• search
  • Live TV
ತಿರುವನಂತಪುರಂ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೇರಳದ ವಯನಾಡಿನಿಂದಲೂ ರಾಹುಲ್ ಗಾಂಧಿ ಸ್ಪರ್ಧೆ

|

ನವದೆಹಲಿ, ಮಾರ್ಚ್ 31: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ದಕ್ಷಿಣ ಭಾರತದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ. ನಿರೀಕ್ಷೆಯಂತೆ ಕೇರಳದ ವಯನಾಡ್ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಎಕೆ ಎಂಟನಿ ಘೋಷಿಸಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಈ ಕ್ಷೇತ್ರದಿಂದ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ. ಸಿದ್ದಿಕಿ ಅವರ ಹೆಸರನ್ನು ಪ್ರಕಟಿಸಲಾಗಿತ್ತು. ಈಗ ಸಿದ್ದಿಕಿ ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ರಾಹುಲ್ ಗಾಂಧಿ ಅವರು ಎಡಕಲ್ಲು ಗುಡ್ಡ ಖ್ಯಾತಿಯ ವಯನಾಡ್‌ನಿಂದ ಸ್ಪರ್ಧಿಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಕೇರಳ ಕಾಂಗ್ರೆಸ್ ಮುಖ್ಯಸ್ಥ ಮುಲ್ಲಪಳ್ಳಿ ರಾಮಚಂದ್ರನ್ ಈ ಹಿಂದೆಯೆ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಶೇ 49ಕ್ಕೂ ಅಧಿಕ ಮುಸ್ಲಿಂ ಮತದಾರರನ್ನು ಈ ಕ್ಷೇತ್ರ ಹೊಂದಿದೆ.

#RaGaFromKarnataka ಕಾಂಗ್ರೆಸ್‌ ನಾಯಕರಿಂದ ಟ್ವಿಟರ್ ಅಭಿಯಾನ

ಉತ್ತರ ಪ್ರದೇಶದ ಅಮೇಥಿಯಿಂದಲೂ ರಾಹುಲ್ ಗಾಂಧಿ ಅವರು ಸ್ಪರ್ಧಿಸಿದ್ದು, ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರ ವಿರುದ್ಧ ಮತ್ತೊಮ್ಮೆ ಎದುರಾಳಿಯಾಗಿದ್ದಾರೆ.

ಕರ್ನಾಟಕ,ತಮಿಳುನಾಡಿನಿಂದ ಬೇಡಿಕೆ ಇತ್ತು

ಕರ್ನಾಟಕ,ತಮಿಳುನಾಡಿನಿಂದ ಬೇಡಿಕೆ ಇತ್ತು

ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಸ್ಪರ್ಧಿಸಬೇಕು ಎಂದು ರಾಜ್ಯದ ನಾಯಕರು ತೀವ್ರ ಒತ್ತಡ ಹೇರಿದ್ದರು. ತಮಿಳುನಾಡಿನಿಂದಲೂ ಅವರಿಗೆ ಆಹ್ವಾನ ನೀಡಲಾಗಿತ್ತು. ಬೆಂಗಳೂರು ಸೆಂಟ್ರಲ್, ಬೀದರ್ ಮತ್ತು ಮೈಸೂರು ಕ್ಷೇತ್ರಗಳಲ್ಲಿ ಒಂದನ್ನು ಅವರು ಆಯ್ದುಕೊಳ್ಳಬಹುದು ಎಂದು ನಿರೀಕ್ಷೆಯಿತ್ತು. ತಮಿಳುನಾಡಿನ ಶಿವಗಂಗಾ ಕ್ಷೇತ್ರದ ಹೆಸರೂ ಚಾಲ್ತಿಯಲ್ಲಿತ್ತು.

ಎರಡು ಕ್ಷೇತ್ರದಿಂದ ಏಕೆ ಸ್ಪರ್ಧಿಸುತ್ತಿದ್ದಾರೆ?

ಎರಡು ಕ್ಷೇತ್ರದಿಂದ ಏಕೆ ಸ್ಪರ್ಧಿಸುತ್ತಿದ್ದಾರೆ? ಎಂಬ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲ, ಮೋದಿ ಅವರು ಗುಜರಾತಿನ ತವರು ಕ್ಷೇತ್ರ ತೊರೆದು ವಾರಣಾಸಿಗೆ ಬಂದಿದ್ದೇಕೆ? ಎಂದು ಮರು ಪ್ರಶ್ನೆ ಹಾಕಿದರು.

ಬಿಜೆಪಿ ಅಸ್ತಿತ್ವದಲ್ಲೇ ಇರದ ಕ್ಷೇತ್ರದಲ್ಲಿ ಸ್ಪರ್ಧೆ

ಬಿಜೆಪಿ ಅಸ್ತಿತ್ವದಲ್ಲೇ ಇರದ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯುವ ಮೂಲಕ ಯಾವ ಸಂದೇಶ ನೀಡಲು ಬಯಸಿದ್ದಾರೆ. ಕರ್ನಾಟಕದಲ್ಲಿ ಸ್ಪರ್ಧಿಸಬಾರದ್ದಿತ್ತಾ? ಸಿಪಿಐ, ಸೆಕ್ಯುಲರ್ ಶಕ್ತಿ ವಿರುದ್ಧವೇ ರಾಹುಲ್ ಸ್ಪರ್ಧೆಗಿಳಿದಿರುವುದು ಸರಿಯಲ್ಲ

ಜನರ ವಿಶ್ವಾಸ ಕಳೆದುಕೊಂಡಿದ್ದಾರೆ

ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದರೆ ಒಂದು ಕ್ಷೇತ್ರದಲ್ಲಿ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದರ್ಥ. ಒಂದು ಕ್ಷೇತ್ರಕ್ಕೆ ಉಪ ಚುನಾವಣೆಯಾಗಬೇಕಾಗುತ್ತದೆ ಆ ಖರ್ಚನ್ನು ಅಭ್ಯರ್ಥಿಯೇ ವಹಿಸಿಕೊಳ್ಳಬೇಕು ಎಂದು ಟ್ವೀಟ್ ಮಾಡಿದ ನಟಿ ಕಸ್ತೂರಿ ಶಂಕರ್

English summary
Congress President Rahul Gandhi will contest the Lok Sabha elections from Wayanad in Kerala apart from Amethi in Uttar Pradesh. The decision was announced by Congress leader AK Antony in a press conference.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X