ಭಾರತ ತೊರೆಯುವಂತೆ ನಾರ್ವೆ ಪ್ರಜೆಗೆ ಸೂಚನೆ ಕೊಟ್ಟಿದ್ದೇಕೆ?
ಕೊಚ್ಚಿ, ಡಿಸೆಂಬರ್ 27: ಇತ್ತೀಚೆಗೆ ಕೊಚ್ಚಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಾರ್ವೆ ದೇಶದ ಪ್ರಜೆ ಜೇನ್ನ್-ಮೆಟ್ಟೆ ಜೊಹಾನ್ಸನ್ ಎಂಬಾಕೆಯನ್ನು ಭಾರತ ಬಿಟ್ಟು ತೆರಳುವಂತೆ ಸೂಚಿಸಲಾಗಿದೆ. ಆದರೆ, ಆಕೆಯ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಯೋಚಿಸಲಾಗಿಲ್ಲ ಎಂಡು ಅಧಿಕಾರಿಗಳು ಹೇಳಿದ್ದಾರೆ. ನಾರ್ವೆ ಪ್ರಜೆಯ ಟೂರಿಸ್ಟ್ ವೀಸಾ ಮಾರ್ಚ್ 2020ರಲ್ಲಿ ಕೊನೆಗೊಳ್ಳಲಿದೆ.
"ಇದು ಗಡೀಪಾರು ಅಲ್ಲ. ಆಕೆ ಪ್ರತಿಭಟನೆಯಲ್ಲಿ ಭಾಗವಹಿಸಿ ವೀಸಾ ನಿಯಮಗಳನ್ನು ಉಲ್ಲಂಘಿಸಿರುವುದರಿಂದ ಆದಷ್ಟು ಬೇಗ ಇಲ್ಲಿಂದ ತೆರಳುವಂತೆ ಆಕೆಗೆ ಸೂಚಿಸಿದ್ದೇವೆ. ಆಕೆಯೇ ಸ್ವತಃ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಫೋಟೋಗಳನ್ನು ಫೇಸ್‍ಬುಕ್‍ನಲ್ಲಿ ಹಾಕಿದ್ದರು,'' ಎಂದು ಎಫ್.ಆರ್.ಆರ್.ಒ ಅಧಿಕಾರಿ ಅನೂಪ್ ಕೃಷ್ಣನ್ ಹೇಳಿದ್ದಾರೆ.
ಡಿಸೆಂಬರ್ 23ರಂದು ಕೊಚ್ಚಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿ ಪ್ರತಿಭಟನೆಯಲ್ಲಿ ನಾರ್ವೆ ದೇಶದ ಪ್ರಜೆ, 71 ವರ್ಷದ ಜೇನ್ನ್-ಮೆಟ್ಟೆ ಜೊಹಾನ್ಸನ್ ಎಂಬಾಕೆ ಭಾಗವಹಿಸಿದ್ದರು. ದೇಶದಲ್ಲಿ ವಾಸಿಸುತ್ತಿರುವ ವಿದೇಶಿ ಪ್ರಜೆಗಳ ನೋಂದಣಿ ಹಾಗೂ ಚಲನವಲನಗಳ ಮೇಲೆ ನಿಗಾ ಇಡುವ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್.ಆರ್.ಆರ್.ಒ) ಈ ಸುದ್ದಿಯನ್ನು ದೃಢೀಕರಿಸಿದೆ.

"ಶುಕ್ರವಾರ ಸಂಜೆ 6 ಗಂಟೆಯೊಳಗಾಗಿ ದೇಶ ಬಿಟ್ಟು ತೆರಳದೇ ಇದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಸಿದ್ದಾರೆ. ಲಿಖಿತ ಆದೇಶ ನೀಡುವಂತೆ ಅವರನ್ನು ಕೇಳಿದರೂ ಅವರು ನೀಡಿಲ್ಲ. ಇದು ಬ್ಲ್ಯಾಕ್ಮೇಲ್ ಮಾಡಿದ್ದಂತಿದೆ" ಎಂದು ಪ್ರತಿಕ್ರಿಯಿಸಿದ್ದಾರೆ.
-
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications