ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಬರಿಮಲೆ ತೀರ್ಪು ಮರುಪರಿಶೀಲನಾ ಅರ್ಜಿ ಇಂದು ಸುಪ್ರಿಂ ವಿಚಾರಣೆ

|
Google Oneindia Kannada News

ನವದೆಹಲಿ, ನವೆಂಬರ್ 13: ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಮುಕ್ತ ಅವಕಾಶ ಕಲ್ಪಿಸಿದ ಸುಪ್ರಿಂಕೋರ್ಟ್‌ ತೀರ್ಪಿನ ಮರುಪರಿಶೀಲನೆಗೆ ಸಲ್ಲಿಸಿದ್ದ ಅರ್ಜಿಗಳನ್ನು ಇಂದು ಸುಪ್ರಿಂಕೋರ್ಟ್‌ ವಿಚಾರಣೆಗೆ ತೆಗೆದುಕೊಳ್ಳಲಿದೆ.

10-50 ವರ್ಷ ವಯಸ್ಸಿನ ಮಹಿಳೆಯರಿಗೆ ಮುಕ್ತ ಅವಕಾಶ ಕಲ್ಪಿಸಿ ನೀಡಿದ್ದ ಸುಪ್ರಿಂಕೋರ್ಟ್‌ ತೀರ್ಪನ್ನು ಮರುಪರಿಶೀಲಿಸುವಂತೆ 45 ಕ್ಕೂ ಹೆಚ್ಚು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸುಪ್ರಿಂಕೋರ್ಟ್‌ಗೆ ಬಂದಿದ್ದವು. ಅವುಗಳ ವಿಚಾರಣೆ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

ನ.17ಕ್ಕೆ ಶಬರಿಮಲೆ ಯಾತ್ರೆ ಆರಂಭ; 10ರಿಂದ 50 ವರ್ಷದ 560 ಮಹಿಳೆಯರ ನೋಂದಣಿ

ಈ ಮರುಪರೀಶೀಲನೆ ಕೋರಿ ಬಂದ ಅರ್ಜಿಗಳನ್ನು ತ್ವರಿತವಾಗಿ ವಿಚಾರಣೆ ಮಾಡಲು ಈ ಹಿಂದೆ ಸುಪ್ರಿಂಕೋರ್ಟ್‌ ನಿರಾಕರಿಸಿತ್ತು. ಇಂದು ಅರ್ಜಿಗಳ ವಿಚಾರಣೆ ನಡೆಯುತ್ತಿದ್ದ ತೀರ್ಪಿನಲ್ಲಿ ತಿದ್ದುಪಡಿ ಮಾಡುತ್ತದೆಯೇ ಅಥವಾ ತೀರ್ಪನ್ನು ವಾಪಸ್ ಪಡೆಯುತ್ತದೆಯೋ ಕಾದು ನೋಡಬೇಕಿದೆ.

Supreme court will hear petitions challenging Shabarimala verdict

ಶಬರಿಮಲೆಗೆ ಮಹಿಳೆಯರ ಪ್ರವೇಶ: ಸುಪ್ರೀಂ ತೀರ್ಪಿನ ಮುಖ್ಯಾಂಶ, ಚಿತ್ರ ಮಾಹಿತಿ

ಇಂದಿನ ಮರುಪರೀಶಲನಾ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ಆರ್‌ಎಫ್‌ ನಾರಿಮನ್, ಎ.ಎಂ.ಖಾನ್ವಿಲ್ಕರ್, ಚಂದ್ರಚೂಡ್, ಮಲ್ಹೋತ್ರಾ ಇಂದು ನಡೆಸಲಿದ್ದಾರೆ.

English summary
Supreme court will hear petitions challenging Shabarimala Verdict today. 48 petitions were submitted to the supreme court challenging the Sabarimala verdict.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X