ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಬರಿಮಲೆ ಬಾಗಿಲು ತೆರೆಯಲ್ಲ; ಭಕ್ತರಿಗೆ ಇಲ್ಲ ಅಯ್ಯಪ್ಪನ ದರ್ಶನ

|
Google Oneindia Kannada News

ತಿರುವನಂತಪುರಂ, ಜೂನ್ 11 : ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಬಾಗಿಲು ತೆರೆಯದಿರಲು ತೀರ್ಮಾನ ಕೈಗೊಳ್ಳಲಾಗಿದೆ. ಲಾಕ್ ಡೌನ್ ಪರಿಣಾಮ ಬಾಗಿಲು ಮುಚ್ಚಿದ್ದ ದೇಶದ ವಿವಿಧ ದೇವಾಲಯಗಳಲ್ಲಿ ಷರತ್ತುಗಳ ನಡುವೆ ದೇವರ ದರ್ಶನ ಪಡೆಯಲು ಅನುಮತಿ ನೀಡಲಾಗಿದೆ.

Recommended Video

ಚಿರು ನಂತರ ಕೇರಳದಲ್ಲಿ ನಡೆಯಿತು ಮತ್ತೊಂದು ಮನಕಲಕುವ ಘಟನೆ | Nithin Chandran

ಗುರುವಾರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಅರ್ಚಕರು ಮತ್ತು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಸಭೆ ನಡೆಯಿತು. ಕೇರಳದ ದೇವಸ್ವಂ ಖಾತೆ ಸಚಿವ ಕಡಕಂಪಲ್ಲಿ ಸುರೇಂದ್ರನ್ ಸಹ ಸಭೆಯಲ್ಲಿ ಉಪಸ್ಥಿತರಿದ್ದರು.

ಜೂನ್ 14 ರಂದು ಶಬರಿಮಲೆ ದೇವಸ್ಥಾನದಲ್ಲಿ ಮಾಸಿಕ ಪೂಜೆಜೂನ್ 14 ರಂದು ಶಬರಿಮಲೆ ದೇವಸ್ಥಾನದಲ್ಲಿ ಮಾಸಿಕ ಪೂಜೆ

Sabarimala Temple Will Not Opened For Public

ತಿಂಗಳ ಪೂಜೆಯಾಗಿ ಸದ್ಯಕ್ಕೆ ಅಯ್ಯಪ್ಪಸ್ವಾಮಿ ದೇವಾಲಯದ ಬಾಗಿಲು ತೆರೆಯುವುದು ಬೇಡ ಎಂದು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ದೇವಾಲಯದಲ್ಲಿ ನಡೆಯಬೇಕಿದ್ದ ಜಾತ್ರೆಯನ್ನು ರದ್ದುಗೊಳಿಸಲು ಸಭೆಯಲ್ಲಿ ಒಪ್ಪಿಗೆ ಸಿಕ್ಕಿತು.

ವಿಸ್ತೃತ ನ್ಯಾಯಪೀಠದಿಂದ ಶಬರಿಮಲೆ ಕೇಸ್ ನಿತ್ಯ ವಿಚಾರಣೆ ವಿಸ್ತೃತ ನ್ಯಾಯಪೀಠದಿಂದ ಶಬರಿಮಲೆ ಕೇಸ್ ನಿತ್ಯ ವಿಚಾರಣೆ

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಕಾರಣ ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ವಿವಿಧ ಮಾರ್ಗಸೂಚಿಗಳನ್ನು ಶಬರಿಮಲೆಯಲ್ಲಿ ಪಾಲನೆ ಮಾಡುವುದು ಕಷ್ಟವಾಗಲಿದೆ. ಆದ್ದರಿಂದ, ಸಾರ್ವಜನಿಕರಿಗೆ ದೇವಾಲಯಕ್ಕೆ ಪ್ರವೇಶವನ್ನು ಮುಂದಿನ ಆದೇಶದ ತನಕ ನಿರಾಕರಿಸಲಾಗಿದೆ.

ದೇವರಿಗೂ ಸಿಎಎ: ತಿರುಪತಿ ತಿಮ್ಮಪ್ಪ, ಶಬರಿಮಲೆ ಅಯ್ಯಪ್ಪಗೂ ಪೌರತ್ವ!ದೇವರಿಗೂ ಸಿಎಎ: ತಿರುಪತಿ ತಿಮ್ಮಪ್ಪ, ಶಬರಿಮಲೆ ಅಯ್ಯಪ್ಪಗೂ ಪೌರತ್ವ!

ಜೂನ್ 14ರಂದು ಶಬರಿಮಲೆಯಲ್ಲಿ ಮಾಸಿಕ ಪೂಜೆ ನಡೆಯಬೇಕಿತ್ತು. ದೇವಾಲಯದ ಬಾಗಿಲು ತೆರೆದರೆ ಕೇರಳ ಮಾತ್ರವಲ್ಲ ಅಕ್ಕಪಕ್ಕದ ರಾಜ್ಯಗಳಿಂದ ಸಹ ಭಕ್ತರು ಆಗಮಿಸುತ್ತಾರೆ. ಇದರಿಂದಾಗಿ ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಇದೆ.

English summary
In a Travancore Devaswom Board meeting decided that Sabarimala temple will not be opened for public. Monthly pooja and temple festival will also be cancelled.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X