'ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿದರೆ ಸಾಮೂಹಿಕ ಆತ್ಮಹತ್ಯೆ'
ತಿರುವನಂತಪುರಂ, ಅಕ್ಟೋಬರ್ 13: 'ಶಬರಿಮಲೆಗೆ ಮಹಿಳೆಯರು ತೆರಳಿದರೆ ನಮ್ಮ ಮಹಿಳಾ ಕಾರ್ಯಕರ್ತರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ' ಎಂದು ಕೇರಳ ಶಿವಸೇನಾ ನಾಯಕ ಪೆರುಗಮ್ಮಳ ಆಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
'ನಮ್ಮ ಮಹಿಳಾ ಕಾರ್ಯಕರ್ತೆಯರು ಅಕ್ಟೋಬರ್ 17 ಮತ್ತು 18 ರಂದು ಇಲ್ಲಿನ ಪದ್ಮಾ ನದಿಯ ಬಳಿ ಸೇರುತ್ತಾರೆ. ಯಾರಾದರೂ ಮಹಿಳೆಯರು(10 ರಿಂದ 50 ವರ್ಷದೊಳಗಿನ) ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ತೆರಳಿದರೆ ನಮ್ಮ ಕಾರ್ಯಕರ್ತೆಯರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ' ಎಂದು ಅವರು ಬೆದರಿಕೆ ನೀಡಿದ್ದಾರೆ.
ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕಿದ್ದ ನಿರ್ಬಂಧವನ್ನು ತೆರವುಗೊಳಿಸಿ ಸೆ.28 ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪನ್ನು ಶಿವಸೇನೆ ವಿರೋಧಿಸಿತ್ತು. 800 ವರ್ಷಗಳಿಂದ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದ ದೇವಾಲಯದ ಆಡಳಿತ ಮಂಡಳಿಯ ನಿಯಮಕ್ಕೆ ಬದಲಾಗಿ, ಮಹಿಳೆಯರಿಗೆ ಪ್ರವೇಶ ನೀಡಲು ಅನುಮತಿ ನೀಡಿದ ಸುಪ್ರೀಂ ಕ್ರಮವನ್ನು ಖಂಡಿಸಿ ಅಕ್ಟೋಬರ್ 17 ಮತ್ತು18 ರಂದು ಶಿವಸೇನೆ ಪ್ರತಿಭಟನೆ ನಡೆಸಲಿದೆ.

10 ರಿಂದ 50 ವರ್ಷದೊಳಗಿನ ಮಹಿಳೆಯರು ಋತುಮತಿಯಾಗುವ ಕಾರಣ ಅವರು ದೇವಾಲಯದ ಒಳಗೆ ಪ್ರವೇಶಿಸುವುದರಿಂದ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂದು ವಾದಿಸಲಾಗಿತ್ತು.












Click it and Unblock the Notifications