ಕೋವಿಡ್; ಓಣಂ ಹಬ್ಬದ ಸಂದರ್ಭದಲ್ಲಿ ಗುಂಪು ಸೇರುವಂತಿಲ್ಲ

ತಿರುವನಂತಪುರಂ, ಆಗಸ್ಟ್ 11; ಕೇರಳ ಸರ್ಕಾರ ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಓಣಂ ಹಬ್ಬದ ಸಂದರ್ಭದಲ್ಲಿ ಜನರು ಗುಂಪು ಸೇರುವುದಕ್ಕೆ ಅವಕಾಶ ನೀಡದಿರಲು ಚಿಂತನೆ ನಡೆಸಿದೆ.

ಕೇಂದ್ರ ಸರ್ಕಾರ ಸಹ ಕೇರಳದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಆತಂಕ ವ್ಯಕ್ತಪಡಿಸಿದೆ. ರಾಜ್ಯ ಸರ್ಕಾರ ಶಬರಿಮಲೆ ಯಾತ್ರೆಗೆ ಬರುವ ಭಕ್ತಾದಿಗಳಿಗೆ ಸಹ ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರ ಅಥವ ಕೋವಿಡ್ ನಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಲಿದೆ.

ರಾಜ್ಯದಲ್ಲಿನ ಕೋವಿಡ್ ಪಾಸಿಟಿವಿಟಿ ದರ ಏರಿಕೆಯಾಗುತ್ತಲೇ ಇದೆ. ಮಂಗಳವಾರದ ಪಾಸಿಟಿವಿಟಿ ದರ ಶೇ 15.91 ಆಗಿದೆ. ಓಣಂ ಸಂದರ್ಭದಲ್ಲಿ ಜನರು ಗುಂಪು ಸೇರುವುದನ್ನು ತಡೆಯಬೇಕು ಎಂದು ತಜ್ಞರು ಈಗಾಗಲೇ ರಾಜ್ಯ ಸರ್ಕಾರಕ್ಕೆ ಸಲಹೆಯನ್ನು ನೀಡಿದ್ದಾರೆ.

 No Gatherings During Onam Festival Season At Kerala

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ರಾಜ್ಯದ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳ ಸಭೆ ನಡೆಸಿದರು. ಓಣಂ ಹಬ್ಬದ ಸಂಭ್ರಮ ಆರಂಭವಾಗಲು 10 ದಿನಗಳು ಬಾಕಿ ಉಳಿದಿದೆ. ಹಬ್ಬದ ಸಂದರ್ಭದಲ್ಲಿ ಜನರು ಗುಂಪು ಸೇರದಂತೆ ಕಠಿಣ ನಿಯಮಗಳನ್ನು ಜಾರಿಗೆ ತರಲು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಶಬರಿಮಲೆ ದೇವಾಲಯ; ತಿಂಗಳ ವಿಶೇಷ ಪೂಜೆಗಾಗಿ ಶಬರಿಮಲೆ ದೇವಾಲಯ ಆಗಸ್ಟ್ 15ರಂದು ಬಾಗಿಲು ತೆರೆಯಲಿದೆ. ಕೋವಿಡ್ ಎರಡು ಡೋಸ್ ಲಸಿಕೆ ಪಡೆದವರು ಅಥವ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಇದ್ದವರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ.

ಮಂಗಳವಾರ ಕೇರಳದಲ್ಲಿ 21,119 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಈ ಮೂಲಕ ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 1.71 ಲಕ್ಷಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ ರಾಜ್ಯದಲ್ಲಿ 1,32,769 ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ 4,82,290 ಜನರ ಮೇಲೆ ವಿವಿಧ ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. 4,53,540 ಜನರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. 28,750 ಜನರು ಆಸ್ಪತ್ರೆಗಳಲ್ಲಿ ಕ್ವಾರಂಟೈನ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಲಸಿಕೆ ನೀಡುವ ಸಂಖ್ಯೆಯನ್ನು ಹೆಚ್ಚಿಸಲು ಖಾಸಗಿ ಆಸ್ಪತ್ರೆಗಳು 20 ಲಕ್ಷ ಡೋಸ್ ಲಸಿಕೆ ಖರೀದಿ ಮಾಡಲು ಮುಂದಾಗಿವೆ. ಕೇಂದ್ರ ಸರ್ಕಾರದ ತಂಡ ಸಹ ಕಳೆದ ವಾರ ರಾಜ್ಯಕ್ಕೆ ಭೇಟಿ ನೀಡಿ ಕೋವಿಡ್ ನಿಯಂತ್ರಣಕ್ಕೆ ತರಲು ಅಧಿಕಾರಿಗಳಿಗೆ ಸಲಹೆಗಳನ್ನು ನೀಡಿತ್ತು.

