Breaking; ಕಾಂಗ್ರೆಸ್ ಹಿರಿಯ ನಾಯಕ ಕೆ. ಸತ್ಯನಾರಾಯಣ ವಿಧಿವಶ
ತಿರುವನಂತಪುರಂ, ಏಪ್ರಿಲ್ 25; ಕಾಂಗ್ರೆಸ್ ಹಿರಿಯ ನಾಯಕ ಕೆ. ಸತ್ಯನಾರಾಯಣ ನಿಧನ ಹೊಂದಿದ್ದಾರೆ. ಮಹಾರಾಷ್ಟ್ರ, ಜಾರ್ಖಂಡ್ ಮತ್ತು ನಾಗಾಲ್ಯಾಂಡ್‌ನ ರಾಜ್ಯಪಾಲರಾಗಿ ಅವರು ಕಾರ್ಯ ನಿರ್ವಹಣೆ ಮಾಡಿದ್ದರು.
89 ವರ್ಷದ ಕೆ. ಸತ್ಯನಾರಾಯಣ ಪಾಲಕ್ಕಾಡ್‌ನ ನಿವಾಸದಲ್ಲಿ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನೆಯಲ್ಲಿಯೇ ಒಂದೂವರೆ ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಮಹಾರಾಷ್ಟ್ರ, ಜಾರ್ಖಂಡ್ ಮತ್ತು ನಾಗಾಲ್ಯಾಂಡ್ ರಾಜ್ಯಪಾಲರಾಗಿ ಕಾರ್ಯ ನಿರ್ವಹಣೆ ಮಾಡಿದ್ದ ಕೆ. ಸತ್ಯನಾರಾಯಣ ಅರುಣಾಚಲ ಪ್ರದೇಶ, ಅಸ್ಸಾಂ, ಗೋವಾದ ಹೆಚ್ಚುವರಿ ರಾಜ್ಯಪಾಲರಾಗಿ ಕೆಲಸ ಮಾಡಿದ್ದರು.

ಕೇರಳ ವಿಧಾನಸಭೆಗೆ ಶಾಸಕರಾಗಿ ನಾಲ್ಕು ಬಾರಿ ಆಯ್ಕೆಯಾಗಿದ್ದ ಕೆ. ಸತ್ಯನಾರಾಯಣ ಹಣಕಾಸು, ಅಬಕಾರಿ, ಕೃಷಿ ಸೇರಿದಂತೆ ವಿವಿಧ ಖಾತೆಗಳನ್ನು ನಿರ್ವಹಣೆ ಮಾಡಿದ್ದರು.
ಸದ್ಯ ಪಾರ್ಥೀವ ಶರೀರವನ್ನು ಸದ್ಯ ಪಾಲಕ್ಕಾಡ್‌ನ ನಿವಾಸದಲ್ಲಿ ಇಡಲಾಗಿದೆ. ಪಕ್ಷದ ಕಚೇರಿಯಲ್ಲಿ ಸಹ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಸಂಜೆ 5.30ರ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಕೆ. ಸತ್ಯನಾರಾಯಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.











Click it and Unblock the Notifications