• search
 • Live TV
ತಿರುವನಂತಪುರಂ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಏರ್ ಇಂಡಿಯಾ ವಿಮಾನ ದುರಂತಕ್ಕೆ ಪ್ರಧಾನಿ ಮತ್ತು ರಾಷ್ಟ್ರಪತಿ ಸಂತಾಪ

|
Google Oneindia Kannada News

ತಿರುವನಂತಪುರಂ, ಆಗಸ್ಟ್.07: ಕೇರಳದ ಕರಿಪುರ್ ವಿಮಾನ ನಿಲ್ದಾಣದಲ್ಲಿ ನಡೆದ ದುಬೈ-ಕೋಳಿಕ್ಕೋಡ್ ಏರ್ ಇಂಡಿಯಾ ವಿಮಾನ ದುರಂತದ ಬಗ್ಗೆ ಕೇಳಿ ತುಂಬಾ ನೋವಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

   Kerala Flight Crash ನಂತರ ಮತ್ತೆ ನೆನಪಾಯ್ತು Mangalore ದುರಂತ | Oneindia Kannada

   ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನಮ್ಮ ಆಲೋಚನೆಗಳು ಸದಾ ಇರುತ್ತವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಕೇರಳ ಮುಖ್ಯಮಂತ್ರಿಗಳ ಜೊತೆಗೆ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದು, ಅಗತ್ಯ ನೆರವು ನೀಡುವಂತೆ ಸೂಚಿಸಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

   ಏರ್ ಇಂಡಿಯಾ ವಿಮಾನ ದುರಂತ: 14 ಸಾವು, 123ಕ್ಕೂ ಹೆಚ್ಚು ಮಂದಿ ಗಾಯಏರ್ ಇಂಡಿಯಾ ವಿಮಾನ ದುರಂತ: 14 ಸಾವು, 123ಕ್ಕೂ ಹೆಚ್ಚು ಮಂದಿ ಗಾಯ

   ಈಗಾಗಲೇ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಏರ್ ಇಂಡಿಯಾ ವಿಮಾನದಲ್ಲಿದ್ದ 123 ಪ್ರಯಾಣಿರು ಗಾಯಗೊಂಡಿದ್ದು, ಈ ಪಾಕಿ 15 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ಮಲಪ್ಪುರಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

   ರಾಷ್ಟ್ರಪತಿ ರಾಮನಾಥ್ ಕೋವಿಂದ್ ತೀವ್ರ ಸಂತಾಪ

   ದುಬೈ-ಕೋಳಿಕ್ಕೋಡ್ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ದುರಂತ ವಿಮಾನ ಅಪಘಾತದ ಬಗ್ಗೆ ಕೇಳಿ ತೀವ್ರ ಸಂಕಟವಾಗಿದೆ. ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರೊಂದಿಗೆ ಚರ್ಚಿಸಿದ್ದು, ಪರಿಸ್ಥಿತಿ ಬಗ್ಗೆ ವಿಚಾರಿಸಿದ್ದೇನೆ. ಗಾಯಗೊಂಡ ಪ್ರಯಾಣಿಕರು, ಸಿಬ್ಬಂದಿ ಸದಸ್ಯರು ಮತ್ತು ಅವರ ಕುಟುಂಬಗಳೊಂದಿಗೆ ನಮ್ಮ ಪ್ರಾರ್ಥನೆಗಳು ಇರಲಿವೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿದ್ದಾರೆ.

   ಸ್ಥಳೀಯ ಆಸ್ಪತ್ರೆಗಳಿಗೆ ಆಂಬುಲೆನ್ಸ್ ಮೂಲಕ ಗಾಯಾಳುಗಳು ಶಿಫ್ಟ್

   ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ಕರಿಪುರ್ ವಿಮಾನ ನಿಲ್ದಾಣದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ. ವಿಮಾನ ದುರಂತದಲ್ಲಿ ಗಾಯಗೊಂಡವರನ್ನು 15ಕ್ಕೂ ಹೆಚ್ಚು ಆಂಬುಲೆನ್ಸ್ ಗಳಲ್ಲಿ ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗುತ್ತಿದೆ.

   ಕೋಳಿಕ್ಕೋಡ್ ಗೆ ಬಂದ ವಿಮಾನದ ಪೈಲಟ್ ಆಗಿದ್ದವರು ಅನುಭವಿ ದೀಪಕ್ ಸಾಥೆಕೋಳಿಕ್ಕೋಡ್ ಗೆ ಬಂದ ವಿಮಾನದ ಪೈಲಟ್ ಆಗಿದ್ದವರು ಅನುಭವಿ ದೀಪಕ್ ಸಾಥೆ

   ಏರ್ ಇಂಡಿಯಾದಲ್ಲಿ 10 ಶಿಶು ಸೇರಿ 191 ಜನ

   ಏರ್ ಇಂಡಿಯಾದಲ್ಲಿ 10 ಶಿಶು ಸೇರಿ 191 ಜನ

   10 ಶಿಶುಗಳು, ಆರು ಸಿಬ್ಬಂದಿ, ಇಬ್ಬರು ಪೈಲೆಟ್ ಗಳು ಹಾಗೂ 174 ಪ್ರಯಾಣಿಕರಿದ್ದ ಏರ್ ಇಂಡಿಯಾದ IX1344 ವಿಮಾನವು ಶುಕ್ರವಾರ ಸಂಜೆ 7.45ರ ವೇಳೆಗೆ ಕೇರಳದ ಕರಿಪುರ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದ ಸಂದರ್ಭದಲ್ಲಿ ಸ್ಕಿಡ್ ಆಗಿತ್ತು. ಆದರೆ ರನ್ ವೇನಲ್ಲಿ ಲ್ಯಾಂಡಿಂಗ್ ವೇಳೆ ಯಾವುದೇ ರೀತಿಯ ಬೆಂಕಿ ಕಾಣಿಸಿಕೊಂಡಿಲ್ಲ ಎಂದು ತಿಳಿದು ಬಂದಿದೆ.

   ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಿಂದ ಟ್ವೀಟ್

   ಕರಿಪುರ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ದುಬೈ-ಕೋಳಿಕ್ಕೋಡ್ ಏರ್ ಇಂಡಿಯಾ ವಿಮಾನ ದುರಂತ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರಿಗೆ ಸೂಚನೆ ನೀಡಲಾಗಿದೆ. ವಿಮಾನ ದುರಂತದಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ.

   ಕರಿಪುರ್ ವಿಮಾನ ದುರಂತ: ಸಂತ್ರಸ್ತರಿಗೆ ಸಹಾಯವಾಣಿ ಪ್ರಕಟಕರಿಪುರ್ ವಿಮಾನ ದುರಂತ: ಸಂತ್ರಸ್ತರಿಗೆ ಸಹಾಯವಾಣಿ ಪ್ರಕಟ

   English summary
   PM Narendra Modi And President Ramnath Kovind Severe Condolences To Air India Flight Crash Incident.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X