ಶಬರಿಮಲೆ ಮಕರವಿಳಕ್ಕು ಪೂಜೆ: ಇಂದಿನಿಂದ ಬುಕಿಂಗ್ ಆರಂಭ
ತಿರುವನಂತಪುರಂ, ಜನವರಿ 6: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮಕರವಿಳಕ್ಕು ಸಂದರ್ಭದ ಪೂಜೆಯ ದರ್ಶನಕ್ಕೆ ಭಕ್ತರು ಟಿಕೆಟ್‌ಗಳನ್ನು ಬುಕಿಂಗ್ ಮಾಡಲು ಬುಧವಾರದಿಂದ ಅವಕಾಶ ನೀಡಲಾಗುತ್ತಿದೆ. ಜನವರಿ 8 ರಿಂದ 19ನೇ ತಾರೀಕಿನವರೆಗೆ ಶಬರಿಮಲೆ ಯಾತ್ರೆ ಕೈಗೊಳ್ಳುವವರಿಗಾಗಿ ಶಬರಿಮಲ ಆನ್‌ಲೈನ್ ವೆಬ್ ಪೋರ್ಟಲ್‌ನಲ್ಲಿ ಇಂದು ಸಂಜೆ 6 ಗಂಟೆಯಿಂದ ಟಿಕೆಟ್ ಬುಕಿಂಗ್ ಸೌಲಭ್ಯ ಶುರುವಾಗಲಿದೆ.
ದರ್ಶನಕ್ಕೂ ಮುನ್ನ 48 ಗಂಟೆಗಳ ಒಳಗಿನ ಅವಧಿಯಲ್ಲಿ ಭಕ್ತರು ಆರ್‌ಟಿ ಪಿಸಿಅರ್/ನ್ಯಾಟ್ ಮಾದರಿಗಳಲ್ಲಿ ಕೋವಿಡ್ ಪರೀಕ್ಷೆಗಳಿಗೆ ಒಳಪಟ್ಟು ನೆಗೆಟಿವ್ ವರದಿಗಳನ್ನು ತರಬೇಕು. ನೆಗೆಟಿವ್ ಪ್ರಮಾಣಪತ್ರ ಇದ್ದರೆ ಮಾತ್ರವೇ ಪ್ರವೇಶಾವಕಾಶ ನೀಡಲಾಗುತ್ತದೆ.
ಮಕರವಿಳಕ್ಕು, ಸಂಕ್ರಾಂತಿ ಹಬ್ಬದ ವಿಶೇಷ ಪೂಜೆಗಳು ಮತ್ತು ಅಯ್ಯಪ್ಪ ಸ್ವಾಮಿ ಜ್ಯೋತಿ ದರ್ಶನಕ್ಕಾಗಿ ಭಕ್ತರು ಮುಂಚೆಯೇ ಅನುಮತಿಗಳನ್ನು ಪಡೆದುಕೊಳ್ಳಬೇಕಿದೆ. ಅಂತಹ ಅನುಮತಿ ಪಡೆದುಕೊಂಡ ಭಕ್ತರಿಗೆ ಮಾತ್ರವೇ ಶಬರಿಮಲೆಗೆ ಪ್ರವೇಶ ನೀಡಲಾಗುತ್ತದೆ. ಮಕರವಿಳಕ್ಕು ಸಂದರ್ಭದಲ್ಲಿ ಅಯ್ಯಪ್ಪ ಸ್ವಾಮಿ ದೇವಾಲಯದ ಆವರಣಕ್ಕೆ ಯಾವ ಭಕ್ತರಿಗೂ ಪ್ರವೇಶಾವಕಾಶ ನೀಡುವುದಿಲ್ಲ ಎಂದು ದೇವಾಲಯದ ಮಂಡಳಿ ಸ್ಪಷ್ಟಪಡಿಸಿದೆ.

ಸಂಕ್ರಾಂತಿ ದಿನದಂದು ಅತಿ ಹೆಚ್ಚು ಭಕ್ತರು ಶಬರಿಮಲೆಗೆ ಭೇಟಿ ನೀಡುತ್ತಾರೆ. ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ ಮತ್ತು ಆಂಧ್ರಪ್ರದೇಶಗಳಿಂದ ಲಕ್ಷಾಂತರ ಭಕ್ತರು ತೆರಳುತ್ತಾರೆ. ಆದರೆ ಈ ಬಾರಿ ಟಿಕೆಟ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಭಕ್ತರ ಗರಿಷ್ಠ ಸಂಖ್ಯೆಯನ್ನು 5,000ಕ್ಕೆ ಹೆಚ್ಚಿಸಲಾಗಿದೆ. ಈ ಸಂಖ್ಯೆಯ ಮೇಲೆ ಒಬ್ಬರೇ ಒಬ್ಬ ಭಕ್ತರಿಗೂ ಅವಕಾಶ ನೀಡುವುದಿಲ್ಲ ಎಂದು ಕಟ್ಟುನಿಟ್ಟಾಗಿ ತಿಳಿಸಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications