ಅತ್ಯಾಚಾರಕ್ಕೆ ಯತ್ನಿಸಿದವನ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ ಮಹಿಳೆ

ಕೊಚ್ಚಿ, ಆಗಸ್ಟ್ 02 : ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ತಕ್ಕ ಶಾಸ್ತಿಯಾಗಿದೆ. ಅತ್ಯಾಚಾರಕ್ಕೆ ಮುಂದಾದ ಕಾಮುಕನೊಬ್ಬನ ನಾಲಿಗೆಯನ್ನೇ ಮಹಿಳೆಯೊಬ್ಬರು ಕಚ್ಚಿ ತುಂಡರಿಸಿದ್ದಾಳೆ. ಈ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯ ನಾರಕ್ಕಲ್ ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಜುಲೈ 26ರ ಮಧ್ಯರಾತ್ರಿ ಒಂಟಿಯಾಗಿದ್ದ ಮಹಿಳೆಯ ಮನೆಗೆ ನುಗ್ಗಿದ ನಾರಕ್ಕಲ್ ನ ನಿವಾಸಿ ರಾಜೇಶ್ (30) ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಸ್ವರಕ್ಷಣೆ ಮಾಡಿಕೊಳ್ಳಲು ಯತ್ನಿಸಿ ಯುವಕನ ನಾಲಿಗೆಯನ್ನು ಹಲ್ಲಿನಿಂದ ಕಚ್ಚಿ ಕತ್ತರಿಸಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ.

Rape attempt: Woman in Thiruvananthapuram bites off man's tongue

ಘಟನೆ ನಡೆದ ಮರುದಿನ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ವೇಳೆ ಕಚ್ಚಿ ಕತ್ತರಿಸಿದ್ದ 2 ಸೆ.ಮೀ ನಷ್ಟು ನಾಲಿಗೆಯನ್ನು ಪೊಲೀಸರಿಗೆ ಒಪ್ಪಿಸಿದ್ದಾಳೆ.

ಅತ್ಯಾಚಾರಕ್ಕೆ ಯತ್ನಿಸಿದ ಯುವಕ ನೆರೆಮನೆಯಾತನೇ ಆಗಿದ್ದು, ಘಟನೆ ಬಳಿಕ ತಲೆಮರೆಸಿಕೊಂಡಿದ್ದ. ತೀವ್ರ ಹುಡುಕಾಟದ ಬಳಿಕ ಯುವಕನನ್ನು ಕೊಚ್ಚಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ

ಆಸ್ಪತ್ರೆಗೆ ದಾಖಲಾಗಿದ್ದ ಆರೋಪಿ ಅಪಘಾತದಲ್ಲಿ ನಾಲಿಗೆಗೆ ಗಾಯವಾಗಿದೆ ಎಂದು ಹೇಳಿಕೊಂಡಿದ್ದಾನೆ. ಚಿಕಿತ್ಸೆ ಬಳಿಕ ಆರೋಪಿಯನ್ನು ಬಂಧನಕ್ಕೊಳಪಡಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+