ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳದಲ್ಲಿ ರಾತ್ರಿ ಕರ್ಫ್ಯೂ, ಭಾನುವಾರ ಲಾಕ್‌ಡೌನ್ ಮುಂದುವರಿಕೆ

|
Google Oneindia Kannada News

ತಿರುವನಂತಪುರಂ, ಸೆಪ್ಟೆಂಬರ್ 04: ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ರಾತ್ರಿ ಕರ್ಫ್ಯೂ ಹಾಗೂ ಭಾನುವಾರದ ಲಾಕ್‌ಡೌನ್‌ನ್ನು ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಕಳೆದ 24 ಗಂಟೆಗಳಲ್ಲಿ 29,682 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 25,910 ಮಂದಿ ಚೇತರಿಸಿಕೊಂಡಿದ್ದಾರೆ. 142 ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಒಟ್ಟು 2,50,065 ಮಂದಿ ಕೊರೊನಾ ಸೋಂಕಿತರಿದ್ದಾರೆ, ಕೋವಿಡ್ ಪಾಸಿಟಿವಿಟಿ ದರ ಶೇ.17.54ರಷ್ಟಿದೆ. ಕೇರಳದಲ್ಲಿ ಇದುವರೆಗೆ 21,422 ಮಂದಿ ಸಾವನ್ನಪ್ಪಿದ್ದಾರೆ.

Thiruvananthapuram

ಶುಕ್ರವಾರ ವರದಿ ಆಗಿರುವ ಸೋಂಕಿತರ ಪೈಕಿ 79 ಮಂದಿ ಹೊರರಾಜ್ಯದಿಂದ ಆಗಮಿಸಿದವರಾಗಿದ್ದಾರೆ. 27,874 ಮಂದಿ ಸ್ಥಳೀಯ ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. ಉಳಿದಂತೆ 1,251 ಮಂದಿಗೆ ಹೇಗೆ ಸೋಂಕು ತಗುಲಿದೆ ಎಂದು ತಿಳಿದುಬರಬೇಕಿದೆ. ಇಂದಿನ ಕೊವಿಡ್ ಪ್ರಕರಣಗಳ ಪೈಕಿ 118 ಆರೋಗ್ಯ ಕಾರ್ಯಕರ್ತರು ಕೂಡ ಇದ್ದಾರೆ ಎಂದು ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.

ಕೊರೊನಾ ಮೂರನೇ ಅಲೆ ಭೀತಿ ನಡುವೆಯೇ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 42,618 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 330 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,29,45,907ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,40,225ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,05,681ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 36,385 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,21,00,001ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 17,04,970 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 52,82,40,038 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 58.85 ಲಕ್ಷ ಡೋಸ್‌ ಲಸಿಕೆ ನೀಡುವುದರೊಂದಿಗೆ ಇದುವರೆಗೆ ಲಸಿಕೆ ವಿತರಣೆ ಪ್ರಮಾಣ 67.72 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ 18 ರಿಂದ 44 ವರ್ಷದೊಳಗಿನ 8.89 ಕೋಟಿ ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದರೆ, 4.62 ಕೋಟಿ ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆಂದು ತಿಳಿಸಿದೆ.

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 42,618 ಹೊಸ ಕೇಸ್ ಪತ್ತೆಯಾಗಿದ್ದು 330 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
The Kerala government on Saturday announced that it has decided to continue night curfew and lockdown on Sundays across the state amid a surge in COVID-19 infections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X