ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ ಓಪನ್: 5 ಸಾವಿರ ಭಕ್ತರಿಗಷ್ಟೇ ಅವಕಾಶ

|
Google Oneindia Kannada News

ತಿರುವನಂತಪುರ, ಜುಲೈ 17: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಬಾಗಿಲು ತೆರೆದಿದ್ದು, ಭಕ್ತರ ದರ್ಶನಕ್ಕೆ ಅವಕಾಶಮಾಡಿಕೊಡಲಾಗಿದೆ.

ಆನ್‌ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ ಕೇವಲ 5,000 ಮಂದಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗುತ್ತಿದೆ. ಎಲ್ಲ ಭಕ್ತಾದಿಗಳು ಕಡ್ಡಾಯವಾಗಿ 48 ಗಂಟೆಗಳ ಹಿಂದೆ ನೀಡಿದ ನೆಗೆಟಿವ್ ಆರ್‌ಟಿ-ಪಿಸಿಆರ್ ಕೋವಿಡ್-19 ಪರೀಕ್ಷಾ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. ಮಾಸಿಕ ಧಾರ್ಮಿಕ ಆಚರಣೆಗಳ ಬಳಿಕ ಈ ತಿಂಗಳ 21ರಂದು ದೇವಾಲಯ ಮತ್ತೆ ಮುಚ್ಚಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Sabarimala

ತಿಂಗಳ ಐದು ದಿನಗಳ ಪೂಜೆ ನೆರವೇರಿಸಲು ದೇವಾಲಯದ ಬಾಗಿಲು ತೆರೆಯಲಾಗಿದೆ. ಆನ್‌ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ ಕೇವಲ 5,000 ಮಂದಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ.

ಜುಲೈ 17ರಿಂದ ಶಬರಿಮಲೆ ದೇಗುಲ ಓಪನ್; ನಿಯಮಗಳು ಹೀಗಿವೆ...ಜುಲೈ 17ರಿಂದ ಶಬರಿಮಲೆ ದೇಗುಲ ಓಪನ್; ನಿಯಮಗಳು ಹೀಗಿವೆ...

ದೇಗುಲ ಆವರಣದಲ್ಲಿ ಕಡ್ಡಾಯ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮತ್ತು ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸೂಕ್ತ ಕೋವಿಡ್ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ದೇವಾಲಯ ಆವರಣದಲ್ಲಿ ಭಕ್ತರ ನಡವಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತ್ಯೇಕ ಮಾರ್ಗಸೂಚಿ ನೀಡಿವೆ.

ಜುಲೈ 17ರಿಂದ 21ರವರೆಗೆ ಮಾಸಿಕ ವಿಧಿವಿಧಾನಗಳಿಗಾಗಿ ದೇವಾಲಯ ಬಾಗಿಲು ತೆರೆಯಲಾಗಿದೆ. ಮಾಸಿಕ ಆಚರಣೆಗಳಿಗಾಗಿ ದೇವಾಲಯವನ್ನು ತಿಂಗಳ ಕೆಲ ನಿರ್ದಿಷ್ಟ ದಿನಗಳಲ್ಲಿ ತೆರೆದರೂ ಕೋವಿಡ್-19 ನಿರ್ಬಂಧಗಳಿಂದಾಗಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರಲಿಲ್ಲ.

ಲಾಕ್‌ಡೌನ್ ಅವಧಿಯಲ್ಲಿ ತನ್ನ ಅಧೀನದಲ್ಲಿರುವ 1,200 ದೇವಾಲಯಗಳಿಗೆ ಭಕ್ತರು ಪ್ರವೇಶಿಸದಂತೆ ತಿರುವಾಂಕೂರು ದೇವಸ್ವಂ ಬೋರ್ಡ್ (ಟಿಡಿಬಿ) ನಿರ್ಬಂಧ ವಿಧಿಸಿತ್ತು. ಆದಾಗ್ಯೂ ಧಾರ್ಮಿಕ ವಿಧಿವಿಧಾನಗಳಿಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಂಡಿತ್ತು.

ಇಂದಿನಿಂದ ಆರಂಭವಾಗುವ ಮಾಸಿಕ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸುವ ಭಕ್ತರಿಗೆ ಅಯ್ಯಪ್ಪ ದೇಗುಲದಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಲಾಗಿದೆ.

English summary
The famous Sabarimala temple of Lord Ayyappa reopened for devotees from Saturday. The Travancore Devaswom Board has announced that the temple will remain open for a period of five days, ie from July 17 to July 21 to conduct the monthly rituals.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X