗಳು ಸಿಪಿಐ(ಎಂ) ಪ್ರದೇಶ ಸಮಿತಿ ಕಚೇರಿಯಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆರೋಪಿಗಳ ಪತ್ತೆ ವಿಳಂಬದ ಬಗ್ಗೆ ವ್ಯಾಪಕ ಪ್ರತಿಭಟನೆಯ ನಂತರ ಪೊಲೀಸರು ಅಂತಿಮವಾಗಿ ಆರೋಪಿಗಳನ್ನು ಬಂಧಿಸಲು ಪ್ರಾರಂಭಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+