ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಪತ್ತೆ, ಒಂದು ಪ್ರಕರಣ ದೃಢ

|
Google Oneindia Kannada News

ತಿರುವನಂತಪುರಂ, ಜೂನ್ 4: ತೀವ್ರ ಜ್ವರದಿಂದ ಆಸ್ಪತ್ರೆ ಸೇರಿದ್ದ 23 ವರ್ಷದ ವಿದ್ಯಾರ್ಥಿ ದೇಹದಲ್ಲಿ ನಿಪಾಹ್ ವೈರಸ್ ಇರುವುದು ದೃಢಪಟ್ಟಿದೆ.

ಎರ್ನಾಕ್ಯುಲಮ್‌ನ 23 ವರ್ಷದ ವಿದ್ಯಾರ್ಥಿಯೊಬ್ಬ ತರಬೇತಿಗೆಂದು ಇಡುಕ್ಕಿಗೆ ಬಂದಿದ್ದ, ಮನೆಗೆ ವಾಪಸಾದ ಬಳಿಕ ತೀವ್ರ ಜ್ವರದಿಂದ ಬಳಲುತ್ತಿದ್ದ. ನಿಪಾಹ್ ವೈರಸ್ ಇರಬಹುದೇ ಎಂದು ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು. ಹೌದು ಅವರ ದೇಹದಲ್ಲಿ ನಿಪಾಹ್ ವೈರಸ್ ಇದೆ ಎಂದು ಆರೋಗ್ಯ ಸಚಿವೆ ಕೆಕೆ ಶೈಲಜಾ ದೃಢಪಡಿಸಿದ್ದಾರೆ.

 ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ, ಓರ್ವ ಆಸ್ಪತ್ರೆಗೆ ದಾಖಲು ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ, ಓರ್ವ ಆಸ್ಪತ್ರೆಗೆ ದಾಖಲು

ವೈರಲ್ ಇನ್‌ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ.

Nipah virus presence confirmed in Kerala

ಸಾಮಾನ್ಯವಾಗಿ ಈ ನಿಪಾಹ್ ವೈರಾಣುಗಳು, ಒಂದು ಬಗೆಯ ಬಾವಲಿಯಿಂದ (ಫ್ರೂಟ್‌ ಬ್ಯಾಟ್ಸ್‌) ಹರಡಬಹುದಾದ ವೈರಸ್ ಆಗಿದ್ದು, ಈ ವೈರಸ್ ಸೋಂಕು ತಗುಲಿರುವ ವ್ಯಕ್ತಿಯ ಸಂಪರ್ಕಕ್ಕೆ ಬೇರೆ ವ್ಯಕ್ತಿ ಬಂದರೆ ಅಂದರೆ, ಸೋಂಕಿನಿಂದ ಕೂಡಿದ ವ್ಯಕ್ತಿಯ ಜೊಲ್ಲು, ಎಂಜಲು, ಅಥವಾ ವಾಂತಿಯ ಸ್ಪರ್ಶವಾದರೆ ಈ ವೈರಾಣು ಬೇರೊಬ್ಬರಿಗೆ ಹರಡುತ್ತದೆ.

English summary
Kerala Health Minister KK Shylaja says Nipah virus presence in 23 year old student is Confirmed in Ernakulam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X