ಶಬರಿಮಲೆ : ಸುಪ್ರೀಂ ಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ
Recommended Video

ತಿರುವನಂತಪುರಂ, ಅಕ್ಟೋಬರ್ 08: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಷ್ಟ್ರೀಯ ಅಯ್ಯಪ್ಪ ಭಕ್ತರ ಸಂಘಟನೆ(National Ayyappa Devotee association) ಮೇಲ್ಮನವಿ ಸಲ್ಲಿಸಿದೆ.
800 ವರ್ಷಗಳಿಂದ ಕೇರಳದ ಸುಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಹಿಳೆಯರಿಗೆ ಪ್ರವೇಶವಿರಲಿಲ್ಲ. ಈ ನಿಯಮವನ್ನು ಆಡಳಿತ ಮಂಡಳಿ ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಬರುತ್ತಿತ್ತು. 10 ರಿಂದ 50 ವರ್ಷ ವಯಸ್ಸಿನ ಮಹಿಳೆಯ ಋತುಮತಿಯಾಗುವ ಕಾರಣಕ್ಕೆ ಅವರು ದೇವಾಲಯಕ್ಕೆ ಕಾಲಿಡುವುದರಿಂದ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ಬರುತ್ತದೆ ಎಂದು ವಾದಿಸಲಾಗಿತ್ತು.
ಮಹಿಳೆಯರಿಗೂ ಅಯ್ಯಪ್ಪನ ನೆಲೆಗೆ ಪ್ರವೇಶಿಸಲು ಅವಕಾಶ ನೀಡುವಂತೆ ಕೋರಿ ಹೂಡಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಸೆ.28 ರಂದು ಐತಿಹಾಸಿಕ ತೀರ್ಪು ನೀಡಿತ್ತು.

ಆಗಿನ ಸಿಜೆಐ ದೀಪಕ್ ಮಿಶ್ರಾ, ನ್ಯಾ. ಆರ್ ಎಫ್ ನಾರಿಮನ್, ಎಎಂ ಖಾನ್ವಿಲ್ಕರ್, ಡಿವೈ ಚಂದ್ರಚೂಡ ಮತ್ತು ನ್ಯಾ. ಇಂದು ಮಲ್ಹೋತ್ರಾ ಅವರಿದ್ದ ಪಂಚ ಸದಸ್ಯ ಪೀಠ 'ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಿ' ತೀರ್ಪು ನೀಡಿತ್ತು. ಈ ತೀರ್ಪಿಗೆ ದೇಶದಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಕೆಲವು ಮಹಿಳೆಯರೇ ಈ ತೀರ್ಪನ್ನು ವಿರೋಧಿಸಿದ್ದರು. ಆದರೆ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕೇರಳ ಸರ್ಕಾರ ಮುಂದಾಗದ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಅಯ್ಯಪ್ಪ ಭಕ್ತರ ಸಂಘ ಇದೀಗ ಮೇಲ್ಮನವಿ ಸಲ್ಲಿಸಿದೆ.












Click it and Unblock the Notifications