ಧಾರ್ಮಿಕ ಆಚರಣೆ ಮಧ್ಯೆ ಪ್ರವೇಶಿಸುವುದಿಲ್ಲ: ಕೇರಳ ಸರ್ಕಾರ

ತಿರುವನಂತಪುರಂ, ನವೆಂಬರ್ 12: ಶಬರಿಮಲೆ ದೇವಸ್ಥಾನದ ವಿವಾದಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಯಾವುದೇ ಧಾರ್ಮಿಕ ವಿಚಾರ ಹಾಗೂ ಆಚರಣೆಗಳ ಮಧ್ಯೆ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕೇರಳ ಸರ್ಕಾರ ಅಲ್ಲಿನ ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ತಮ್ಮದೇ ಹಿತಾಸಕ್ತಿಗಳನ್ನು ಒಳಗೊಂಡಿರುವ ಕೆಲವು ರಾಜಕೀಯ ಪಕ್ಷಗಳು ಸುಪ್ರೀಂಕೋರ್ಟ್ ತೀರ್ಪನ್ನು ಖಂಡಿಸಿ ಪ್ರತಿಭಟನೆಗಳನ್ನು ನಡೆಸಿ, ಮಹಿಳಾ ಭಕ್ತರು ಒಳಕ್ಕೆ ಹೋಗದಂತೆ ತಡೆದಿವೆ ಎಂದರು.

ದೇವಸ್ಥಾನದ ಆಡಳಿತಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಯಾವುದೇ ನಿರ್ದೇಶನ ನೀಡಿಲ್ಲ. ಭಾರಿ ಪ್ರಮಾಣದ ಪ್ರತಿಭಟನೆಗಳು ನಡೆದ ಕಾರಣ ಮತ್ತು ಕೆಲವು ವ್ಯಕ್ತಿಗಳಿಂದ ಹಿಂಸಾಚಾರಗಳು ಉಂಟಾದ ಕಾರಣ ಭದ್ರತೆಯನ್ನು ಬಿಗಿಗೊಳಿಸುವಂತೆ ಮಾತ್ರ ಪೊಲೀಸರಿಗೆ ಸೂಚನೆ ನೀಡಿದ್ದರು.

sabarimala temple issue kerala government submits affidavit in high court

ದೇವಸ್ಥಾನವನ್ನು ಪ್ರವೇಶ ಮಾಡುವ ವಿಚಾರದಲ್ಲಿ ಯಾವುದೇ ಸೂಕ್ತ ಭಕ್ತರಿಗೆ ಅಡ್ಡಿಪಡಿಸಿಲ್ಲ. ಆದರೆ, ತೊಂದರೆ ಉಂಟು ಮಾಡುವ ಸಲುವಾಗಿಯೇ ಬಂದವರನ್ನು ಪೊಲೀಸರು ಹಿಡಿದಿದ್ದಾರೆ ಎಂದು ಅಫಿಡವಿಟ್‌ನಲ್ಲಿ ಸರ್ಕಾರ ಹೇಳಿದೆ.

ಶಬರಿಮಲೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿದ್ದು, ಅದನ್ನು ನ.13ರಂದು ವಿಚಾರಣೆಗೆ ತೆಗೆದುಕೊಳ್ಳಲಿದೆ. ಇದೇ 17ರಂದು ದೇವಸ್ಥಾನದ ಬಾಗಿಲು ತೆರೆಯಲಿದ್ದು, ಅದಕ್ಕಾಗಿ ಆನ್‌ಲೈನ್ ನೋಂದಣಿಯನ್ನು ಮಾಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+