'ಕೇರಳದಲ್ಲಿ ಶೇ. 93 ರಷ್ಟು ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ': ವೀಣಾ ಜಾರ್ಜ್
ತಿರುವನಂತಪುರಂ, ಅಕ್ಟೋಬರ್ 08: "ಕೇರಳ ರಾಜ್ಯದಲ್ಲಿ ಸುಮಾರು ಶೇಕಡ 93.16 ಜನರಿಗೆ ಮೊದಲ ಡೋಸ್ ಕೊರೊನಾ ವೈರಸ್ ವಿರುದ್ಧದ ಲಸಿಕೆಯನ್ನು ನೀಡಲಾಗಿದೆ," ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.
2,48,81,688 ಮಂದಿಗೆ ಮೊದಲ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇನ್ನು ಎರಡನೇ ಡೋಸ್ ಕೋವಿಡ್ ಲಸಿಕೆಯನ್ನು ಶೇಕಡ 43.14 ಮಂದಿಗೆ ನೀಡಲಾಗಿದೆ. ಒಂದು ಡೋಸ್ ಹಾಗೂ ಎರಡೂ ಡೋಸ್ ಲಸಿಕೆ ಪಡೆದವರನ್ನು ಸೇರಿ ಈವರೆಗೆ ಒಟ್ಟು 3,64,04,946 ಕೋವಿಡ್ ಲಸಿಕೆಯನ್ನು ನೀಡಲಾಗಿದೆ.
ಈ ನಡುವೆ ಒಟ್ಟು ಹತ್ತು ಲಕ್ಷದಷ್ಟು ಜನರು ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಇವರಿಗೆ ಮೂರು ತಿಂಗಳುಗಳ ನಂತರ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ. ಈ ನಡುವೆ ಒಟ್ಟು ಎಂಟು ಲಕ್ಷ ಮಂದಿಗೆ ಮಾತ್ರ ಮೊದಲ ಡೋಸ್ ಕೋವಿಡ್ ಲಸಿಕೆಯನ್ನು ನೀಡಲು ಇನ್ನು ಬಾಕಿ ಉಳಿದಿದೆ.

ಇನ್ನು ಈ ಸಂದರ್ಭದಲ್ಲಿ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್, "ಯಾರು ಈವರೆಗೆ ಕೋವಿಡ್ ಲಸಿಕೆಯನ್ನು ಪಡೆದಿಲ್ಲ, ಅವರು ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಿ," ಎಂದು ಮನವಿ ಮಾಡಿದ್ದಾರೆ. "ಯಾರು ಕೋವಿಡ್ ಲಸಿಕೆಯನ್ನು ಈವೆರೆಗೂ ಪಡೆದಿಲ್ಲ, ಅವರು ಕೂಡಲೇ ಕೋವಿನ್ ಆಪ್ ಮೂಲಕ ಕೋವಿಡ್ ಲಸಿಕೆಗಾಗಿ ರಿಜಿಸ್ಟರ್ ಮಾಡಿಕೊಳ್ಳಿ ಅಥವಾ ತಮ್ಮ ಸಮೀಪದ ಕೋವಿಡ್ ಲಸಿಕಾ ಕೇಂದ್ರದಲ್ಲಿ ನೇರವಾಗಿ ಹೋಗಿ ಲಸಿಕೆಯನ್ನು ಪಡೆದುಕೊಳ್ಳಿ," ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಕೇರಳದಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟ ಶೇಕಡ 97 ರಷ್ಟು ಜನರು ಮೊದಲ ಡೋಸ್ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಹಾಗೆಯೇ ಶೇಕಡ 61 ರಷ್ಟು ಮಂದಿ ಎರಡನೇ ಡೋಸ್ ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಇನ್ನು ಈ ನಡುವೆ ಕೇರಳದಲ್ಲಿ ನೂರು ಶೇಕಡ ಕೋವಿಡ್ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರು ಮೊದಲ ಡೋಸ್ ಕೋವಿಡ್ ಲಸಿಕೆಯನ್ನು ಹಾಕಿಸಿದ್ದಾರೆ. ಇನ್ನು ಶೇಕಡ 90 ರಷ್ಟು ಮಂದಿ ಕೋವಿಡ್ ವಾರಿಯರ್‌ಗಳು ಎರಡನೇ ಡೋಸ್ ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದು, ಇನ್ನು ಶೇಕಡ ಹತ್ತರಷ್ಟು ಕೋವಿಡ್ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರು ಎರಡನೇ ಡೋಸ್ ಕೋವಿಡ್ ಲಸಿಕೆಯನ್ನು ಪಡೆಯುವುದು ಬಾಕಿ ಉಳಿದಿದೆ.
