ಕೇರಳ: ಪತ್ನಿಯ ಎದುರೇ ಆರ್‌ಎಸ್‌ಎಸ್ ಕಾರ್ಯಕರ್ತನ ಬರ್ಬರ ಹತ್ಯೆ
ಪಾಲಕ್ಕಾಡ್, ನವೆಂಬರ್ 15: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕರ್ತನೋರ್ವನನ್ನು ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಸೋಮವಾರ ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆತನ ಪತ್ನಿಯ ಎದುರಲ್ಲೇ ಆತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ವರದಿಯು ತಿಳಿಸಿದೆ.
27 ವರ್ಷ ಪ್ರಾಯದ ಆರ್‌ಎಸ್‌ಎಸ್ ಕಾರ್ಯಕರ್ತ ಸಂಜಿತ್‌ರನ್ನು ಆತನ ಪತ್ನಿಯ ಎದುರಲ್ಲೇ ಸೋಮವಾರ ಬೆಳಗ್ಗೆ ಸುಮಾರು 9 ಗಂಟೆಗೆ ಹತ್ಯೆ ಮಾಡಲಾಗಿದೆ. ಆರ್‌ಎಸ್‌ಎಸ್ ಕಾರ್ಯಕರ್ತ ಸಂಜಿತ್ ತನ್ನ ಪತ್ನಿಯು ಉದ್ಯೋಗ ಮಾಡುವ ಸ್ಥಳಕ್ಕೆ ಆಕೆಯನ್ನು ಬಿಟ್ಟು ಬರಲು ಎಂದು ನಿವಾಸದಿಂದ ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಹೋಮ್ ವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಯನ್ನು ಥಳಿಸಿ ಕೊಂದ ಶಿಕ್ಷಕ
ಆರ್‌ಎಸ್‌ಎಸ್ ಕಾರ್ಯಕರ್ತ ಸಂಜಿತ್‌ರ ಹತ್ಯೆಯ ಹಿಂದೆ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಜಕೀಯ ಪಕ್ಷದ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಕೈವಾಡ ಇರುವ ಶಂಕೆಯು ವ್ಯಕ್ತವಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಆರ್‌ಎಸ್‌ಎಸ್ ಕಾರ್ಯಕರ್ತ ಸಂಜಿತ್‌ರ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿರುವ ಆರೋಪಿಗಳ ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಕೂಡಾ ಪೊಲೀಸರು ಹೇಳಿದರು. ಇನ್ನು ಈ ನಡುವೆ ಬಿಜೆಪಿಯು ಈ ಘಟನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. "ಸಂಜಿತ್ ಹಾಗೂ ಆತನ ಪತ್ನಿ ದ್ವಿಚಕ್ರ ವಾಹನದಲ್ಲಿ ಎಲಪ್ಪುಲ್ಲಿಯಿಂದ ಸಂಚಾರ ಮಾಡುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ವಾಹನದಲ್ಲಿ ಬಂದು ಸಂಜಿತ್‌ರ ದ್ವಿಚಕ್ರ ವಾಹನಕ್ಕೆ ಗುದ್ದಿದ್ದಾರೆ. ಸಂಜಿತ್‌ರ ದ್ವಿಚಕ್ರ ವಾಹನ ಪಲ್ಟಿಯಾಗಿ ಸಂಜಿತ್ ಕೆಳಕ್ಕೆ ಬಿದ್ದ ಕೂಡಲೇ ಪತ್ನಿಯ ಎದುರೇ ದುಷ್ಕರ್ಮಿಗಳು ಸಂಜಿತ್‌ರ ಹತ್ಯೆ ಮಾಡಿದ್ದಾರೆ," ಎಂದು ಬಿಜೆಪಿಯು ಈ ಘಟನೆಯ ಬಗ್ಗೆ ವಿವರಿಸಿದೆ.
