ಕರೆ ಮಾಡಿದ್ದಕ್ಕಾಗಿ ರಾಜನಾಥ್ ಸಿಂಗ್ ಗೆ ಧನ್ಯವಾದ ಅರ್ಪಿಸಿದ ಶಶಿ ತರೂರ್
ನವದೆಹಲಿ, ಏಪ್ರಿಲ್ 17: ಗೃಹಸಚಿವ ರಾಜನಾಥ್ ಸಿಂಗ್ ಅವರಿಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಧನ್ಯವಾದ ಅರ್ಪಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ದೇವಾಲಯವೊಂದರಲ್ಲಿ ಬಿದ್ದು ತಲೆಗೆ ಪೆಟ್ಟಾದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಶಿ ತರೂರ್ ಅವರಿಗೆ ದೂರವಾಣಿ ಕರೆ ಮಾಡಿ, ರಾಜನಾಥ್ ಸಿಂಗ್ ಅವರು ಆರೋಗ್ಯ ವಿಚಾರಿಸಿದ್ದರು.
ಅದಕ್ಕೆ ಪ್ರತಿಯಾಗಿ ಧನ್ಯವಾದ ಅರ್ಪಿಸಿರುವ ಶಶಿ ತರೂರ್, ಟ್ವೀಟ್ ಮಾಡಿ ತಮ್ಮ ಸಂತಸ ಹಂಚಿಕೊಂಡಿದ್ದಾರೆ.
Thank you @rajnathsingh for your call. I am touched by your concern. By the grace of God I am well enough to be back in action.
— Shashi Tharoor (@ShashiTharoor) April 17, 2019
"ಕರೆ ಮಾಡಿದ್ದಕ್ಕೆ ಧನ್ಯವಾದಗಳು ರಾಜನಾಥ್ ಸಿಂಗ್ ಅವರೇ. ನಿಮ್ಮ ಕಾಳಜಿ ನನ್ನನ್ನು ತಟ್ಟಿತು. ದೇವರ ದಯೆಯಿಂದ ನಾನು ಗುಣಮುಖನಾಗಿ, ಕೆಲಸಕ್ಕೆ ವಾಪಸ್ಸಾಗಿದ್ದೇನೆ" ಎಂದು ಟ್ವೀಟ್ ಮಾಡಿದ್ದಾರೆ.

ಲೋಕಸಭಾ ಚುನಾವಣಾ ಪ್ರಚಾರಕ್ಕೆಂದು ಕೇರಳಕ್ಕೆ ತೆರಳಿದ್ದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಶಶಿ ತರೂರ್ ಅವರಿದ್ದ ಆಸ್ಪತ್ರೆಗೆ ತೆರಳಿ, ಅವರ ಕುಶಲ ವಿಚಾರಿಸಿದ್ದರು.
ಕೇರಳದ ತಿರುವನಂತಪುರಂ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಶಶಿ ತರೂರ್, ಏಪ್ರಿಲ್ 23 ರಂದು ಚುನಾವಣೆ ಎದುರಿಸಲಿದ್ದಾರೆ. ಮೇ 23 ರಂದು ಫಲಿತಾಂಶ ಹೊರಬೀಳಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications