ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

50 ವರ್ಷ ಮೇಲ್ಪಟ್ಟ ಪೊಲೀಸರಿಗೆ ಕೋವಿಡ್ ಕರ್ತವ್ಯವಿಲ್ಲ

|
Google Oneindia Kannada News

ತಿರುವನಂತಪುರಂ, ಆಗಸ್ಟ್ 02 : ಕೇರಳದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. 50 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿಗಳನ್ನು ಕೋವಿಡ್‌ಗೆ ಸಂಬಂಧಿಸಿದ ಕರ್ತವ್ಯಕ್ಕೆ ನಿಯೋಜನೆ ಮಾಡದಂತೆ ಗೃಹ ಇಲಾಖೆ ಸೂಚನೆ ನೀಡಿದೆ.

ಕೇರಳ ಡಿಜಿ&ಐಜಿಪಿ ಲೋಕನಾಥ್ ಬಹೇರಾ ಈ ಕುರಿತು ಆದೇಶ ಹೊರಡಿಸಿದ್ದಾರೆ. 50 ವರ್ಷ ಮೇಲ್ಪಟ್ಟ ಯಾವುದೇ ಸಿಬ್ಬಂದಿಯನ್ನು ಕೋವಿಡ್ 19 ಕರ್ತವ್ಯಕ್ಕೆ ನಿಯೋಜನೆ ಮಾಡಬಾರದು ಎಂದು ಎಲ್ಲಾ ಠಾಣೆಗಳಿಗೆ ಸೂಚನೆ ನೀಡಿದ್ದಾರೆ.

ಕೇರಳ; ಕೋವಿಡ್ ಸೋಂಕಿತರಿಗೆ ಮನೆಯಲ್ಲೇ ಚಿಕಿತ್ಸೆ ಕೇರಳ; ಕೋವಿಡ್ ಸೋಂಕಿತರಿಗೆ ಮನೆಯಲ್ಲೇ ಚಿಕಿತ್ಸೆ

ರಾಜ್ಯದಲ್ಲಿ ಹಲವು ಪೊಲೀಸ್ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ತಿರುವನಂತಪುರಂನಲ್ಲಿನ ಪೊಲೀಸ್ ಮುಖ್ಯ ಕಚೇರಿಯ ಸಿಬ್ಬಂದಿಗೆ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಶನಿವಾರ ಮತ್ತು ಭಾನುವಾರ ಕಚೇರಿಯನ್ನು ಮುಚ್ಚಲಾಗಿದೆ.

ಸಂಪೂರ್ಣ ಲಾಕ್‌ಡೌನ್‌ ಬೇಡ ಎಂದ ಕೇರಳ ಕ್ಯಾಬಿನೆಟ್ಸಂಪೂರ್ಣ ಲಾಕ್‌ಡೌನ್‌ ಬೇಡ ಎಂದ ಕೇರಳ ಕ್ಯಾಬಿನೆಟ್

No COVID Duty For Police Aged More Than 50

ಜುಲೈ 31ರ ತನಕ ರಾಜ್ಯದಲ್ಲಿ 93 ಪೊಲೀಸ್ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. 64 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಹಿನ್ನಲೆಯಲ್ಲಿ 50 ವರ್ಷ ದಾಟಿದ ಸಿಬ್ಬಂದಿಗೆ ಕೋವಿಡ್ ಕರ್ತವ್ಯದಿಂದ ವಿನಾಯಿತಿ ಕೊಡಲಾಗಿದೆ.

ಸಿಬ್ಬಂದಿಗೆ ಸೋಂಕು: ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ ಕ್ವಾರೆಂಟೈನ್! ಸಿಬ್ಬಂದಿಗೆ ಸೋಂಕು: ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ ಕ್ವಾರೆಂಟೈನ್!

ಶನಿವಾರ ಕೇರಳದಲ್ಲಿ 8 ಕೊರೊನಾ ವೈರಸ್ ಸೋಂಕಿತರು ಮೃತಪಟ್ಟಿದ್ದಾರೆ. 1,129 ಹೊಸ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 10,862.

ಕರ್ನಾಟಕ ಸರ್ಕಾರ ಮತ್ತು ಬೆಂಗಳೂರು ನಗರದಲ್ಲಿ ಈ ನಿಯಮವನ್ನು ಹಿಂದೆಯೇ ಜಾರಿಗೆ ತರಲಾಗಿದೆ. 55 ವರ್ಷ ಮೇಲ್ಪಟ್ಟ ಸಿಬ್ಬಂದಿಯನ್ನು ಕೋವಿಡ್ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗುತ್ತಿಲ್ಲ.

English summary
Kerala police decided to exempt police personnel about the age of 50 from Covid-19 related field duties. 93 police personnel in the state tested positive for Covid-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X