ಸಂಜಿತ್ ಮೇಲೆ ದುಷ್ಕರ್ಮಿಗಳು ಮಾರಾಕಾಯುಧಗಳಿಂದ ದಾಳಿ ಮಾಡಿ ಸ್ಥಳದಿಂದ ಕಾಲ್ಕಿತ್ತ ಬೆನ್ನಲ್ಲೇ ಸಂಜಿತ್‌ರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಆದರೆ ಅದಾಗಲೇ ಸಂಜಿತ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಳಗಾವಿ ಕೊಲೆ ಪ್ರಕರಣ: ಯುವತಿಯ ಮನೆಯವರಿಂದ ಕೃತ್ಯ, 10 ಮಂದಿಯ ಬಂಧನ
"ಇದು ಯೋಜಿತ ಕೊಲೆ": ಬಿಜೆಪಿ ರಾಜ್ಯ ಅಧ್ಯಕ್ಷ ಕೆ ಸುರೇಂದ್ರನ್
ಇನ್ನು ಆರ್‌ಎಸ್‌ಎಸ್ ಕಾರ್ಯಕರ್ತ ಸಂಜಿತ್‌ರ ಹತ್ಯೆಗೆ ಖಂಡನೆ ವ್ಯಕ್ತಪಡಿಸಿ ಮಾತನಾಡಿದ ಬಿಜೆಪಿ ರಾಜ್ಯ ಅಧ್ಯಕ್ಷ ಕೆ ಸುರೇಂದ್ರನ್, "ಇದು ಯೋಜಿತ ಕೊಲೆ" ಎಂದು ಆರೋಪ ಮಾಡಿದ್ದಾರೆ. "ರಾಜ್ಯ ಸರ್ಕಾರ ಹಾಗೂ ಪೊಲೀಸರ ವೈಫಲ್ಯದಿಂದಾಗಿ ರಾಜ್ಯದಲ್ಲಿ ಈ ರೀತಿ ಕೊಲೆಗಳು ಹೆಚ್ಚಾಗಿ ಸಂಭವಿಸುತ್ತಿದೆ," ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು ಈ ಘಟನೆಯ ಹಿಂದೆ ಎಸ್‌ಡಿಪಿಐನ ಕೈವಾಡವಿದೆ ಎಂದು ಕೂಡಾ ಬಿಜೆಪಿಯು ಆರೋಪ ಮಾಡಿದೆ.
ಸಂಜಿತ್ ಸ್ಥಳೀಯವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಸಕ್ರಿಯ ಕಾರ್ಯಕರ್ತನಾಗಿದ್ದ ಎಂದು ಮಾಹಿತಿ ಲಭ್ಯವಾಗಿದೆ. ಇನ್ನು ಸಂಜಿತ್‌ನ ದೇಹದ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ಮಾಡಲಾಗಿದೆ. ಸಂಜಿತ್‌ನ ದೇಹದಲ್ಲಿ ಈ ಹಲ್ಲೆಯ ಐವತ್ತಕ್ಕೂ ಅಧಿಕ ಗುರುತುಗಳು ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಬಿಗು ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಇನ್ನು ಆರ್‌ಎಸ್‌ಎಸ್ ಕಾರ್ಯಕರ್ತ ಸಂಜಿತ್‌ರ ಹತ್ಯೆಗೆ ಖಂಡನೆ ವ್ಯಕ್ತಪಡಿಸಿ ಸೋಮವಾರ ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆವರೆಗೆ ಮಲಂಪುಳ ಕ್ಷೇತ್ರದಲ್ಲಿ ಬಿಜೆಪಿಯು ಹರತಾಳವನ್ನು ನಡೆಸುತ್ತಿದೆ. ಸದ್ಯ ಪಾಲಕ್ಕಾಡ್ ಜಿಲ್ಲೆಯ ಎಡಪ್ಪುಳ್ಳಿ ವಲಯದಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ.
(ಒನ್‌ಇಂಡಿಯಾ ಸುದ್ದಿ)