ಜುಲೈ 17ರಿಂದ ಶಬರಿಮಲೆ ದೇಗುಲ ಓಪನ್; ನಿಯಮಗಳು ಹೀಗಿವೆ...

ತಿರುವನಂತಪುರಂ, ಜುಲೈ 10: ಕೊರೊನಾ ಸೋಂಕಿನ ಏರಿಕೆ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲವನ್ನು ತಿಂಗಳ ಪೂಜೆಯ ಪ್ರಯುಕ್ತ ಜುಲೈ 17ರಿಂದ 21ರವರೆಗೂ ತೆರೆಯಲಾಗುತ್ತಿದೆ.

ಈ ಐದು ದಿನಗಳ ಸಮಯದಲ್ಲಿ ಕೆಲವು ನಿಬಂಧನೆಗಳೊಂದಿಗೆ ಭಕ್ತರಿಗೆ ದೇಗುಲ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ಶನಿವಾರ ದೇಗುಲ ಆಡಳಿತ ಮಂಡಳಿ ತಿಳಿಸಿದೆ.

ಕೊರೊನಾ ಲಸಿಕೆ ಪಡೆದಿರುವ ಪ್ರಮಾಣಪತ್ರ ಹಾಗೂ 48 ಗಂಟೆಗಳ ಹಿಂದೆ ಪರೀಕ್ಷೆ ಮಾಡಿಸಿದ ಕೊರೊನಾ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಭಕ್ತರು ದೇಗುಲಕ್ಕೆ ಬರಬಹುದಾಗಿದೆ.

Sabarimala Temple To Open From July 17-21 With Covid Rules

ಆನ್‌ಲೈನ್ ಬುಕ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಗರಿಷ್ಠ ಐದು ಸಾವಿರ ಭಕ್ತರಿಗೆ ಅವಕಾಶ ನೀಡಲಾಗಿದೆ.

ಕೊರೊನಾ ಸೋಂಕಿನ ಏರಿಕೆ ಹಿನ್ನೆಲೆಯಲ್ಲಿ ಕೇರಳದಲ್ಲಿ ಶಬರಿಮಲೆ ದೇಗುಲ ಸೇರಿದಂತೆ ಹಲವು ಪ್ರಮುಖ ದೇಗುಲಗಳನ್ನು ಮುಚ್ಚಲಾಗಿತ್ತು. ಇದೀಗ ಐದು ದಿನಗಳ ಕಾಲ ದೇವಾಲಯವನ್ನು ತೆರೆಯಲಾಗುತ್ತಿದೆ.

ಇದೇ ವೇಳೆ ರಾಜ್ಯದಲ್ಲಿ ಸೋಂಕಿನ ಪ್ರಕರಣಗಳೂ ಏರಿಕೆಯಾಗಿವೆ. ಶನಿವಾರ ಕೇರಳದಲ್ಲಿ 14,087 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟಾರೆ 30,53,116 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಒಂದೇ ದಿನ 109 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. 11,867 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ರಾಜ್ಯದಲ್ಲಿ ಒಟ್ಟು 1,15,226 ಸಕ್ರಿಯ ಪ್ರಕರಣಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+