ಶಬರಿಮಲೆ ಸುಪ್ರೀಂ ತೀರ್ಪು: ನ.13 ರಂದು ಮೇಲ್ಮನವಿ ವಿಚಾರಣೆ

ನವದೆಹಲಿಜ, ಅಕ್ಟೋಬರ್ 23: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಸಲ್ಲಿಸಲಾಗಿರುವ ಮೇಲ್ಮನವಿ ವಿಚಾರಣೆಯನ್ನು ನ.13 ರಂದು ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ.

10-50 ವರ್ಷ ವಯಸ್ಸಿನ ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸಿ ಅಯ್ಯಪ್ಪ ಭಕ್ತರ ಸಮಿತಿ, ಅಯ್ಯಪ್ಪ ದೇವಾಲಯ ಆಡಳಿತ ಮಂಡಳಿ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

Sabarimala verdict: Supreme court will hear review ptition on Nov 13

ಇದುವರೆಗೂ ಸುಮಾರು 19 ಕ್ಕೂ ಹೆಚ್ಚು ಮೇಲ್ಮನವಿ ಅರ್ಜಿಗಳು ಸುಪ್ರೀಂ ಕೋರ್ಟ್ ಬಳಿಯಿದೆ. ಈ ಅರ್ಜಿಗಳನ್ನು ತುರ್ತಾಗಿ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದಿದ್ದ ಸುಪ್ರೀಂ ಕೋರ್ಟ್, ವಿಚಾರಣೆಯ ದಿನಾಂಕವನ್ನು ಇಂದು ನಿಗದಿಗೊಳಿಸಿದೆ.

10 ರಿಂದ 50 ವರ್ಷ ವಯಸ್ಸಿನ ಮಹಿಳೆಯರು ಋತುಮತಿಯಾಗುವ ಕಾರಣ ಕೇರಳದ ಶಬರಿಮಲೆ ಅಯ್ಯಪ್ಪ ದೇವಾಲಯ ಪ್ರವೇಶಿಸುವಂತಿಲ್ಲ ಎಂದು ನಿರ್ಬಂಧ ಹೇರಲಾಗಿತ್ತು. ಸುಮಾರು 800 ವರ್ಷಗಳಿಂದಲೂ ಈ ಪದ್ಧತಿ ಜಾರಿಯಲ್ಲಿತ್ತು.

ಈ ವಯಸ್ಸಿನ ಮಹಿಳೆಯರು ದೇವಾಲಯಕ್ಕೆ ಪ್ರವೇಶಿಸುವುದರಿಂದ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂದು ವಾದಿಸಲಾಗಿತ್ತು. ಆದರೆ ಇದು ಸಮಾನತೆಯನ್ನು ವಿರೋಧಿಸುತ್ತದೆ ಎಂದಿದ್ದ ಸುಪ್ರೀಂ ಕೋರ್ಟ್, ಸೆ.28 ರಂದು ಈ ನಿರ್ಬಂಧವನ್ನು ತೆರವುಗೊಳಿಸಿ ಐತಿಹಾಸಿಕ ತೀರ್ಪು ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+