ಕೋವಿಡ್ ಮೊದಲ ಡೋಸ್ ಲಸಿಕೆ ಪಡೆದವರು ಅಂಗಡಿಗಳಿಗೆ ಭೇಟಿ ನೀಡಿ ಅಗತ್ಯ ವಸ್ತುಗಳನ್ನು ಖರೀದಿ ಮಾಡಬೇಕು ಎಂದು ರಾಜ್ಯ ಸರ್ಕಾರ ಹೇಳಿತ್ತು. ಈ ನಿಯಮವನ್ನು ಸಡಿಲಿಸಲಾಗಿದ್ದು, ಲಸಿಕೆ ಪಡೆಯದವರು ಸಹ ಅಗತ್ಯ ವಸ್ತುಗಳ ಖರೀದಿಗೆ ಮನೆಯಿಂದ ಹೊರಬರಬಹುದು ಎಂದು ಹೇಳಿದೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಲಸಿಕೆ ನೀಡುವ ಬಗ್ಗೆ ಹೆಚ್ಚಿನ ಗಮನಹರಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸೂಚನೆ ನೀಡಿದೆ. ಅಲ್ಲದೇ ಮೊದಲ ಡೋಸ್ ಲಸಿಕೆ ಪಡೆದ ಎಷ್ಟು ಜನರಿಗೆ ಕೋವಿಡ್ ಸೋಂಕು ತಗುಲಿದೆ? ಎಂದು ಸಹ ಅಂಕಿ-ಅಂಶಗಳನ್ನು ಸಂಗ್ರಹಣೆ ಮಾಡಲಾಗುತ್ತಿದೆ.

ಕಳೆದ ವಾರ ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರದ ತಂಡ 8 ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಿತ್ತು. ಆಗಸ್ಟ್ 1 ರಿಂದ 20ರ ತನಕ ರಾಜ್ಯದಲ್ಲಿ 4 ಲಕ್ಷ ಕೋವಿಡ್ ಪ್ರಕರಣ ದಾಖಲಾಗಬಹುದು ಎಂದು ತಂಡ ಅಂದಾಜಿಸಿದೆ. ಸೋಂಕು ಹೆಚ್ಚಿರುವ ಕಾಸರಗೋಡು, ಕಣ್ಣೂರು, ಮಲಪ್ಪುರಂ, ಕೊಲ್ಲಂ ಮುಂತಾದ ಜಿಲ್ಲೆಗಳಿಗೆ ತಂಡ ಭೇಟಿ ನೀಡಿತ್ತು.

ರಾಜ್ಯದ 8ಕ್ಕೂ ಅಧಿಕ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ 10ಕ್ಕಿಂತ ಹೆಚ್ಚಾಗಿದೆ. ಕೋವಿಡ್ ಹರಡುವಿಕೆ ತಡೆಯಲು ಸರ್ಕಾರ ಸೋಂಕಿನ ಪ್ರಮಾಣ ಹೆಚ್ಚಿರುವ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿದೆ. ಕೇರಳದಲ್ಲಿ ಸೋಂಕಿನ ಸಂಖ್ಯೆ ಹೆಚ್ಚಾದ ಕಾರಣ ಅಕ್ಕ-ಪಕ್ಕದ ರಾಜ್ಯಗಳು ಸಹ ಗಡಿಭಾಗದಲ್ಲಿ ಹೆಚ್ಚಿನ ಕಣ್ಗಾವಲು ಇಟ್ಟಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+