18 ರಿಂದ 44 ವರ್ಷದ ವಯಸ್ಸಿನ ಲಸಿಕೆ ಫಲಾನುಭವಿಗಳ ಪೈಕಿ ಶೇಕಡ 80 ರಷ್ಟು ಮಂದಿ ಮೊದಲ ಡೋಸ್ ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. 18 ಶೇಕಡದಷ್ಟು ಮಂದಿ ಎರಡನೇ ಡೋಸ್ ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಅಂದರೆ ಇನ್ನೂ ಕೂಡಾ ಶೇಕಡ 82 ರಷ್ಟು 18 ರಿಂದ 44 ವರ್ಷದ ವಯಸ್ಸಿನ ಮಂದಿ ಕೋವಿಡ್‌ನ ಎರಡನೇ ಡೋಸ್ ಲಸಿಕೆಯನ್ನು ಹಾಕಿಸಿಕೊಳ್ಳಬೇಕಾಗಿದೆ.
ಈ ನಡುವೆ ಕೇರಳದಲ್ಲಿ ಪುರುಷರಿಗಿಂತ ಅಧಿಕವಾಗಿ ಮಹಿಳೆಯರು ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಮಹಿಳೆಯರು 1,88,71,205 ಡೋಸ್ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡಿದ್ದು ಪುರುಷರು 1,75,24,970 ಡೋಸ್ ಕೋವಿಡ್ ಲಸಿಕೆಯನ್ನು ಪಡೆದಿದ್ದಾರೆ.
ಇನ್ನು 1698 ಲಸಿಕಾ ಕೇಂದ್ರಗಳು ಕೇರಳದಲ್ಲಿ ಪ್ರಸ್ತುತ ಇದ್ದು, ಈ ಪೈಕಿ 1408 ಸರ್ಕಾರಿ ಕೋವಿಡ್ ಲಸಿಕಾ ಕೇಂದ್ರಗಳು ಆಗಿದೆ. 290 ಖಾಸಗಿ ಕೋವಿಡ್ ಲಸಿಕಾ ಕೇಂದ್ರಗಳು ಆಗಿದೆ. ಇದೇ ಸಂದರ್ಭದಲ್ಲಿ ಕೇರಳ ರಾಜ್ಯಕ್ಕೆ ಐದು ಲಕ್ಷ ಕೋವಿಶೀಲ್ಡ್ ಲಸಿಕೆಯು ಲಭ್ಯವಾಗಿದೆ. ತಿರುವನಂತಪುರಂಗೆ 1,69,300 ಡೋಸ್ ಕೋವಿಡ್ ಲಸಿಕೆಯಾದರೆ, ಎರ್ನಾಂಕುಲಂಗೆ 1,96,830 ಡೋಸ್ ಕೋವಿಡ್ ಲಸಿಕೆ ಆಗಿದೆ. ಕೋಝಿಕೋಡ್‌ಗೆ 1,33,870 ಡೋಸ್ ಕೋವಿಡ್ ಲಸಿಕೆಯು ಲಭ್ಯವಾಗಿದೆ.
(ಒನ್‌ಇಂಡಿಯಾ ಸುದ್ದಿ)
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications