ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಬರಿಮಲೆ ಯಾತ್ರಾರ್ಥಿಗಳ ಭದ್ರತೆ ಕುರಿತು ವಿಶೇಷ ಲಕ್ಷ್ಯ

|
Google Oneindia Kannada News

ತಿರುವನಂತಪುರಂ, ನವೆಂಬರ್.19: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಿಗೆ ತೆರಳುವ ಯಾತ್ರಾರ್ಥಿಗಳ ಭದ್ರತೆ ಕುರಿತು ಈ ಬಾರಿ ವಿಶೇಷ ಲಕ್ಷ್ಯ ವಹಿಸಲಾಗಿದೆ. ಸಂಜೆ 7 ಗಂಟೆಗೆ ಪಂಪಾದಿಂದ ಹೊರಡುವ ಯಾತ್ರಿಕರು ರಾತ್ರಿ 9 ಗಂಟೆ ವೇಳೆಗೆ ಸನ್ನಿಧಾನವನ್ನು ತಲುಪುವುದನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ.

ಬೆಟ್ಟದ ಮೇಲಿನ ಅಯ್ಯಪ್ಪ ಸ್ವಾಮಿಯ ದೇವಸ್ಥಾನವನ್ನು ರಾತ್ರಿ 9 ಗಂಟೆಗೆ ಮುಚ್ಚಲಾಗುತ್ತದೆ. ಈ ಅವಧಿಯೊಳಗೆ ಯಾತ್ರಾರ್ಥಿಗಳು ಸನ್ನಿಧಾನವನ್ನು ತಲುಪುವಂತೆ ನೋಡಿಕೊಳ್ಳಲು ಚಾರಣದ ಮಾರ್ಗದಲ್ಲಿ ಸಿಸಿಟಿವಿ ಅಳವಡಿಕೆ ಮಾಡಿದ್ದು, ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿಯು ವಿಶೇಷ ಗಮನ ವಹಿಸಲಿದ್ದಾರೆ.

ಶಬರಿಮಲೆ ದರ್ಶನ: ಭಕ್ತರ ಮಿತಿ ಹೆಚ್ಚಿಸುವ ಸಾಧ್ಯತೆಶಬರಿಮಲೆ ದರ್ಶನ: ಭಕ್ತರ ಮಿತಿ ಹೆಚ್ಚಿಸುವ ಸಾಧ್ಯತೆ

ಸನ್ನಿಧಾನಂನಲ್ಲಿ ಶಬರಿಮಲೆಯ ವಿಶೇಷ ಅಧಿಕಾರಿ ಬಿ. ಕೃಷ್ಣಕುಮಾರ್ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸನ್ನಿಧಾನಂನಲ್ಲಿ ಕೊವಿಡ್-19 ಶಿಷ್ಟಾಚಾರ ಪಾಲನೆ ಮತ್ತು ಎಲ್ಲ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಸೂಚನೆ ನೀಡಲಾಯಿತು.

Sabarimala News: COVID-19 Coordination Committee Members And Police Are Monitoring At Sabarimala

ಸನ್ನಿಧಾನದ ಸುತ್ತಲೂ ಕೊವಿಡ್-19 ಶಿಷ್ಟಾಚಾರ:

ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಸಂಯೋಜಕರ ಸಮಿತಿಯನ್ನು ರಚಿಸಲಾಗಿದೆ. ಪ್ರತಿಯೊಂದು ಇಲಾಖೆಗಳಿಂದ ಒಬ್ಬ ಅಧಿಕಾರಿಯನ್ನು ಒಳಗೊಂಡ ಸಮಿತಿ ಇದಾಗಿದ್ದು, ಸನ್ನಿಧಾನಂ ಸುತ್ತಲೂ ಕೊವಿಡ್-19 ಶಿಷ್ಟಾಚಾರದ ಉಸ್ತುವಾರಿಯನ್ನು ನೋಡಿಕೊಳ್ಳಲಿದ್ದಾರೆ. ಫ್ಲೈಓವರ್ ಪೂರ್ವದ ಹಾದಿಯಲ್ಲಿರುವ ಯಾತ್ರಾರ್ಥಿಗಳು ತಮ್ಮ ಇರುಮುಡಿ ಕಟ್ಟನ್ನು ಕೊರೊನಾವೈರಸ್ ಮಾರ್ಗಸೂಚಿಗಳ ಅನುಸಾರ ಸ್ಥಳಾಂತರಿಸಲು ಅವಕಾಶ ಕಲ್ಪಿಸಿ ಕೊಡುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು.

Recommended Video

ಭಾರತಕ್ಕೇ ಗಡಿಪಾರು ಮಾಡ್ತಾರಾ!! | Oneindia Kannada

ಖಾಸಗಿ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಆಹಾರದ ಪ್ಲೇಟ್ ಮತ್ತು ಕಪ್ ಗಳನ್ನು ಕೊವಿಡ್-19 ಶಿಷ್ಟಾಚಾರದ ಅನ್ವಯ ಬಿಸಾಡುವುದಕ್ಕೆ ಸೂಚಿಸಲಾಗಿದೆ. ಮರಕುಟ್ಟಮ್, ಚರಲ್ಮೇಡು, ಸನ್ನಿಧಾನಂನಲ್ಲಿ ಕಾರ್ಯ ನಿರ್ವಹಿಸುವ ಅಯ್ಯಪ್ಪ ಸೇವಾ ಸಂಘದ ಕಾರ್ಯಕರ್ತರಿಗೆ ಆರೋಗ್ಯ ಇಲಾಖೆ ವತಿಯಿಂದ ಮುಖದ ಮಾಸ್ಕ್ ಮತ್ತು ಕೈಗಳಿಗೆ ಗ್ಲೌಸ್ ಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ.

English summary
Sabarimala News: COVID-19 Coordination Committee Members And Police Are Monitoring At Sabarimala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X