ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಟಲಿಯ ನೌಕಾಯೋಧರ ವಿರುದ್ಧದ ಕಾನೂನು ಪ್ರಕ್ರಿಯೆ ಮುಕ್ತಾಯ

|
Google Oneindia Kannada News

ನವದೆಹಲಿ, ಜೂನ್ 15: ಕೇರಳದ ಕರಾವಳಿಯಲ್ಲಿ 2012ರಲ್ಲಿ ಭಾರತದ ಇಬ್ಬರು ಮೀನುಗಾರರನ್ನು ಕೊಂದ ಆರೋಪಕ್ಕೆ ಗುರಿಯಾಗಿದ್ದ ಇಟಲಿ ನೌಕಾಪಡೆಯ ಯೋಧರಾದ ಸಾಲ್ವಟೋರ್‌ ಜಿರೋನ್‌ ಮತ್ತು ಮಸ್ಸಿಮಿಲಿಯಾನೊ ಲಟ್ಟೊರೆ ವಿರುದ್ಧದ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿಲು ಸುಪ್ರೀಂ ಕೋರ್ಟ್‌ ಸೂಚಿಸಿದೆ.

ಮೀನುಗಾರರನ್ನು ಕೊಂದಿರುವುದಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ಕುಟುಂಬಸ್ಥರಿಗೆ ಪರಿಹಾರ ವಿತರಿಸಲು ರೂ. 10 ಕೋಟಿ ಮೊತ್ತವನ್ನು ಇಟಲಿ ವರ್ಗಾಯಿಸಿದೆ. ಸುಪ್ರೀಂ ಕೋರ್ಟ್‌ ರಿಜಿಸ್ಟ್ರಿಯ ಖಾತೆಗೆ ಕಳೆದ ವಾರವೇ ಈ ಮೊತ್ತ ಜಮೆಯಾಗಿದೆ. ಈ ಕುರಿತಂತೆ ದೃಢೀಕರಣ ಹೇಳಿಕೆಯನ್ನು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಎಂ ಆರ್‌ ಶಾ ಅವರ ನೇತೃತ್ವದ ಪೀಠ ಪಡೆದುಕೊಂಡಿದೆ.

''ನ್ಯಾಯಮಂಡಳಿಯ ಅದೇಶದಂತೆ ರೂ. 10 ಕೋಟಿ ಪರಿಹಾರಕ್ಕೆ ಭಾರತ ಒಪ್ಪಿಕೊಂಡಿದ್ದು, ಪರಿಹಾರದ ಹಣವನ್ನು ಈಗಾಗಲೇ ವರ್ಗಾಯಿಸಲಾಗಿದೆ. ಇಟಲಿ ಸರ್ಕಾರವು ಹಣವನ್ನು ಪಾವತಿಸಿದ್ದು, ಈ ಹಣವನ್ನು ಸುಪ್ರೀಂಕೋರ್ಟ್ ರಿಜಿಸ್ಟ್ರಿಗೆ ವರ್ಗಾಯಿಸಲಾಗಿದೆ. ಪರಿಹಾರ ವಿತರಿಸಿರುವುದು ನಮಗೆ ಸಮಾಧಾನ ಉಂಟು ಮಾಡಿದೆ. ಹೀಗಾಗಿ, ಭಾರತ ಸಂವಿಧಾನದ 142ನೇ ವಿಧಿಯ ಅನ್ವಯ ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಲಾಗಿದೆ," ಎಂದು ನ್ಯಾಯಪೀಠವು ಆದೇಶದಲ್ಲಿ ತಿಳಿಸಿದೆ.

SC closes case against Italian Marines accused of killing fishermen off Kerala coast

''ಸುಪ್ರೀಂ ಕೋರ್ಟ್‌ ರಿಜಿಸ್ಟ್ರಿ ಖಾತೆಯಿಂದ ಈ ಮೊತ್ತವನ್ನು ಕೇರಳದ ಹೈಕೋರ್ಟ್‌ ರಿಜಿಸ್ಟ್ರಿಗೆ ವರ್ಗಾಯಿಸಲಾಗುವುದು. ಈ ಪೈಕಿ ತಲಾ 4 ಕೋಟಿ ರೂಪಾಯಿಗಳನ್ನು ಘಟನೆಯಲ್ಲಿ ಮೃತರಾದ ಇಬ್ಬರು ಸಂತ್ರಸ್ತರ ಕುಟುಂಬಸ್ಥರಿಗೆ ಮತ್ತು ಉಳಿದ ಎರಡು ಕೋಟಿ ರೂಪಾಯಿಯನ್ನು ಹಡಗಿನ ಮಾಲೀಕರಿಗೆ ಪಾವತಿಸಲಾಗುವುದು,'' ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಹೇಳಿದೆ.

ಇದಲ್ಲದೆ, ಈ ಪ್ರಕರಣದ ಸಂಬಂಧಿಸಿದ ಇಬ್ಬರು ನೌಕಾಪಡೆಯ ಆರೋಪಿಗಳ ವಿರುದ್ಧಇಟಲಿ ಸರ್ಕಾರವು ಕ್ರಿಮಿನಲ್‌ ಪ್ರಕ್ರಿಯೆಯನ್ನು ಆರಂಭಿಸಬಹುದು ಎಂದು ಕೋರ್ಟ್ ತಿಳಿಸಿದೆ.

ಇಟಲಿಯ 'ಎನ್ರಿಕಾ ಲೆಕ್ಸಿ' ಹಡಗಿನಲ್ಲಿದ್ದ ಜಿರೋನ್‌ ಮತ್ತು ಲಟ್ಟೊರೆ ಇವರಿಬ್ಬರು ಭಾರತದ ಮೀನುಗಾರರನ್ನು ಕಡಲ್ಗಳ್ಳರು ಎಂದು ಭಾವಿಸಿ ಗುಂಡು ಹಾರಿಸಿ ಹತ್ಯೆ ಮಾಡಿದ್ದರು.(ಮಾಹಿತಿ ಕೃಪೆ: ಬಾರ್ ಅಂಡ್ ಬೆಂಚ್)

English summary
The Supreme Court has closed the case against the Italian Marines, accused of killing two fishermen off the Kerala coast.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X