ಜನಗಣತಿ ಮಾಡಿ, ಎನ್ಪಿಆರ್ ಆಗೊಲ್ಲ: ಕೇಂದ್ರಕ್ಕೆ ಕೇರಳ ಸರ್ಕಾರ ಮಾಹಿತಿ
ತಿರುವನಂತಪುರಂ, ಜನವರಿ 21: ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಉನ್ನತೀಕರಿಸುವ ಪ್ರಕ್ರಿಯೆಗೆ ಸಹಕಾರ ನೀಡಲು ಸಾಧ್ಯವಿಲ್ಲ ಎಂದು ಕೇರಳದ ಸಿಪಿಎಂ ನೇತೃತ್ವದ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಔಪಚಾರಿಕವಾಗಿ ಮಾಹಿತಿ ನೀಡಿದೆ. ಜನಗಣತಿ ನಡೆಸಲು ತೊಂದರೆ ಇಲ್ಲ ಎಂದು ಅದು ತಿಳಿಸಿದೆ.
ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಉಲ್ಲೇಖಿಸಿರುವ ಕೇರಳ ಸರ್ಕಾರ, ಈ ಭಯವನ್ನು ಹೋಗಲಾಡಿಸುವುದು ಮತ್ತು ಕಾನೂನು ಹಾಗೂ ಸುವ್ಯವಸ್ಥೆಯನ್ನು ಕಾಪಾಡುವುದು ತನ್ನ ಸಾಂವಿಧಾನಿಕ ಜವಾಬ್ದಾರಿಯಾಗಿದೆ ಎಂದು ಹೇಳಿದೆ. ಆದರೆ ಜನಗಣತಿ ಪ್ರಕ್ರಿಯೆಗೆ ಸಹಕಾರ ನೀಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಈ ನಿರ್ಧಾರಗಳನ್ನು ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ (ಆರ್ಜಿಐ) ಮತ್ತು ಕೇಂದ್ರ ಗೃಹ ಇಲಾಖೆ ಅಡಿಯಲ್ಲಿನ ಜನಗಣತಿ ಆಯುಕ್ತರಿಗೆ ತಿಳಿಸಲು ತೀರ್ಮಾನಿಸಲಾಯಿತು.

'ಎನ್ಪಿಆರ್ ಪ್ರಕ್ರಿಯೆಯು ರಾಷ್ಟ್ರೀಯ ಪೌರತ್ವ ನೋಂದಣಿಗೆ (ಎನ್ಆರ್ಸಿ) ಎಡೆಮಾಡಿಕೊಡುತ್ತದೆ. ಇದರಿಂದಾಗಿ ಜನರಲ್ಲಿ ಈ ಕುರಿತು ಆತಂಕವಿದೆ. ಕೇರಳದಲ್ಲಿ ಎನ್ಪಿಆರ್ ಮತ್ತು ಎನ್ಆರ್ಸಿ ಜಾರಿಯಾದರೆ ಅದು ರಾಜ್ಯದ್ಯಾದ್ಯಂತ ಅರಾಜಕತೆ ಸೃಷ್ಟಿಸಲು ಕಾರಣವಾಗಲಿದೆ. ಈ ಅನುಭವ ಎನ್ಆರ್ಸಿ ಜಾರಿಯಾದ ರಾಜ್ಯದಲ್ಲಿ ಈಗಾಗಲೇ ಆಗಿದೆ' ಎಂದು ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿರುವ ಹೇಳಿಕೆ ತಿಳಿಸಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications