ಆ.26ರಿಂದ ಅನಂತ ಪದ್ಮನಾಭ ಸ್ವಾಮಿ ದರ್ಶನ ಪಡೆಯಿರಿ

ತಿರುವನಂತಪುರಂ, ಆಗಸ್ಟ್ 25 : ತಿರುವನಂತಪುರಂನಲ್ಲಿನ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಾಲಯದಲ್ಲಿ ಬುಧವಾರದಿಂದ ಭಕ್ತರು ದೇವರ ದರ್ಶನ ಪಡೆಯಬಹುದಾಗಿದೆ. ಒಂದು ದಿನ 665 ಭಕ್ತರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ.

Recommended Video

      Annamalai IPS : ಕಮಲ ಹಿಡಿದು ಕಮಾಲ್ ಮಾಡ್ತಾರ ಸಿಂಗಂ | Oneindia Kannada

      ಮಂಗಳವಾರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಈ ಕುರಿತು ಪ್ರಕಟಣೆ ಹೊರಡಿಸಿದೆ. ಬುಧವಾರದಿಂದ ದೇವಾಲಯಕ್ಕೆ ಭಕ್ತರ ಪ್ರವೇಶವಿದ್ದು, ಆಡಳಿತ ಮಂಡಳಿ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಿದೆ.

      ಬುಧವಾರದಿಂದ ಪ್ರತಿದಿನ ಬೆಳಗ್ಗೆ 8 ರಿಂದ 11 ಮತ್ತು ಸಂಜೆ 5 ಗಂಟೆಯಿಂದ ದೇವಾಲಯದಲ್ಲಿ ದೀಪಾರಾಧನೆ ನಡೆಯುವ ತನಕ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆದರೆ ಒಂದು ದಿನ 665 ಭಕ್ತರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ.

      Padmanabhaswamy Temple To Open For Devotees From August 26

      ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವರ ದರ್ಶನ ಪಡೆಯುವವರು ಒಂದು ದಿನ ಮುಂಚಿತವಾಗಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಸಬೇಕು. ದೇವಾಲಯಕ್ಕೆ ಹೋಗುವ ಸಂದರ್ಭದಲ್ಲಿ ನೋಂದಣಿಯ ಪ್ರತಿ, ಆಧಾರ್ ಕಾರ್ಡ್‌ ಅನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು.

      ದೇವಾಲಯದ ದರ್ಶನದ ಅವಧಿಯಲ್ಲಿ ಒಮ್ಮೆ 35 ಭಕ್ತರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಹಾಗೆಯೇ ಒಂದು ದಿನ 665 ಭಕ್ತರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

      ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಾಲಯ ದೇಶದ ಅತ್ಯಂತ ಶ್ರೀಮಂತ ದೇವಾಲಯವಾಗಿದೆ. ತಿರುವಾಂಕೂರು ಜಿಲ್ಲೆಯ ರಾಜಮನೆತನ ಇಂದಿಗೂ ಈ ದೇವಾಲಯದ ಒಡೆತನವನ್ನು ಹೊಂದಿದೆ. ವಿಷ್ಣುವನ್ನು ಆರಾಧಿಸುವ ಪ್ರಮುಖ ಕೇಂದ್ರವಿದಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+