ಶ್ರೀಧರನ್ ಪಾದ ತೊಳೆದು, ನಮಸ್ಕರಿಸಿದ ಮತದಾರರು; ಫೋಟೊ ವೈರಲ್
ತಿರುವನಂತಪುರಂ, ಮಾರ್ಚ್ 19: ಕೇರಳದ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮೆಟ್ರೋ ಮ್ಯಾನ್ ಶ್ರೀಧರನ್ ಚುನಾವಣಾ ಕಣಕ್ಕಿಳಿದಿದ್ದು, ಪಾಲಕ್ಕಾಡ್ ಗೆ ಶ್ರೀಧರನ್ ಅವರು ಭೇಟಿ ನೀಡಿದ್ದ ಸಂದರ್ಭ ಜನರು ಅವರ ಕಾಲು ತೊಳೆದು ಆಶೀರ್ವಾದ ತೆಗೆದುಕೊಂಡಿದ್ದಾರೆ. ಈ ಫೋಟೊಗಳು ಇದೀಗ ವೈರಲ್ ಆಗಿವೆ.
ಶ್ರೀಧರನ್ ಅವರು ಭೇಟಿ ನೀಡಿದ್ದ ವೇಳೆ ಕೆಲವರು ಅವರ ಪಾದ ತೊಳೆದು ಬರಮಾಡಿಕೊಂಡಿದ್ದಾರೆ. ಅವರ ಕಾಲು ತೊಳೆಯುವ, ಹಾರ ಹಾಕುವ, ಮಹಿಳೆಯರನ್ನೊಳಗೊಂಡು ಹಲವು ಮಂದಿ ಅವರ ಕಾಲಿಗೆ ಬಿದ್ದು ಆಶೀರ್ವಾದ ತೆಗೆದುಕೊಳ್ಳುತ್ತಿರುವ ಫೋಟೊಗಳು ವೈರಲ್ ಆಗಿವೆ.
ಈ ಘೋಟೊಗಳ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ. ಈ ಚಿತ್ರಗಳಲ್ಲಿ ಜಾತೀಯತೆ ಹಾಗೂ ಶ್ರೀಮಂತವರ್ಗ ಎನ್ನುವುದು ಪ್ರತಿಫಲಿಸುತ್ತಿದೆ ಎಂದು ದೂರಲಾಗಿದೆ.

ಇತ್ತೀಚೆಗೆ ಬಿಜೆಪಿ ಸೇರ್ಪಡೆಗೊಂಡಿರುವ ಮೆಟ್ರೋಮ್ಯಾನ್ ಇ ಶ್ರೀಧರನ್ ಅವರು ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಮೂಲಸೌಕರ್ಯಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು, ಸಾಲದ ಸುಳಿಯಿಂದ ರಾಜ್ಯ ಹೊರ ಬರಲು ಬೇಕಾದ ಮಾರ್ಗಗಳನ್ನು ಕಂಡುಕೊಳ್ಳಲಾಗುವುದು, ಸಿಎಂ ಸ್ಥಾನಕ್ಕೂ ನಾನು ಸಿದ್ಧ ಎಂದು ಶ್ರೀಧರನ್ ಈಗಾಗಲೇ ಘೋಷಿಸಿದ್ದಾರೆ.
ಪಾಲಕ್ಕಾಡ್ ಚುನಾವಣಾ ಪ್ರಚಾರ ಪ್ರಾರಂಭವಾದಾಗಿನಿಂದ ಕ್ಷೇತ್ರದಾದ್ಯಂತ ಇ ಶ್ರೀಧರನ್ ಕ್ರಿಯಾಶೀಲರಾಗಿದ್ದಾರೆ. ಇನ್ನೆರಡು ವರ್ಷಗಳಲ್ಲಿ ಪಾಲಕ್ಕಾಡ್ ಅನ್ನು ಕೇರಳದ ಅತ್ಯುತ್ತಮ ನಗರವನ್ನಾಗಿ ಮಾಡುವ ಭರವಸೆಯನ್ನು ನೀಡಿದ್ದಾರೆ.
ಏಪ್ರಿಲ್ 6 ರಂದು ಕೇರಳದಲ್ಲಿ 140 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ. ಕೇರಳದಲ್ಲಿ 140 ಕ್ಷೇತ್ರಗಳ ಪೈಕಿ ಬಿಜೆಪಿ 115 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ಮಿಕ್ಕ 25 ಸ್ಥಾನಗಳು ನಾಲ್ಕು ಮಿತ್ರಪಕ್ಷಗಳಿಗೆ ಹಂಚಿಕೆಯಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications