ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ.16ರಂದು ಬಾಗಿಲು ತೆರೆಯಲಿದೆ ಶಬರಿಮಲೆ ದೇವಾಲಯ

|
Google Oneindia Kannada News

ತಿರುವನಂತಪುರಂ, ನವೆಂಬರ್ 10 : ಮಂಡಲ ಮಕರವಿಳಕ್ಕು ವಾರ್ಷಿಕ ಪೂಜಾ ಕಾರ್ಯಗಳ ಅಂಗವಾಗಿ ನವೆಂಬರ್ 16ರಂದು ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಬಾಗಿಲು ತೆರೆಯಲಾಗುತ್ತದೆ.

ನವೆಂಬರ್ 16ರಿಂದ ಎರಡು ತಿಂಗಳ ಕಾಲ ದೇವಾಲಯದ ಬಾಗಿಲು ತೆರೆದಿರುತ್ತದೆ. ಮೇಲಸಂತಿ ವಾಸುದೇವ ತಂತ್ರಿಗಳ ನೇತೃತ್ವದಲ್ಲಿ ಕಲಶಾಭಿಷೇಕ ನಡೆಸುವ ಮೂಲಕ ಪೂಜಾ ಕೈಂಕರ್ಯಗಳಿಗೆ ಚಾಲನೆ ನೀಡಲಾಗುತ್ತದೆ.

ಶಬರಿಮಲೆ ದೇಗುಲ ಹೊಸ ವಿವಾದ : ಭಕ್ತರು ನೀಡಿದ್ದ ಹರಕೆ ಚಿನ್ನ ನಾಪತ್ತೆ ಶಬರಿಮಲೆ ದೇಗುಲ ಹೊಸ ವಿವಾದ : ಭಕ್ತರು ನೀಡಿದ್ದ ಹರಕೆ ಚಿನ್ನ ನಾಪತ್ತೆ

ಮಂಡಲ ಮಕರವಿಳಕ್ಕು ಅಂಗವಾಗಿ ದೇವಾಲಯದ ಬಾಗಿಲು ತೆರೆದ ಬಳಿಕ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಆಗಮಿಸಲಿದ್ದಾರೆ.

ಶಬರಿಮಲೆ ವಿವಾದ: ಗಂಡನ ಮನೆಗೆ ಮರಳಿದ ಕನಕದುರ್ಗಾ ಶಬರಿಮಲೆ ವಿವಾದ: ಗಂಡನ ಮನೆಗೆ ಮರಳಿದ ಕನಕದುರ್ಗಾ

Shabarimala Temple To Open On November 16

ಶಬರಿಮಲೆ ಕ್ಷೇತ್ರಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರಿಗೆ ಪ್ರವೇಶ ಕಲ್ಪಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ ತೀರ್ಪಿನ ವಿರುದ್ಧ ಕೇರಳದಲ್ಲಿ ಭಾರೀ ಪ್ರತಿಭಟನೆ ನಡೆದಿತ್ತು.

ಶಬರಿಮಲೆ ತೀರ್ಪು: ಸುಪ್ರೀಂ ನಿಲುವಿಗೆ ಬದ್ಧ ಎಂದ ಅಯ್ಯಪ್ಪ ದೇಗುಲಶಬರಿಮಲೆ ತೀರ್ಪು: ಸುಪ್ರೀಂ ನಿಲುವಿಗೆ ಬದ್ಧ ಎಂದ ಅಯ್ಯಪ್ಪ ದೇಗುಲ

ಈ ತೀರ್ಪನ್ನು ಪುನರ್ ಪರಿಶೀಲನೆ ನಡೆಸಲು ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ನವೆಂಬರ್ 17ರೊಳಗೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಾಯ್ ಈ ಕುರಿತ ತೀರ್ಪು ಪ್ರಕಟಿಸಲಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ ಆರು ಮಂದಿ ಮಹಿಳೆಯರ ಜೊತೆ ಶಬರಿಮಲೆ ದೇವಾಲಯ ಪ್ರವೇಶಿಸಲು ಪ್ರಯತ್ನ ನಡೆಸಿದ್ದರು. ಭಕ್ತರು ಇದಕ್ಕೆ ಅಡ್ಡಿ ಪಡಿಸಿದ್ದರು. ಇಂದರಿಂದಾಗಿ ದೇವಾಲಯ, ದೇವಾಲಯಕ್ಕೆ ಸಾಗುವ ಮಾರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ನವೆಂಬರ್ 17ರೊಳಗೆ ಶಬರಿಮಲೆ ತೀರ್ಪಿನ ಪುನರ್ ಪರಿಶೀಲನಾ ಅರ್ಜಿಯ ತೀರ್ಪು ಬರುವುದರಿಂದ ಕೇರಳದಲ್ಲಿ ಭದ್ರತೆ ಕೈಗೊಳ್ಳಲು ಹಿರಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸುತ್ತಿದ್ದಾರೆ.

English summary
Sabarimala temple in Kerala will open on November 16, 2019 for the two-month-long annual Mandalam Makaravilakku pilgrimage season.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X